Showing 20 of 20697 articles • Page 621 of 1035
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕಾರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ’ ಸಮಾರೋಪ ಸಂಭ್ರಮವು ಅ. 27ರ ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ. ಸತೀಶ್ ಶೆಟ್ಟಿ ತಿಳಿಸಿದರು.
ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ವೇಳೆ ಸ್ವಾಮೀಜಿ, ವಿಹಿಂಪ ರಾಷ್ಟೀಯ ನಾಯಕರ ಎದುರಲ್ಲೇ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ
ಶಿಗ್ಗಾವಿ ಕ್ಷೇತ್ರದ ಟಿಕೆಟ್ ಅನ್ನು ಮುಸ್ಲಿಂ ಅಭ್ಯರ್ಥಿಗೆ ಮೀಸಲಿಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.
ಸೊರಲಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ವಾಂತಿ ಮತ್ತು ಅತಿಸಾರದಿಂದ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ 1,030 ಮನೆಗಳು ಜಲಾವೃತವಾಗಿದ್ದು, ನಗರದಾದ್ಯಂತ ನಿವಾಸಿಗಳು ಸಿಲುಕಿಕೊಂಡಿದ್ದಾರೆ.
ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಆಂಧ್ರಪ್ರದೇಶ ಮೂಲದ ಮುನಿರಾಜು ರೆಡ್ಡಿ ಮತ್ತು ಇತರರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶೂರ್ ನಿಂದ ಮುನ್ನಾರ್ ನ ಗಿರಿಧಾಮಕ್ಕೆ ಆನಂದದಾಯಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳ ಗುಂಪನ್ನು ಅಬಕಾರಿ ಅಧಿಕಾರಿಯೊಬ್ಬರು ಐದು ಗ್ರಾಂ ಗಾಂಜಾ ಮತ್ತು ಒಂದು ಗ್ರಾಂ ಹ್ಯಾಶಿಶ್ ಆಯಿಲ್ ಹೊಂದಿದ್ದಕ್ಕಾಗಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗಾಂಜಾ ಮತ್ತು ಹ್ಯಾಶಿಶ್ ಆಯಿಲ್ ಸಾಗಿಸುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ- ಮಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಆದರೆ ಹಬ್ಬ ಮುಗಿಸಿ ವಾಪಸ್ ಬೆಂಗಳೂರಿಗೆ ರೈಲಿನ ಸೇವೆ ಕಲ್ಪಿಸದೇ ಇರುವುದು ಪ್ರಯಾಣಿಕರಿಗೆ ಅನಾನುಕೂಲವಾಗಿದೆ.
ಬೆಂಗಳೂರಿನ ಪೂರ್ವ ಭಾಗದಲ್ಲಿರುವ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ರೂಟ್ ನಂಬರ್ 13 b ಕುಳೂರು ಕಾವೂರು ಬಸ್ ಚಾಲಕ ನಿರ್ವಾಹಕರು ಹಾಗೂ ಸಮಯ ಪರಿಪಾಲಕರು ವಾಟ್ಸ್ ಅಪ್ ಗ್ರೂಪ್ ಮಾಡಿಕೊಂಡಿದ್ದು ಸಮಾಜ ಮುಖಿ ಕಾರ್ಯದಲ್ಲಿ ತೊಡಗಿದ್ದು ಈ ಬಾರಿ ಹದಗೆಟ್ಟ ರಸ್ತೆಯನ್ನ ಶ್ರಮದಾನ ಮಾಡುವ ಮೂಲಕ ಮತ್ತೆ ಸುದ್ದಿ ಮಾಡಿದ್ದಾರೆ.
ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ ನಡೆಸಿದ್ದರು. ಪೇಟಾದ ಆಕ್ಷೇಪದ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಬೇಕೆಂದು ವಕೀಲರ ಮೂಲಕ ಅಶೋಕ್ ರೈ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಇ & ಎನ್ ಸಿ ಪಿಎಸ್ ಠಾಣಾ ಅ,ಕ್ರ 37/2019 ಕಲಂ : 8©, 20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸಲೀಂ @ ಮೊಹಮ್ಮದ್ ಸಲೀಂ ಪ್ರಾಯ 38 ವರ್ಷ ತಂದೆ-ಪಿ ಇಬ್ರಾಹಿಂ ವಾಸ-ಯು ಎಮ್ ಅಬ್ದುಲ್ಲಾ ಮಂಜಿಲ್ ಟಿಸಿ ರಸ್ತೆ ರಾಯಲ್ ಕ್ಯಾಟರಿಂಗ್ ಬಳಿ ಒಳಪೇಟೆ ಉಳ್ಳಾಲ ಮಂಗಳೂರು ಎಂಬಾತನನ್ನು 2019 ರಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತದ ನಂತರ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ಸ್ಪರ್ಧೋತ್ಸವದ ಅಂಗವಾಗಿ 22-10-2024 ರ ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ “ಸ್ಪರ್ಧೋತ್ಸವಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರಿ.
ಕರಾವಳಿಯಲ್ಲಿ ಡ್ರಗ್ಸ್ ಮಾಫಿಯಾ ಹಾವಳಿ ಹೆಚ್ಚಾಗುತ್ತಿದೆ, ಈ ಕುರಿತು ಈಗಾಗಲೇ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಬಂಡಾರಿ ಹೇಳಿಕೆ ನೀಡಿದ್ದಾರೆ.
ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ,
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ಉಪಕ್ರಮವಾದ ಏಕಲವ್ಯ ಮಾದರಿ ವಸತಿ ಶಾಲೆ (ಇಎಂಆರ್ಎಸ್) ಹೊಂದಿರುವ ಜಿಲ್ಲೆಗಳ ಪಟ್ಟಿಗೆ ಮಂಗಳೂರು ಸೇರಲು ಸಜ್ಜಾಗಿದೆ.
ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್, ಮಧ್ಯಪ್ರದೇಶ ಇಲ್ಲಿ ನಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಭಾಗವಹಿಸಿ ತೃತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ.