Showing 20 of 21611 articles • Page 63 of 1081
ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.
ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಆಂಥ್ರೋಪಿಕ್ ಸಂಸ್ಥೆಯ ಅಂತಾರಾಷ್ಟ್ರೀಯ ನೀತಿ ಮುಖ್ಯಸ್ಥರಾದ ಮೈಕಲ್ ಸೆಲ್ಲಿಟ್ಟೋ ಅವರ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಭಾರತದ 80ನೇ ಸ್ವಾತಂತ್ರೋತ್ಸವದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ, ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ರೋಹನ್ ಕಾರ್ಪೊರೇಶನ್, ‘ಫ್ರೀಡಮ್ ಪ್ಯಾಲೆಟ್ 2026’ ಹೆಸರಿನ ಚಿತ್ರಕಲಾ ಸ್ಪರ್ಧೆಯನ್ನು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಆಯೋಜಿಸಿದೆ.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆಯ ಪ್ರಸೂತಿ ಮತ್ತು ಸ್ತ್ರೀರೋಗ ಶುಶ್ರೂಷಾ ವಿಭಾಗ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆ ಇವರ ವತಿಯಿಂದ, ಪುದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಂಟ್ವಾಳ ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಇವರ ಸಹಯೋಗದೊಂದಿಗೆ ವಿಶ್ವ ಸ್ತನ್ಯಪಾನ ಸಪ್ತಾಹ–2026ರ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು 2026ರ ಆಗಸ್ಟ್ 5ರಂದು ಬೆಳಿಗ್ಗೆ 10:30 ಗಂಟೆಗೆ ಪುದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಯಿತು. ಈ ವರ್ಷದ “ಜೀವನದ ಸುಸ್ಥಿರ ಆರಂಭಕ್ಕಾಗಿ ಸ್ತನ್ಯಪಾನ: ಪರಿಣಾಮಕಾರಿ ಕ್ರಮಗಳನ್ನು ಮತ್ತಷ್ಟು ಬಲಪಡಿಸೋಣ” ಎಂಬ ಧ್ಯೇಯವಾಕ್ಯದಡಿ ಕಾರ್ಯಕ್ರಮ ನಡೆಯಿತು.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಸಿದ್ದರಾಮಯ್ಯ ಮತ್ತು ಹಾಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಕ್ಷೇತ್ರದ ಜನರು ಮೂಲಭೂತ ಸೌಲಭ್ಯಕ್ಕಾಗಿ ಪರದಾಡುವಂತಾಗಿದೆ.
2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಯೆಮನ್ನ ಪಶ್ಚಿಮ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಹಡಗಿನ ಮೇಲೆ ದಾಳಿಯಾಗಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಭಾರತೀಯ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಿರುವ ಘಟನೆ ನಡೆದಿದೆ.
ವಾಮಂಜೂರು ಕೆತ್ತಿಕಲ್ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಬೃಹತ್ ಬಂಡೆಗಳು ರಸ್ತೆಗೆ ಉರುಳಿದ ಭಯಾನಕ ವಿಡಿಯೋ ಸೆರೆಯಾಗಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ರ್ಯಾಗಿಂಗ್ ಸಂಪೂರ್ಣ ನಿಷೇಧವಾಗಿದ್ದರೂ, ಇಂತಹ ಘಟನೆಗಳು ಮರುಕಳಿಸುತ್ತಿರುವುದು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು , ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ ವಿಳಂಬ ಖಂಡಿಸಿ ಹಾಗೂ ಕೆ. ಪಿ.ಎಸ್.ಸಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆಯನ್ನ ನಡೆಸಲಾಯಿತು.
ಕಂಕನಾಡಿ ನಗರ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63)ನನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಸಾಗಿಸುವ ಅನೇಕ ಖಾಸಗಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ವಾಹನಗಳಲ್ಲಿ ನಿಗದಿತ ಅಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಸಂಚರಿಸಲಾಗುತ್ತಿದೆ ಎಂಬ ಬಗ್ಗೆ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ನಿರಂತರವಾಗಿ ದೂರುಗಳು ಕೇಳಿಬರುತ್ತಿವೆ.
ರಾಜ್ಯಾದ್ಯಂತ ನಕಲಿ ಹಾಗೂ ಕಲಬೆರಕೆ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ತಡೆ ಹಾಕಲು ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಗಂಭೀರಗೊಂಡಿದೆ.
ಕ್ಷಿ ಹಣ್ಣು ಸಣ್ಣದಾದರೂ ಪೌಷ್ಟಿಕಾಂಶಗಳಿಂದ ತುಂಬಿರುವ ಹಣ್ಣು. ಇದು ಸಿಹಿಹುಳಿ ರುಚಿ, ರಸದ ಗುಣ ಮತ್ತು ಆರೋಗ್ಯ ಲಾಭಗಳಿಂದ ಎಲ್ಲ ವಯಸ್ಸಿನವರಿಗೂ ಇಷ್ಟವಾಗುವ ಹಣ್ಣು. ವಿಶೇಷವಾಗಿ ಬೇಸಿಗೆಯಲ್ಲಿ ದೇಹಕ್ಕೆ ತಾಜಾತನ ನೀಡಲು ದ್ರಾಕ್ಷಿ ಬಹಳ ಉಪಯುಕ್ತ.
ದೇಶದಲ್ಲಿ ವಿಮೆ ಇಲ್ಲದೆಯೇ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ.
ಬೀದಿ ನಾಯಿ ದಾಳಿ ನಡೆಸಿ ಮಗುವಿನ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಡಣದ ವಾರ್ಡ ನಂ. 5ರ ಮಕಾನ ಓಣಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಮಹೀಂದ್ರಾ ಥಾರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ.
ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಮುದ್ರಪೂಜೆ ನೆರವೇರಿಸಿದರು.