Showing 20 of 21607 articles • Page 58 of 1081
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ.
ಉದಯೋನ್ಮುಖ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ಶಕೀಲ್ ನೂರಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು: ತಮಿಳುನಾಡಿನ ಪ್ರಮುಖ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಯು ತನ್ನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಗಸ್ಟ್ 10, ಸೋಮವಾರದಂದು ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಿತು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರೋ 14ನೇ ಆರೋಪಿ ಹಾಗೂ ದರ್ಶನ್ಗೆ 2003ರಿಂದಲೂ ಸ್ನೇಹಿತನಾಗಿರೋ ಪ್ರದೂಷ್ ಬಿಚ್ಚಿಟ್ಟೋ ಒಂದೊಂದೂ ಸಾಕ್ಷ್ಯಗಳು ಆಘಾತಕ್ಕೀಡಾಗುವಂತೆ ಮಾಡಿವೆ.
ಮಧ್ಯಾಹ್ನದ ಊಟ ಮುಗಿಸಿ ಕೈ ತೊಳೆಯಲು ಹೋದಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನಡೆದಿದೆ.
ನಗರದ ಕಪಿಲ ನದಿ ಮೈದುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಸೋಮವಾರ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮಾಜಿ ತಾ.ಪಂ ಸದಸ್ಯ ಹಾಗೂ ಹಾರೋಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಆರ್ ಸುರೇಶ್ ಕುಮಾರ್ ಅವರ 47ನೇ ವರ್ಷದ ಹುಟ್ಟುಹಬ್ಬವನ್ನು ನಂಜನಗೂಡಿನಲ್ಲಿ ಹೆಚ್.ಆರ್ ಸುರೇಶ್ ಕುಮಾರ್ ಸ್ನೇಹ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕನ್ನಡ ಚಲನಚಿತ್ರದ ಹಾಸ್ಯ ನಟ ಚಿಕ್ಕಣ್ಣ ಮತ್ತು ತೆಲುಗು ನಟ ಸುನಿಲ್ ನಾಯಕ ನಟರಾಗಿ ನಟಿಸುತ್ತಿರುವ ಜೋಡೆತ್ತು ಸಿನಿಮಾ ಕ್ಲೈಮಾಕ್ಸ್ ಹಂತಕ್ಕೆ ತಲುಪಿ ಚಿತ್ರೀಕರಣ ಇಂದು ಮುಕ್ತಾಯವಾದ ಹಿನ್ನೆಲೆ, ಚಿತ್ರದ ಯಶಸ್ಸಿಗೆ ತೆಲುಗು ನಟ ಸುನೀಲ್ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ.
ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ಸುದೀರ್ಘ ಆರೋಗ್ಯಕ್ಕೆ ಪೂರಕ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಂದರ್ಯ ಚಿಕಿತ್ಸಾ ಸಂಸ್ಥೆಯಾಗಿರುವ ಆರೋಗ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ‘ಡೋಲ್ಚೆ ಎಸ್ಥೆಟಿಕಾ‘ ಕರ್ನಾಟಕದ ತನ್ನ ಮೊದಲ ಶಾಖೆಯನ್ನು ಮಂಗಳೂರಿನಲ್ಲಿ ಆರಂಭಿಸಲಿದೆ. ಆ.13ರಂದು ಬೆಳಗ್ಗೆ 10.30ಕ್ಕೆ ಪದವಿನಂಗಡಿಯ ವಿಶ್ವಗೀತಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ.
ತೊಕ್ಕೊಟ್ಟು ವಿನಮ್ರ ಬಾರ್ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ ಭರೋ’, ರಸ್ತೆ ತಡೆ ಹಾಗೂ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯದ ಹೋಟೆಲ್ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಮಹತ್ವದ ಕ್ರಮ ಕೈಗೊಳ್ಳಲಿದೆ.
ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವ್ಯವಹಾರದ ವೈಮನಸ್ಸಿನಿಂದ ನಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ತಿಳಿಸಿದರು.
ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು.
ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಕಟಪಾಡಿ–ಶಿರ್ವ ಮುಖ್ಯ ರಸ್ತೆಯ ಶಂಕರಪುರ ಸಾಲ್ಮರ ಬಳಿ ಪೊದೆಗಳಿಂದ ಆವೃತವಾಗಿದ್ದ ಬಾವಿಗೆ ಬಿದ್ದು ಐದು ಕಾಡುಹಂದಿಗಳು ಮೃತಪಟ್ಟ ಘಟನೆ ನಡೆದಿದೆ.