Showing 20 of 20705 articles • Page 629 of 1036
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿರಪರಾಧಿ ಎಂದು ಸಾಬೀತುಪಡಿಸಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಸರ್ಕಾರಿ ಎಂಜಿನಿಯರಿಂಗ್ ಘಟಕ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸೀಟು ಹಂಚಿಕೆಗೆ ಪಾವತಿ ಕೋಟಾ ವ್ಯವಸ್ಥೆಯನ್ನು ಪರಿಚಯಿಸಿರುವುದು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಪದುವಾ ಜಂಕ್ಷನ್ ಬಳಿ ನೆಟ್ಟು ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕೋರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.
ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಸರಾ ಶೋಭಾಯಾತ್ರೆ ವೇಳೆ ವಿದ್ಯಾರ್ಥಿಗಳ ಹೊಡೆದಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
‘ನಮ್ಮ ಮೆಟ್ರೊ’ ಹಂತ 3ಎ ಹೆಬ್ಬಾಳ-ಸರ್ಜಾಪುರ ಕಾರಿಡಾರ್ ನಿರ್ಮಾಣಕ್ಕಾಗಿ ಬಿಎಂಆರ್ ಸಿಎಲ್ ಸಲ್ಲಿಸಿದ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ನಗರಾಭಿವೃದ್ಧಿ ಇಲಾಖೆ ಪರಿಶೀಲನೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಿದೆ. ಹಣಕಾಸು ಇಲಾಖೆ ಪ್ರಸ್ತುತ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ.
ಇಬ್ಬರು ಚಿಕ್ಕ ಮಕ್ಕಳು ಮತ್ತು ಅವರ ಪೋಷಕರು ಸೇರಿದಂತೆ ನಾಲ್ವರ ಶವಗಳು ಸೋಮವಾರ ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಬಳಿಯ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಪತ್ತೆಯಾಗಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳುಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು,ಕೊನೆಗೂ ಮಂಗಳವಾರ ( ಅ.15) ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್,
ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟ ಪರಿಣಾಮ ಹಲವು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ನ ಹಳ್ಳಿಯೊಂದರಲ್ಲಿ ನಡೆದಿದೆ
ಕ್ಯಾಬ್ ಚಾಲಕನೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಸಾಯಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹಣಕಾಸಿನ ವ್ಯವಹಾರ ವಿಚಾರಕ್ಕೆ ಮನನೊಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ನಾಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ.