Showing 20 of 20687 articles • Page 613 of 1035
ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಸಾಕಷ್ಟು ಮುಂದಾಲೋಚನೆ ಇಟ್ಟುಕೊಂಡೆ ಪಂಚ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಗ್ಯಾರಂಟಿ ತಂದಿದ್ದೇವೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ದೇಶದೆಲ್ಲೆಡೆ ದೀಪಾವಳಿಯ ಸಂಭ್ರಮ ಈ ಸಂಭ್ರಮದ ಪ್ರಯುಕ್ತ ಮಂಗಳೂರು ಶಕ್ತಿ ನಗರದಲ್ಲಿ ಇರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನ ಆಚರಣೆ ಮಾಡಲಾಯಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಈ ಬಗ್ಗೆ ಜನಜಾಗೃತಿಯಾಗಬೇಕಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಜಾನ ಹೇಳಿದ್ದಾರೆ.
2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಪುರಸ್ಕೃತರ ವಿವರ ಈ ಕೆಳಕಂಡಂತಿದೆ.
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.
ರ್ನಾಟಕ ಸಂಘ ದುಬೈ ಅರ್ಪಿಸುವ 69ನೇ ಕರ್ನಾಟಕ ರಾಜ್ಯೋತ್ಸವ ದುಬೈ 2024ರ ಕಡಲಾಚೆಯಲ್ಲೊಬ್ಬ ಕನ್ನಡದ ಸಾಧಕರ ಕಾರ್ಯಕ್ರಮವು ನವೆಂಬರ್ ೧೦ ರಂದು ದುಬೈನಲ್ಲಿ ನಡೆಯಲಿದೆ.
ಸ್ಯಾಂಡೀಸ್ ಕಂಪನಿ ಪ್ರಾಯೋಜಕತ್ವದಲ್ಲಿ ಎರಡನೇ ವರ್ಷದ ಮಂಗಳೂರು ಯುವ ದಸರಾ-2024 ಸ್ಟಾರ್ ಮ್ಯೂಸಿಕಲ್ ನೈಟ್ ನ.2ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದೀಪಾವಳಿ ಸಂಭ್ರಮದೊಂದಿಗೆ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ರೂವಾರಿ, ಶಾಸಕ ಎ.ಉಮಾನಾಥ ಕೋಟ್ಯಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ನಿತ್ಯಾನಂದ ಸೇವಾಶ್ರಮ ಬಂದರು, ಮಂಗಳೂರು ಇಲ್ಲಿ ನಡೆಯಿತು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ, ಜಾನಪದ ಸಂಸ್ಕೃತಿ ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು ಅದನ್ನು ಉಳಿಸಿ ಪೋಷಿಸುವ ಅಗತ್ಯತೆ ಇದೆ ಎಂದು ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರ ಡೆನಿಸ್ ಡೆಸಾ ಹೇಳಿದರು.
ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು ಮಹಿಳೆ ಮಣ್ಣಿನಡಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಹೊಸ ಎತ್ತರಕ್ಕೆ ಹೋಗಿದೆ. ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ 8,133 ರೂ ತಲುಪಿದೆ.
ಮಂಗಳೂರಿನ ಮೀನುಗಾರಿಕೆ ಬಂದರಿನಲ್ಲಿ ಮೂರನೇ ಹಂತದ ವಿಸ್ತರಣೆಯ ಜೊತೆಗೆ ೧ ಮತ್ತು ೨ ಹಂತದ ಜೆಟ್ಟಿಯನ್ನು ಮೇಲ್ದರ್ಜೆಗೇರಿಸುವ 37.50 ಕೋಟಿ ರೂ. ವೆಚ್ಚದ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ.
ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಹೂಡ (ಬಿ) ಗ್ರಾಮದಲ್ಲಿ ನಡೆದಿದೆ.
ಕಿತ್ತಳೆ ರಸವು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದರಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ಪೋಷಕಾಂಶಗಳಿವೆ, ಇದು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ರಸ್ತೆ ಬದಿ ಸಿಗುವ ಮೊಮೋಸ್ ತಿಂದು ಮಹಿಳೆ ಸಾವನಪ್ಪಿ, 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ.
ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ.
ಮನೆ ಹಾಗೂ ಅಂಗನವಾಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಅಪರಾದ ತಂಡದ ಸಿಬ್ಬಂದಿಗಳು ಅ.೨೯ರಂದು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.