Showing 20 of 20705 articles • Page 666 of 1036
ಅಮೆರಿಕದ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಒಂದು ಫೋಟೋ ವೈರಲ್ ಆಗಿದೆ. ಇಬ್ಬರೂ ಪರಸ್ಪರ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿರುವುದನ್ನು ಕಾಣಬಹುದು.
ಹೊಳೆಯಲ್ಲಿ ಸುಮಾರು 70 ಅಡಿ ದೂರದವರಗೆ ಈಜಾಡುತ್ತಾ ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಮನೆಗೆ ವಿದ್ಯುತ್ ಸಂಪರ್ಕ ನೀಡಿದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇಷ್ಟೆಲ್ಲ ಆದರೂ ಇನ್ನೂ ಕುರ್ಚಿಗೆ, ಅಧಿಕಾರಕ್ಕೆ ಅಂಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಏನು ಹೇಳಬೇಕು? ಅಂದು ಗಣಿ ಲೂಟಿ ಎಂದು ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ರಿ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ತಿರುಪತಿ ಲಡ್ಡು ವಿವಾದ ಪರೋಕ್ಷವಾಗಿ ಕರ್ನಾಟಕದ ಕೆಎಂಎಫ್ನ ನಂದಿನಿ ಬ್ರ್ಯಾಂಡ್ಗೆ ನೆರವಾದಂತೆ ಕಾಣುತ್ತದೆ . ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ನ್ಯಾಯಾಲಯದ ಆವರಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದರೆ ಒಳಿತು ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
‘ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಕೂಡದು. ಜೊತೆಗೆ, ಯಾವುದೇ ಸ್ತ್ರೀದ್ವೇಷ ಅಥವಾ ಯಾವುದೇ ಸಮುದಾಯ ಅಥವಾ ಲಿಂಗವನ್ನು ಉದ್ದೇಶಿಸಿ ಹೇಳಿಕೆ ನೀಡಬಾರದು’ ಎಂದು ಸುಪ್ರೀಂಕೋರ್ಟು ಎಲ್ಲ ಅಧೀನ ನ್ಯಾಯಾಲಯಗಳಿಗೆ ಎಚ್ಚರಿಸಿದೆ.
ಸಾಮಾನ್ಯ ಜ್ವರಕ್ಕೆ ಬಳಸುವ ಪ್ಯಾರಾಸಿಟಮಾಲ್, ಮಧುಮೇಹ, ರಕ್ತದೊತ್ತಡ, ವಿಟಮಿನ್ ಸೇರಿದಂತೆ 53 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಪೈಕಿ ಕೆಲವು ಔಷಧಗಳ ವಿಷಪೂರಿತವಾಗಿದೆ
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಸೆ. 21ರಂದು ನಗರದ ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು.
ನ್ಯಾಯಾಲಯದ ಕಲಾಪದ ನೇರಪ್ರಸಾರದ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಬಾರಿಯ ಬಿಗ್ ಸೇಲ್ನಲ್ಲಿ ಗ್ರಾಹಕರಿಗೆ ಬಂಫರ್ ಆಫರ್ ನೀಡಲಾಗುತ್ತಿದೆ. ಫೋನ್, ಲಾಪ್ ಟಾಪ್, ಬೈಕ್, ಟಿವಿ ಹೀಗೆ ಸಾಕಷ್ಟು ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡಬಹುದಾಗಿದೆ.
ಶುಂಠಿ ಚಹಾ ಏಕೆ ಒಳ್ಳೆಯದು ಎಂದು ನಾವು ಭಾವಿಸುತ್ತೇವೆ ಎಂದರೆ… ಅದರಲ್ಲಿ ಔಷಧೀಯ ಗುಣಗಳು ಬಹಳ ಹೆಚ್ಚು. ಉರಿಯೂತ ನಿವಾರಕ ಗುಣಗಳ ಜೊತೆಗೆ.. ಉತ್ಕರ್ಷಣ ನಿರೋಧಕ ಗುಣಗಳು, ಬ್ಯಾಕ್ಟೀರಿಯಾ ವಿರೋಧಿ ಗುಣಗಳೂ ಇವೆ.
ನಿಮ್ಮ ನಿಜವಾದ ಪ್ರಯತ್ನಕ್ಕೆ ದೈವವೂ ಸಹಾಯ ಮಾಡುವುದು. ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ಪ್ರೇಮದ ವಿಚಾರದಲ್ಲಿ ಆಸಕ್ತಿ ಹೆಚ್ಚಾಗಿದ್ದು ಪ್ರೇಮಿಯನ್ನು ನೋಡಲು ಹಂಬಲಿಸುವಿರಿ.
ಧಾರ್ಮಿಕ ಯಾತ್ರೆಯ ನೆಪದಲ್ಲಿ ನಮ್ಮ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆ ಹೆಚ್ಚುತ್ತಿದ್ದು, ನಂತರ ಅವರು ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಅಸಾಂವಿಧಾನಿಕ ಎಂದು ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಇದಕ್ಕೆ ಮೋದಿ ಅವರು ಮೊದಲು ರಾಜೀನಾಮೆ ನೀಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.
ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಪ್ರಸಿದ್ಧ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳ ಬಳಕೆ ವಿವಾದದ ನಡುವೆಯೂ ಲಡ್ಡು ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.
ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಯುವಕ ಮಹಿಳೆಗೆ ಚಾಕುವಿನಿಂದ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.