Showing 20 of 20687 articles • Page 612 of 1035
ದೀಪಾವಳಿ ಹಬ್ಬದ ಪ್ರಯುಕ್ತ ಆರಂಭಿಸಿದ ಲೋಕಮಾನ್ಯ ತಿಲಕ್ ಟಿ (ಮುಂಬೈ)-ಕೊಚುವೆಲಿ (ತಿರುವನಂತಪುರ) ಸಾಪ್ತಾಹಿಕ ಸ್ಪೆಷಲ್ (01463) ರೈಲನ್ನು ನ.21ರ ತನಕ ಹಾಗೂ ಕೊಚುವೆಲಿ-ಲೋಕಮಾನ್ಯ ತಿಲಕ್ (ಟಿ) ಸಾಪ್ತಾಹಿಕ ಸ್ಪೆಷಲ್ (01464) ರೈಲನ್ನು ನವೆಂಬರ್ 23 ತನಕ ವಿಸ್ತರಿಸಲಾಗಿದೆ.
ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ.
ಹೊಸ ಟಿಶರ್ಟ್, ಚಡ್ಡಿ ಧರಿಸಿರುವ ಬೀದಿ ಶ್ವಾನವೊಂದು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುವುದು ಗಮನಸೆಳೆಯಿತು. ಒಂದಿಷ್ಟು ಜನರು ಫೋಟೋ ಕ್ಲಿಕ್ಕಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕುರಿಯ ಗ್ರಾಮದ ಇಡಬೆಟ್ಟು ಎಂಬ ಪ್ರದೇಶದಲ್ಲಿ ಮೆಸ್ಕಾಂ ಗುತ್ತಿಗೆದಾರರು ಹಾಕಿದ ಕಂಬ ಎರಡನೇ ದಿನದಲ್ಲಿ ಧರೆಗೆ ಉರುಳಿದೆ.
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಜಕ್ಕೂರು ಏರೋ ಡ್ರಮ್ ನಲ್ಲಿ ಟೇಕ್ ಆಫ್ ಆಗುವ ವೇಳೆ ಬಿಟ್ಟಿದ್ದ ವಿಮಾನವನ್ನು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ತಿರುಗಿಸಿದ ಆರೋಪದ ಮೇಲೆ ಪೈಲಟ್ ಆಕಾಶ್ ಜೈಸ್ವಾಲ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು.
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು.
ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಆಸ್ತಿ ದಾಖಲೆಗಾಗಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 32 ಜನರನ್ನು ವಶಕ್ಕೆ ಪಡೆದಿದ್ದಾರೆ.
ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ದಂಪತಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪರಿಣಾಮ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಮುನ್ನಾದಿನದಂದು ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಗುತ್ತೂರು ಗ್ರಾಮದ ಬಳಿ ನಡೆದಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ ಎಂಟಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ₹ 25 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಗಂಗಾಧರಯ್ಯ ಎಂ.ಆರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ಪೊಳಲಿಯ ಪುರಲ್ದಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ತಂಡದ ವತಿಯಿಂದ ಐದನೇ ವರ್ಷದ ಮೂರು ದಿನಗಳ ದೀಪೋತ್ಸವ ಮತ್ತು ಕುಣಿತ ಭಜನಾ ಕಾರ್ಯಕ್ರಮದ ಮೊದಲ ದಿನದ ಕಾರ್ಯಕ್ರಮ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೆರವೇರಿತು.
ಪಪ್ಪಾಯಿ ಬೀಜಗಳು ವಿಟಮಿನ್ ಸಿ ಮತ್ತು ಆಲ್ಕಲಾಯ್ಡ್ಗಳು, ಫ್ಲೇವನಾಯ್ಡ್ಗಳು ಮತ್ತು ಪಾಲಿಫಿನಾಲ್ಗಳಂತಹ ಇತರ ಸಂಯುಕ್ತಗಳಲ್ಲಿ ಸಮೃದ್ಧವಾಗಿವೆ.
ತಾಯಿ ಸಮುದಾಯವು 42 ಸಾವಿರ ತಾಯಿಯರನ್ನು ಹೊಂದಿರುವ ನೋಂದಾಯಿತ ಟ್ರಸ್ಟ್ ಆಗಿದ್ದು, ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಬೊಳ್ಪುದಾ ಗೌಜಿ- ಸೀಸನ್ 3 ಎಂಬ ಕಾರ್ಯಕ್ರಮವು ಸಂತೋಷ, ಏಕತೆ, ಮತ್ತು ಸಮಾವೇಶವನ್ನು ಸಮುದಾಯದ ಒಳಗಿನಲ್ಲಿ ಹರಡುವ ಉದ್ದೇಶವನ್ನು ಹೊಂದಿತ್ತು.
ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಿಂದೂ ಸಂಘಟನೆಗಳು ಮತ್ತೆ ಧರ್ಮ ದಂಗಲ್ ನಡೆಸೊಕೆ ಸಜ್ಜುಗೊಂಡಿದೆ.
ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಚೇತನ ಮಕ್ಕಳಿಂದ ದೀಪಾವಳಿಗೆ ಹಣತೆ ತಯಾರಿಸಿದ್ದಾರೆ.
ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರದ ಗಮನ ಸೆಳೆಯುವಲ್ಲಿ ಉಡುಪಿ ಕಾಂಗ್ರೆಸ್ ನಾಯಕರು ವಿಫಲವಾಗಿದ್ದಾರೆ ಆರೋಪಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ‘ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ’ ಹೆಸರಿನಡಿ ವಿಶಿಷ್ಟ ಪ್ರತಿಭಟನೆಯನ್ನು ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆಸಲಾಯಿತು.
ರಂಗಭೂಮಿ ಉಡುಪಿ ಇದರ 60ರ ಸಂಭ್ರಮದ ಉದ್ಘಾಟನಾ ಸಮಾರಂಭವು ನ. 3ರಂದು ಸಂಜೆ 4.30ಕ್ಕೆ ಉಡುಪಿ ಕುಂಜಿಬೆಟ್ಟಿನ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.