Showing 20 of 20705 articles • Page 647 of 1036
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ (ಅ.05) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೌರಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಮದುವೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮದುವೆ ಸಂಭ್ರಮವು ವಿನಾಶಕಾರಿ ದುರಂತವಾಗಿ ಮಾರ್ಪಟ್ಟಿದೆ.
ಕಂಪ್ಯೂಟರ್ ಸೈನ್ಸ್ ಪದವಿ ಪಡೆಯದ 3ನೇ ಶ್ರೇಣಿಯ ಕಾಲೇಜಿನ ಡೆವಲಪರ್ ಒಬ್ಬರು 1.64 ಕೋಟಿ ರೂ.ಗಳ ಪ್ಯಾಕೇಜ್ ಪಡೆದ ನಂತರ ಗೂಗಲ್ನಿಂದ ಉದ್ಯೋಗದ ಆಫರ್ ವೈರಲ್ ಆಗಿದೆ.
ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ.
ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.
ಶಿವರಾಜ್ ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ.
ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ನಡೆದಿದೆ.
ಮೊಟ್ಟಮೊದಲ ಕರ್ನಾಟಕ ಸಂಘ 39 ವರ್ಷಗಳ ಹೆಜ್ಜೆಗುರುತಿನೊಂದಿಗೆ ಮುನ್ನೆಡೆಯುತ್ತಿರುವ ನಮ್ಮ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಒಳಿತಿಗಾಗಿ ಶ್ರಮಿಸುತ್ತಾ, ಅನೇಕತೆ ಯಲ್ಲಿ ಏಕತೆ ಸಾರುತ್ತಾ ಬಂದಿದೆ.
ಪುರಾತನ ಮತ್ತು ಐತಿಹಾಸಿಕ ಕಟ್ಟಡಗಳಿಗೆ ಹಾನಿ ನಡೆಸಿದರೆ ಅಂತವರ ವಿರುದ್ಧ 1 ಲಕ್ಷದವರೆಗೆ ದಂಡ ಹಾಗೂ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವುದಾಗಿ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ನಡೆದಿದೆ. ಚಲಿಸುತ್ತಿದ್ದ ಕ್ರೇಟಾ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈರುಳ್ಳಿ, ಬೆಳ್ಳುಳ್ಳಿ ಬಳಿಕ ಟೊಮೆಟೊ ದರ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ ಎರಡು ಪಟ್ಟು ಹೆಚ್ಚಳವಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ. ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ.
ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತು ಇಂದು ಬಿಡುಗಡೆಯಾಗಲಿದೆ. ದೇಶಾದ್ಯಂತ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.
ಬಾಂಗ್ಲಾ ದೇಶದ ವಿರುದ್ಧದ ಮೂರು ಟಿ-20 ಪಂದ್ಯಗಳ ಸರಣಿಯು ನಾಳೆಯಿಂದ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿರುವ ಭಾರತ ತಂಡವು, ಟಿ-20 ಪಂದ್ಯಗಳನ್ನೂ ಗೆದ್ದು ಬೀಗಲು ಹುಮ್ಮಸ್ಸಿನಲ್ಲಿದೆ.
ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದಕ್ಕೆ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಾನು ಸತ್ತ ಬಳಿಕ ನನ್ನ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಬಾರದು ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬೆಂಗಳೂರಿನ ಪ್ರಶಾಂತ್ ಲೇಔಟ್ ನಲ್ಲಿರುವ ಪಿಜಿ ಯೊಂದರಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅಲ್ಲಿ ಸಾಕಷ್ಟು ಜರ್ಜರಿತರಾಗಿದ್ದಾರೆ. ಕಠಿಣ ನಿಯಮಗಳಿಂದ ಕಂಗಾಲಾಗಿದ್ದಾರೆ
ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಮಹಿಳಾ ಟಿ-20 ವಿಶ್ವಕಪ್ನಲ್ಲಿ ಭಾರತಕ್ಕೆ ಹೀನಾಯ ಸೋಲಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲೆಂಡ್ ತಂಡವನ್ನು ಹರ್ಮನ್ ಪ್ರೀತ್ ಕೌರ್ ಪಡೆ ಎದುರಿಸಿತ್ತು.