Showing 20 of 19289 articles • Page 532 of 965
ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಕ್ಕಳಲ್ಲಿ ಕೃಷಿಯ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಯೊಂದು ತನ್ನ ಆಟದ ಮೈದಾನದಲ್ಲೇ ಭತ್ತದ ಕೃಷಿ ಮಾಡಿ ಸೈ ಎನಿಸಿಕೊಂಡಿದೆ.
ನೋಡಲು ಆಕರ್ಷಕವಾಗಿವೆ ಎಂಬ ಕಾರಣಕ್ಕೆ ವಿವಿಧ ಲೋಹಗಳಿಂದ ತಯಾರಿಸಲ್ಪಟ್ಟ ಆಭರಣಗಳನ್ನು ಧರಿಸುವ ಮುನ್ನ ಅದು ನಮ್ಮ ತ್ವಚೆಗೆ ಹೊಂದಿಕೊಳ್ಳುತ್ತದೆಯಾ ಎಂಬುದನ್ನು ಮಹಿಳೆಯರು ಗಮನಿಸುವುದು ಬಹುಮುಖ್ಯವಾಗಿದೆ.
ಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ.
ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು.
ಇಲ್ಲಿನ ಹೊಳಲು ಗ್ರಾಮದ ಶ್ರೀ ತಾಂಡವೇಶ್ವರ ದೇವಸ್ಥಾನದಲ್ಲಿ ಎರಡನೇ ಕಾರ್ತಿಕ ಸೋಮವಾರ ಪ್ರಯುಕ್ತ ಶ್ರೀ ತಾಂಡವೇಶ್ವರಸ್ವಾಮಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಿ, ಬೆಳಗ್ಗೆಯಿಂದ ಕ್ಷೀರಾಭಿಷೇಕ, ರುದ್ರಾಭಿಷೇಕ, ಕುಂಕುಮಾರ್ಚನೆ ಹಾಗೂ ದೇವಸ್ಥಾನದ ಒಳಗಡೆ ಶ್ರೀಪಾರ್ವತಿ ದೇವಿ, ನಾಗರಕಲ್ಲು, ಶ್ರೀಲಕ್ಷ್ಮಿವೆಂಕಟೇಶ್ವರ ದೇವರುಗಳಿಗೆ ವಿಶೇಷ ಪೂಜೆಯನ್ನ ನೆರವೇರಿಸಲಾಯಿತು.
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ನ.13 ರಂದು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ತುಳು ಭವನದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ.
ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ವರುಣಾ ಕ್ಷೇತ್ರಕ್ಕೆ ಸೇರುವ ನಾಡನಹಳ್ಳಿ ಗ್ರಾಮದ ಪ್ರತಿಭಾನ್ವಿತೆ ಎಂ.ಎಲ್ ಚೈತ್ರರವರು ಮಿಂಚಿ ಎರಡನೇ ಸ್ಥಾನ ಪಡೆದಿದ್ದಾರೆ.
ವೀರರಾಣಿ ಒನಕೆ ಓಬವ್ವ ಅವರ ಸಮಯ ಪ್ರಜ್ಞೆ ಹಾಗೂ ಅವರ ಉತ್ತಮ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಹೇಳಿದರು.
ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಬಂಟ್ಸ್ ಹಾಸ್ಟೆಲ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಮಂಗಳೂರು ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ 14 ರಂದು ಗುರುವಾರ ಸಂಜೆ ೩ ಗಂಟೆಗೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮನೆಯೊಂದರ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜನ್ನು ಪುಡಿಗೈದ ಘಟನೆ ಸೋಮವಾರ ನಡೆದಿದೆ.
“ಶಕ್ತಿ ಪಿಯು ಕಾಲೇಜು, ವಾಣಿಜ್ಯ ವಿಭಾಗವು 8 ನವೆಂಬರ್ 2024 ರಂದು ಮಧ್ಯಾಹ್ನ 2 ಗಂಟೆಗೆ ಸ್ಟಾಕ್ ಮಾರುಕಟ್ಟೆಯ ಮೂಲಭೂತ ವಿಷಯಗಳ ಕುರಿತು ಸಂವಾದಾತ್ಮಕ ಅಧಿವೇಶನವನ್ನು ಆಯೋಜಿಸಿತ್ತು.
ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.
ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ.
ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ತಾಗಿದೆಯೆಂದು ಯುವಕರ ತಂಡವೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರ ಎದುರಲ್ಲಿ ಭೀತಿ ಸೃಷ್ಟಿಸಿದ ಘಟನೆ ವಾಮಂಜೂರಿನಲ್ಲಿ ನಡೆದಿದ್ದು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿ. (ಎಎಎಚ್ಎಲ್) ನಿರ್ವಹಿಸುವ ಮಂಗಳೂರು ವಿಮಾನ ನಿಲ್ದಾಣವು ನ. 9ರಂದು ಅತೀ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ “ನೇತ್ರಾವತಿ- ಫಲ್ಗುಣಿ’ ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ ಸಾಧ್ಯತೆಯಿದೆ.