Showing 20 of 20687 articles • Page 592 of 1035
ಗ್ರಾಮ ಪಂಚಾಯಿತಿ ಉಪ ಚುನಾವಣೆ ಯ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಸ್ಥಳಗಳಲ್ಲಿ ಸಂತೆ ಜಾತ್ರೆ, ಮದ್ಯ ಮಾರಾಟವನ್ನು ನಿಷೇಧಿಸಿ ನಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆಯಿತು.
ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.
ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.
ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಮತ್ತೆ ಏರಿಕೆ ಕಡೆ ಮುಖ ಮಾಡಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರುಮುಖದತ್ತ ಸಾಗುತ್ತಿದ್ದು ಡಬ್ಬಲ್ ಚೋಲ್ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಯಾಗಿದೆ.
ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ.
ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ಬೃಹತ್ ಧರಣಿ ಸತ್ಯಾಗ್ರಹವನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ಬೆಂಗಳೂರಿನಲ್ಲಿ ನಡೆದ ೩ನೇ ಆವೃತ್ತಿಯ ರಾಜ್ಯ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿ ಅಜಯ್ ಪೃಥ್ವಿರಾಜ್ ಪಾಲ್ಗೊಂಡು ವಿಜೇತರಾಗಿ ಗಮನಸೆಳೆದಿದ್ದರಾರೆ.
ಒಂದೆಡೆ ಹೊಟ್ಟೆಗೆ ಅನ್ನವಿಲ್ಲದೆ ತುತ್ತು ಕೂಳಿಗೂ ಪರದಾಡುವ ಜನರ ನಡುವೆ ಆಹಾರವನ್ನು ತೊಟ್ಟಿಗೆ ಎಸೆಯುವವರೂ ಇದ್ದಾರೆ.
ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಹೋಂ ನರ್ಸ್ ಅನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ರೈತ ವಿರೋಧಿ ನೀತಿಗಳನ್ನು ವಾಪಸ್ಸು ಪಡೆಯುತ್ತೇನೆ ಎಂದು ಹೇಳಿ ಇನ್ನೂ ವಾಪಸ್ಸು ಪಡೆಯದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರಾಜ್ಯದ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ರಾಲಿಯನ್ನು ನ.26 ಮೈಸೂರಿನಲ್ಲಿ ಟೌನ್ ಹಾಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಪಿ.ಐ ಎಂ ಎಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಡಳ್ಳಿ ಜವರಯ್ಯ ತಿಳಿಸಿದರು.
ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “Online Live NEET/JEE/CET” ತರಗತಿಗಳ ತರಬೇತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಉಪ ಚುನಾವಣೆಯ ಫಲಿತಾಂಶ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು.
ಐಡಿಯಲ್ ಜಾವಾ ರೋಟರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಎಂ.ಎಲ್.ಅಜಯ್ ಪೃಥ್ವಿರಾಜ್ ಇತ್ತೀಚೆಗೆ ಬೆಂಗಳೂರಿನಲ್ಲಿ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಿನಿ ಒಲಿಂಪಿಕ್ಸ್ ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ನಕ್ಸಲ್ ವಿಕ್ರಂ ಗೌಡನನ್ನು ನಕಲಿ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿಲ್ಲ, ಇದು ಆರೋಪ ಸುಳ್ಳು. ನಕ್ಸಲರು ಮತ್ತು ಎಎನ್ಎಫ್ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದ್ದಾರೆ.