Showing 20 of 20705 articles • Page 655 of 1036
ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ಕ್ಯಾಬ್ ಚಾಲಕನಿಂದ 2019 ರಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ 5 ಲಕ್ಷ ರೂ ನೀಡುವಂತೆ ಓಲಾ ಕ್ಯಾಬ್ ಸಂಸ್ಥೆಗೆ ಹೈಕೋರ್ಟ್ ನಿರ್ದೇಶಿಸಿದೆ.
ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲಿಯೇ ಮರೆತು ಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ.
ಮುಂಬೈ: ನಟ ಮತ್ತು ಶಿವಸೇನೆ ಮುಖಂಡ ಗೋವಿಂದ ಅವರು ಆಕಸ್ಮಿಕವಾಗಿ ತಮ್ಮ ಸ್ವಂತ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಗೋವಿಂದ ಬೆಳಿಗ್ಗೆ ತನ್ನ ರಿವಾಲ್ವರ್ ನ್ನು ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಅವರ ಕಾಲಿಗೆ ಬಂದು ತಗುಲಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಿನ್ನೆಗುಲಾಬಿ, ಹಸಿರು ಮತ್ತು ಹಳದಿ ಬಣ್ಣಗಳ ಶ್ರೇಣಿಯಾಗಿ ಆಕಾಶ ರೂಪಾಂತರಗೊಂಡಿರುವುದನ್ನು ನೋಡಿ ಆಶ್ಚರ್ಯಚಕಿತರಾದರು.
ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳ್ಳುಳ್ಳಿ ದರ 300 ರಿಂದ 350 ರೂ. ತಲುಪಿದ್ದು, ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದನ್ನು ಗಮನಿಸಿದ ಕೆಲ ಬೆಳ್ಳುಳ್ಳಿ ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬಿಟ್ಟು ಮಾರಾಟ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ 14 ನಿವೇಶನಗಳನ್ನು ಬಿಟ್ಟುಕೊಡುವಂತೆ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಮುಳ್ಳಗಿದ್ದು, ಇದೀಗ ಸಿಎಂ ಪತ್ನಿ ಸೈಟ್ ಹಿಂದಿರುಗಿಸಿರುವ ಬಗ್ಗೆ ಪತ್ರ ಬರೆದಿದ್ದು, ಸಿಎಂ ಸ್ಥಾನಕ್ಕೇ ಆಪತ್ತು ತಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ 3ನೇ ಮತ್ತು ಅಂತಿಮ ಹಂತದ ಮತದಾನ ಈಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ವೋಟಿಂಗ್ ನಡೆಯಲಿದೆ. 39.18 ಲಕ್ಷ ಮತದಾರರು 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ.
ತೂಕ ಹೆಚ್ಚಳದಿಂದ ದೇಹ ಸೌಂದರ್ಯ ಹಾಳಾಗುವುದು ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದಲ್ಲ. ತೂಕ ಹೆಚ್ಚಳವಾದ ಹಾಗೆ ಅಧಿಕ ಕೊಲೆಸ್ಟ್ರಾಲ್, ಮಧುಮೇಹ, ಅಧಿಕ ಬಿಪಿ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ನೀವು ಆಡಿದ ಮಾತುಗಳು ಎಲ್ಲವೂ ಸತ್ಯವಾಗುವಂತೆ ನಿಮಗೆ ಅನ್ನಿಸುವುದು. ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು.
ಕೆಲಸದ ಒತ್ತಡ ತಾಳಲಾರದೇ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತರುಣ್ (42) ಸಾವಿಗೆ ಶರಣಾದ ಉದ್ಯೋಗಿ. ಬಜಾಜ್ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತಮ್ಮ ಕೆಲಸ ಕಳೆದುಕೊಳ್ಳುವ ಬಗ್ಗೆ ತೀವ್ರ ಆತಂಕಕ್ಕೊಳಗಾಗಿದ್ದು ಈ ಪತ್ರದಲ್ಲಿ ವ್ಯಕ್ತವಾಗಿದೆ.
ಪ್ರಾಕೃತಿಕ ವಿಕೋಪ, ವರುಣಾರ್ಭಟದಿಂದ ಪ್ರವಾಹ, ಭೂಕುಸಿತ ನೇಪಾಳವನ್ನು ನಲುಗುವಂತೆ ಮಾಡಿದೆ.
ಬ್ಯಾಟರಿ ಸ್ಲಾಟ್ನಲ್ಲಿ ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಶಿರೂರು ಗುಡ್ಡ ಕುಸಿತ ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಇನ್ನೂ ಕೂಡಾ ನಾಪತ್ತೆಯಾದವರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇಂದು ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಎರಡು ಮಾನವ ದೇಹದ ಮೂಳೆಗಳು ಪತ್ತೆಯಾಗಿವೆ.
ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.
ಮುಂಬೈನಲ್ಲಿ ನಡೆದ ಪುರುಷರ ಸೀನಿಯರ್ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಧನರಾಜ್ ಗಾಣಿಗ ಅವರು ಐಬಿಬಿಎಫ್ಎಫ್ ಆಕ್ಟಿವ್ ಫಿಟ್ ಐಎಫ್ಬಿಬಿ ಮಿಸ್ಟರ್ ಯೂನಿವರ್ಸ್ 2024ರ ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.