Showing 20 of 20755 articles • Page 682 of 1038
ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ಪೇ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರ ಕುಟುಂಬದ ಸದಸ್ಯ ದೀಪಕ್ ಗುಪ್ತಾ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಬಂಧಿಸಿದೆ.
ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಮಂದಿ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.
ದಸರಾ ಹಬ್ಬಕ್ಕೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್ಹೇಲ್ ಪ್ರದೇಶದಲ್ಲಿ ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿರುವ ಘಟನೆ ನಡೆದಿದೆ.
ಟೀಂ ಇಂಡಿಯಾ, ಬಾಂಗ್ಲಾದೇಶದ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಒಟ್ಟು 17 ವಿಕೆಟ್ ಪತನಗೊಂಡಿದೆ. ಎರಡನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಕಳೆದುಕೊಂಡರೂ ಭಾರತ 308 ರನ್ಗಳ ಭರ್ಜರಿ ಮುನ್ನಡೆ ಸಾಧಿಸಿದೆ.
ರಾತ್ರೋ ರಾತ್ರಿ ದಂಪತಿ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ದಂಪತಿಯನ್ನು ನೊಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಎಂದು ಗುರುತಿಸಲಾಗಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ರೊಬ್ಬರು ನ್ಯಾಯಾಧೀಶರು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ರೈಲ್ವೆ ಹಳಿ ಮೇಲೆ ಕುಳಿತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ತುಪ್ಪದ ಮಾದರಿ ಸಂಗ್ರಹಿಸಿ ಪ್ರಮಾಣಿಕರಿಸಿದ ಬಳಿಕವೇ ತುಪ್ಪದ ಬಳಕೆ ಮಾಡಲಾಗುತ್ತದೆ.
ಐಫೋನ್ 16 ಮಾರಾಟ ಆರಂಭವಾಗಿದ್ದು, ಆಪಲ್ ಅಂಗಡಿಗಳ ಮುಂದೆ ಜನ ಕ್ಯೂ ನಿಂತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶೀಘ್ರವೇ ಪೊಲೀಸ್ ಕಾನ್ಸ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ದೇಶದಲ್ಲಿನ ಎಲ್ಲಾ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ ಸ್ಥಾಪಿಸಬೇಕಾಗಿದೆ ಎಂದು ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಹೇಳಿದ್ದಾರೆ.
ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
“ನಮ್ಮನೆ ಕುಡ್ಲ” ವಿಷಯದ ಮೇಲೆ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಸೆ. 21 ರಂದು ನಗರದ ಟೌನ್ ಹಾಲ್ ಹಾಗು ಕ್ಲಾಕ್ ಟವರ್ ಹತ್ತಿರವಿರುವ ರಾಜಾಜಿ ಪಾರ್ಕ್ ಅಂಡರ್ ಪಾಸ್ ಬಳಿ ಈ ಸ್ವರ್ಧೆ ನಡೆಯಲಿದೆ.
ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರ ವಿವರವಾದ ವರದಿ ಕೇಳಿದ್ದಾರೆ.
ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದ ಜೋರಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ರೆಡ್ಡಿ ಆಂಧ್ರ ಹೈಕೋರ್ಟ್ ಮೊರೆ ಹೋಗಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಫ್ರಾನ್ಸ್ನ ಯುರೆಕ್ಸ್ ಪೋಲಿಯಾನ್ನಲ್ಲಿ ಸೆ.10ರಿಂದ 15ರವರೆಗೆ ನಡೆದ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯ ಅಡುಗೆ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಮಣಿಪಾಲ ವ್ಯಾಗ್ಶದ ಬಿಎ ಪಾಕಶಾಲೆಯ ವಿದ್ಯಾರ್ಥಿ ಹರ್ಷವರ್ಧನ್.
ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.