Showing 20 of 19289 articles • Page 525 of 965
ಕುನ್ನಗಳ್ಳಿ ಗ್ರಾಮದ ಆರ್ಟಿಐ ಕಾರ್ಯಕರ್ತ ಲಿಂಗರಾಜು ಅವರು ಎರಡು ಸುಳ್ಳು ಜಾತಿ ತಾರತಮ್ಯ ಪ್ರಕರಣಗಳನ್ನು ದಾಖಲಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದ 50,000 ರೂ.ಗಳ ಪರಿಹಾರವನ್ನು ಹಿಂದಿರುಗಿಸಿದ್ದಾರೆ.
ಹೊಸನಗರದಲ್ಲಿ ಚಿಟ್ಟನಹಳ್ಳಿ ರಸ್ತೆ ಮತ್ತು ಮಲ್ಲಪ್ಪನಹಳ್ಳಿ ರಸ್ತೆ ಬಳಿ ಹೇಮಾವತಿ ನಾಲೆಯ ಸ್ಥಿತಿ ಹದಗೆಟ್ಟಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕಾಲುವೆಯ ಡೆಕ್ ಮತ್ತು ತಡೆಗೋಡೆ ಶಿಥಿಲಾವಸ್ಥೆಯಲ್ಲಿದ್ದು, ಕುಸಿಯುವ ಅಪಾಯವಿದೆ ಎಂದು ವರದಿಯಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಅಧಿವೇಶನದಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಡಸ್ವಾಮಿ ತಿಳಿಸಿದರು.
ಕೆಆರ್ಎಸ್ ಬೃಂದಾವನ ಬೋಟ್ ರೈಡ್ ಸೆಂಟರ್ನಲ್ಲಿ ಕಳೆದ 15 ದಿನಗಳಿಂದ ನೀರಿನ ಸೋರಿಕೆಯಿಂದಾಗಿ ದೋಣಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿರುವ ನಂದಿ ವಿಗ್ರಹಕ್ಕೆ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ನಗರದ ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ.
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಜನಮನ್ನಣೆ ಪಡೆದಿದ್ದ ಡಿ.ಆರ್.ರಾಜು ಅವರು ಹೃದಯಾಘಾತಕ್ಕೆ ತುತ್ತಾಗಿ ಮೃತರಾಗಿದ್ದು ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ವಿಮ್ಮಿಂಗ್ ಪೂಲ್ ನಲ್ಲಿ ಮೂವರು ಯುವತಿಯರು ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ.
ಹಾಡು ಹಗಲೇ ಭಿಕ್ಷಾಟನೆ ಮಾಡುವ ಮಹಿಳೆಯೊಬ್ಬಳು ತನ್ನೊಂದಿಗೆ ಭಿಕ್ಷೆ ಬೇಡಲು ಬಂದಿದ್ದ ಮತ್ತೊಬ್ಬ ಭಿಕ್ಷುಕಿಯ ಮಗುವನ್ನೇ ಅಪಹರಣ ಮಾಡಿದ ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ 100 ಲಿವರ್ ಕಸಿಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಎನ್.ಜಿ.ಭರತೀಶ ರೆಡ್ಡಿ ತಿಳಿಸಿದರು.
ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಐದು ಮಂದಿಯನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿ, ಮಾಂಸ, ಮೂರು ಬೈಕ್, ಬಂದೂಕು ಮತ್ತು ಕತ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಲು ಪಂಪಾದಿಂದ ನಿಲಕ್ಕಲ್ಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.
ವಕ್ಫ್ ಆಸ್ತಿ ವಿವಾದದ ವಿರುದ್ಧ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಒಟ್ಟಾಗಿ ಹೋರಾಟ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ವಪಕ್ಷದ ನಾಯಕರಿಗೆ ಸಲಹೆ ನೀಡಿದರು.
ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕನೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಔರಾದ್ ಗ್ರಾಮದ ಸಮೀಪ ನಡೆದಿದೆ.
ಉದ್ಯಮಿಯೊಬ್ಬರು ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.