Showing 20 of 20687 articles • Page 607 of 1035
ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾವನ್ನು ನಿಷೇಧಿಸಲು ಮುಂದಾಗಿದ್ದೇವೆ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿನಿ, 9ನೇ ತರಗತಿಯ ನಿಹಾರಿಕಾ ಎಂ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ),
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್ ಸಿಎಸ್ ಸಿ) ಸಗಟು ಅಂಗಡಿ ವ್ಯವಸ್ಥಾಪಕ ಆರ್.ರವಿಕುಮಾರ್ (59) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಘಟಕವಾದ ಮಿಲಾಗ್ರಿಸ್ ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ನ ಬಿಎಸ್ಸಿ ನರ್ಸಿಂಗ್ ಕೋರ್ಸ್ ನ ಉದ್ಘಾಟನೆಯು ನವೆಂಬರ್ 4 ಸೋಮವಾರದಂದು ನಡೆಯಿತು.
ಫ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಪ್ರಾದೇಶಿಕ ಸಮಿತಿಯಿಂದ ಪ್ರಥಮ ಬಾರಿ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯುತ್ತಿದ್ದು,
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಹಣಕಾಸು ದುರುಪಯೋಗ ಮತ್ತು ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕಿನ ಮೂವರು ಶಾಖಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ.
ಬಿಗ್ ಬಾಸ್ ಕನ್ನಡ-11 ರ ಮೂಲಕ ಗಮನ ಸೆಳೆದಿದ್ದ ವಕೀಲ ಜಗದೀಶ್ ಅವರು ಮೌನದ ನಂತರ ತಮ್ಮ ಹಳೆಯ ಶೈಲಿಗೆ ಮರಳಿದ್ದಾರೆ. ದರ್ಶನ್ ಕೊಲೆ ಪ್ರಕರಣದ ಬಗ್ಗೆ ಈ ಹಿಂದೆ ಹಲವು ಬಾರಿ ಮಾತನಾಡಿದ್ದ ಜಗದೀಶ್ ಈಗ ದರ್ಶನ್ ಅಭಿಮಾನಿಯೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಕೇಂದ್ರ ಸರ್ಕಾರದ ದರ ನಿಗದಿ ಸಮಿತಿಯ ಶಿಫಾರಸಿನಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಿಸಲು ಮುಂದಾಗಿದೆ.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಹಾಲ್ನಲ್ಲಿ ನವೆಂಬರ್ 6, 2024 ರಂದು ಆಯೋಜಿಸಿತು.
ಎಡನೀರು ಮಠದ ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರನ್ನು ಕೇರಳದ ಕಾಸರಗೋಡು ಜಿಲ್ಲೆಯ ಬೋವಿಕಾನ ಎಂಬಲ್ಲಿ ತಡೆಯೊಡ್ಡಿ ದಾಳಿ ನಡೆಸಿದ ಪ್ರಕರಣ ನಡೆದಿದೆ.
ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ಆಚರಿಸಲಾಯಿತು.
ಕುಡಿದ ಮತ್ತಿನಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಚಿರತೆಯ ಮರಿಯೊಂದು ಕಾಣಿಸಿಕೊಂಡಿದೆ. ಇಲ್ಲಿನ ಕಲ್ಯ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪ ಚಿರತೆಯ ಮರಿ ಅವಿತು ಕುಳಿತಿತ್ತು.
ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಕರಾವಳಿ ಮರಾಟಿ ಸಮಾವೇಶವನ್ನು ನ.9ಮತ್ತು 10ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾವಳಿ ಮಾರಾಟಿ ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ್ ತಿಳಿಸಿದರು.
ಸಮಾಜದ ಏಳಿಗೆಗಾಗಿ ನಿಸ್ವಾರ್ಥ ಸೇವೆಗೈದ ಬಿ.ಎನ್.,ಮೂರ್ತಿ ಅವರ ಕೆಲಸ ಕಾರ್ಯಗಳು ಶ್ಲಾಘನೀಯ. ಅವರು 2010ರಲ್ಲಿ ಪುತ್ತೂರಿನಲ್ಲಿ ಅಂಬಿಕಾ ಪದವಿ ಪೂರ್ವ ಕಾಲೇಜು ಆರಂಭಿಸುವ ಸಂದರ್ಭದಲ್ಲಿ ಎದುರಾದ ಅಡ್ಡಿ ಆತಂಕಗಳನ್ನು ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತು ಸಂಸ್ಥೆಯ ಸರ್ವತೋಮುಖ ಏಳಿಗೆಗಾಗಿ ಪರಿಶ್ರಮಿಸಿದವರು.
ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳು ಗೋದಾಮು ಮತ್ತು ದಕ್ಷಿಣ ವಲಯದ 12 ಅಂಗಡಿಗಳಿಂದ 2,200 ಕೆಜಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದ್ದು, ಒಟ್ಟು 1.40 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.
ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.