Showing 20 of 21612 articles • Page 68 of 1081
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣವು ಕುಂದಾಪುರ ಜನತೆಯನ್ನು ಬೆಚ್ಚಿಬೀಳಿಸಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ 20 ವರ್ಷದ ಯುವಕನಿಗೆ ಕ್ರಿಮಿನಲ್ ಬೆದರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (FTSC-2) ಅಪರಾಧಗಳ ಜೊತೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
ವಸಡಿನ ದಂತ ಶಾಸ್ತ್ರ ವಿಭಾಗ, ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ, ದೇರಳಕಟ್ಟೆ ಮತ್ತು ಗ್ರೀನ್ ವ್ಯೂವು ಪ್ರಾಥಮಿಕ ಕಾಲೇಜು, ಅಡ್ಕರ್ ಪಡುಪು, ದೇರಳಕಟ್ಟೆಯ ಸಹಯೋಗದಲ್ಲಿ ಬಾಯಿಯ ಸ್ವಚ್ಛತಾ ದಿನದ ಕುರಿತಾದ ಮಾಹಿತಿ ಮತ್ತು ದಂತ ತಪಾಸಣೆ ಶಿಬಿರವನ್ನು ದಿನಾಂಕ 30-7-2026( ಗುರುವಾರ ) ದಂದು ನಡೆಸಲಾಯಿತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಂಜನಗೂಡು ಲಯನ್ಸ್ ಕ್ಲಬ್ ಮತ್ತು ಆರ್. ಧ್ರುವನಾರಾಯಣ್ ಎಜುಕೇಷನ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬಿಜೆಪಿ ಭದ್ರಕೋಟೆಗಳಲ್ಲಿರುವ ಶಾಸಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು.
ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ದೀರ್ಘಕಾಲಿಕ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಒಳಗಾದರು.
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 74 ಸಾವಿರ ರೂ. ದಂಡ ವಿಧಿಸಿದೆ.
ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೌಟುಂಬಿಕ ಕಲಹಕ್ಕೆ ಬಳ್ಳಾರಿಯಲ್ಲಿ ಮತ್ತೆ ಡಬಲ್ ಮರ್ಡರ್ ನಡೆದಿದೆ.
ಕರಾವಳಿ ಕರ್ನಾಟಕದಲ್ಲೇ ಮೊದಲ ಬಾರಿಗೆ ಅಪರೂಪದ ಜನ್ಮಜಾತ ಹೃದಯದ ಕಾಯಿಲೆಯಾದ ಸೈನಸ್ ವೆನೋಸಸ್ ಏಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (Sinus Venosus Atrial Septal Defect – ASD) ಗೆ ಅತ್ಯಾಧುನಿಕ ಟ್ರಾನ್ಸ್ಕ್ಯಾಥೆಟರ್ (ಪಿನ್-ಹೋಲ್) ವಿಧಾನದ ಮೂಲಕ ಯಶಸ್ವಿ ಚಿಕಿತ್ಸೆ ನೀಡುವ ಮೂಲಕ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ದ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣರ ಚಾರಿತ್ರ್ಯ ಹೀನ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯಾಳನ್ನು ಬರ್ಬರವಾಗಿ ಹತ್ಯೆ ವಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಬುಧವಾರ ಮಹಜರು ಪ್ರಕ್ರಿಯೆ ನಡೆಸಲಾಯಿತು.