Showing 20 of 20687 articles • Page 576 of 1035
ಇವತ್ತು ಸರ್ಕಾರಿ ಕಚೇರಿಗಳಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗಲ್ಲ. ಹುಟ್ಟಿದ ಮಗುವಿನಿಂದ ಹಿಡಿದು ಸಾಯುವ ವೃದ್ಧರ ಪ್ರಮಾಣ ಪತ್ರ ಪಡೆಯಲು ಲಂಚ ನೀಡುವಂತಾಗಿದೆ.
ಚಳಿ, ಮಳೆ ಎನ್ನದೆ ಮುಂಜಾನೆಯೇ ಮನೆಬಿಟ್ಟು ಬೀದಿಗೆ ಬಂದು ಕಸ ತೆಗೆದು ಬೀದಿಗಳನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ಕುಟುಂಬಕ್ಕೆ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಂಬಳಿಯನ್ನು ವಿತರಿಸಲಾಯಿತು.
ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕದಿಂದ ಸುದ್ದಿಗೋಷ್ಠಿ ನಡೆಸಿದರು. ಮುಡಾ ಪ್ರಕರಣ ಇತ್ತೀಚಿನ ದಿನಗಳಲ್ಲಿ ಜನರಿಗೆ ತಿಳಿದಿದೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಡೆದ 14 ನಿವೇಶನ ವಾಪಸ್ ನೀಡಿದ್ದಾರೆ.
ಕೆಲಸದ ನಿಮಿತ್ತ ಥೈಲ್ಯಾಂಡಿನಲ್ಲಿ ನೆಲೆಸಿದ್ದ ಮಂಗಳೂರಿನ ಯುವಕನಿಗೆ ಅಲ್ಲಿನ ಯುವತಿ ಜೊತೆಗೆ ಪ್ರೇಮಾಂಕುರವಾಗಿದ್ದು ಡಿ.5ರಂದು ತುಳುನಾಡಿನ ಸಂಪ್ರದಾಯದಲ್ಲಿಯೇ ಮಂಗಳಾದೇವಿ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಮರಳೂರು-ಗೊದ್ದನಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಸಂಘ
ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ನವೋದಯ ಶಿಕ್ಷಣ ಸಂಸ್ಥೆಗಳಿಗೆ ಹೊಸ ಶಾಖೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾದ ಪರಿಣಾಮ ತರಕಾರಿಗಳ ಬೆಲೆ ಗಗನಕ್ಕೇರಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಚೆನ್ನೈನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬೆಳೆ ಹಾನಿಯಾಗುವುದರ ಜೊತೆಗೆ ಇಳುವರಿ ಕಡಿಮೆಯಾಗಿದೆ.
ನಗರದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಗೇಮಿಂಗ್ ಆಪ್ನಲ್ಲಿ ಕೋಟಿ ಕೋಟಿ ಹಣ ಕಳೆದುಕೊಂಡು, ಆಪ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಇಲ್ಲಿನ ಚಿತ್ರಮಂದಿರದಲ್ಲಿ ‘ಪುಷ್ಪಾ 2: ದಿ ರೂಲ್’ ಸಿನಿಮಾ ಪ್ರದರ್ಶನದ ವೇಳೆ ಉಸಿರುಗಟ್ಟಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಶುಕ್ರವಾರ ₹ 25 ಲಕ್ಷ ನೆರವು ಘೋಷಿಸಿದ್ದಾರೆ.
ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಮಣಿಪಾಲ ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಭಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.
ಕಾರೊಂದು ಕೆರೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಬೋಂಗೀರ್ ನಲ್ಲಿ ಶನಿವಾರ ಮುಂಜಾನೆ ನಡೆದಿದೆ. ಕಾರ್ ತನ್ನ ನಿಯಂತ್ರಣ ಕಳೆದುಕೊಂಡ ಪರಿಣಾಮ ಜಲಾಲ್ ಪುರ ಕೆರೆಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.
ನಟ ಶಿವರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಡರ್ ಗಳನ್ನು ಬಂಧನ
ಯದುನಂದನ್ ಎಂಬವರ ವಾಟ್ಸ್ಆ್ಯಪ್ಗೆ ಅಏಅಫ್ ಅಬ್ಬ ಅಏಅಫ್ ಎಂಬ ಫೈಲ್ ಬಂದಿತ್ತು. ಅವರು ಅದು ಸಾರಿಗೆ ಇಲಾಖೆಗೆ ಸಂಬಂಧಿಸಿ ಲಿಂಕ್ ಆಗಿರಬಹುದು ಎಂಬ ಕಾರಣಕ್ಕೆ ಅದನ್ನು ಡೌನ್ಲೋಡ್ ಮಾಡಿದ್ದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕಾಂ) ನಿಗದಿತ ಗಡುವಿನೊಳಗೆ ವಿದ್ಯುತ್ ಬಾಕಿ ಪಾವತಿಸಲು ವಿಫಲವಾದ ಗ್ರಾಹಕರಿಗೆ ಡಿಸೆಂಬರ್ 9 ರಂದು ಸಾಮೂಹಿಕ ವಿದ್ಯುತ್ ಕಡಿತ ಅಭಿಯಾನವನ್ನು ಘೋಷಿಸಿದೆ.
ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ.
ಅಪ್ಪ ಬೈಕ್ ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ವಿಕಾಸ್.ಆರ್ (20) ಎಂದು ಗುರುತಿಸಲಾಗಿದೆ.
ಇಡೀ ರಾಜ್ಯಾದ್ಯಂತ ಚಳಿಗಾಲದ ಮಧ್ಯೆಯೂ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾವು ತಿನ್ನುವ ಊಟ ಕಲಬೆರಕೆ, ಕುಡಿಯುವ ನೀರು ಕಲಬೆರಕೆ ಎನ್ನುವ ಸಂಗತಿಗಳ ನಡುವೆ ನಾವು ಸೇವನೆ ಮಾಡುವ ಗಾಳಿಯೂ ಕೆಲಬೆರಕೆ ಆಗುತ್ತಿದೆ ಎನ್ನುವ ವಿಚಾರ ಹೊರಬಿದ್ದಿದೆ.