Showing 20 of 20697 articles • Page 628 of 1035
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ಪಟ್ಟಿ ಬಹಳ ದೊಡ್ಡದಾಗಿದೆ. ಯಾರ ಯಾರ ಹೆಸರಿದೆ ಎಂಬುವುದು ಸದ್ಯದಲ್ಲೇ ಬಹಿರಂಗ ಆಗಲಿದೆ.
ಸಂಡೂರು, ಶಿಗ್ಗಾಂವಿ, ಚೆನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ.
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇಟ್ಟಿದೆ.
ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19 ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ 110 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ನೀರಿನ ಯೋಜನೆಯ ಐದನೇ ಹಂತ ಆರಂಭಕ್ಕೆ ಸಿದ್ಧವಾಗಿದೆ.
ಹಾಸ್ಯ ಪಾತ್ರಗಳ ಮೂಲಕ ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅತುಲ್ ಪರ್ಚುರೆ ಅವರು ನಿಧನರಾಗಿದ್ದಾರೆ.
ನಕಲಿ ಪಾಸ್ಪೋರ್ಟ್ ಬಳಸಿ ದುಬೈಗೆ ಪ್ರಯಾಣಿಸಲು ಯತ್ನಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಮೊಹಮ್ಮದ್ ಮಾಣಿಕ್ ಹುಸೇನ್ ಎಂಬಾತನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕಾಗಿ ಎರಡು ತಿಂಗಳ ಹಿಂದೆ ಮೈಸೂರಿಗೆ ಆಗಮಿಸಿದ್ದ ಆನೆಗಳು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸಿ ತಮ್ಮ ತಮ್ಮ ಶಿಬಿರಗಳಿಗೆ ಮರಳಿವೆ.
ನಗರದಲ್ಲಿ ಬೆಳಿಗ್ಗೆಯಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಕೆಲಸ ಮತ್ತು ಕಾಲೇಜಿಗೆ ಹೋಗುವ ಜನರಿಗೆ ತೀವ್ರ ತೊಂದರೆಯಾಗಿದೆ.
21 ವರ್ಷದ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರವೆಸಗಿದ 61 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕೋಟಾದಲ್ಲಿ 61 ವರ್ಷದ ರಮಾನಂದ ಐತಾಳ್ ಎಂಬ ವ್ಯಕ್ತಿ 21 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿರಪರಾಧಿ ಎಂದು ಸಾಬೀತುಪಡಿಸಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಸರ್ಕಾರಿ ಎಂಜಿನಿಯರಿಂಗ್ ಘಟಕ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸೀಟು ಹಂಚಿಕೆಗೆ ಪಾವತಿ ಕೋಟಾ ವ್ಯವಸ್ಥೆಯನ್ನು ಪರಿಚಯಿಸಿರುವುದು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಪದುವಾ ಜಂಕ್ಷನ್ ಬಳಿ ನೆಟ್ಟು ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕೋರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.
ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಸರಾ ಶೋಭಾಯಾತ್ರೆ ವೇಳೆ ವಿದ್ಯಾರ್ಥಿಗಳ ಹೊಡೆದಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
‘ನಮ್ಮ ಮೆಟ್ರೊ’ ಹಂತ 3ಎ ಹೆಬ್ಬಾಳ-ಸರ್ಜಾಪುರ ಕಾರಿಡಾರ್ ನಿರ್ಮಾಣಕ್ಕಾಗಿ ಬಿಎಂಆರ್ ಸಿಎಲ್ ಸಲ್ಲಿಸಿದ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ನಗರಾಭಿವೃದ್ಧಿ ಇಲಾಖೆ ಪರಿಶೀಲನೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಿದೆ. ಹಣಕಾಸು ಇಲಾಖೆ ಪ್ರಸ್ತುತ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ.