Showing 20 of 20755 articles • Page 687 of 1038
ಸೆಂಟ್ರಲ್ ಡೆಲ್ಲಿಯ ಕರೋಲ್ ಭಾಗ್ನಲ್ಲಿ ಮನೆಯೊಂದು ಕುಸಿದಿದ್ದು, ಇದುವರೆಗೂ 3 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.
ಖಾಸಗಿ ವಸತಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಯೋರ್ವ ಶಾಲೆಯಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿ ಮಟ್ಟ ಹಾಕಲು ಸರ್ಕಾರ ಟಾಸ್ಕ್ ಫೋರ್ಸ್ ರಚನೆಗೆ ಮುಂದಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತು ಸಭೆ ನಡೆಯಿತು.
‘ಒಂದು ದೇಶ, ಒಂದು ಚುನಾವಣೆ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆ ನಾಶಮಾಡಲು ಹೊರಟಿದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ.
ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಉತ್ಪಾದನಾ ವಿಭಾಗದಲ್ಲಿ ಮುಂಚೂಣಿ ಸಾಧಿಸುತ್ತಿರುವ ರಿವೋಲ್ಟ್ ಮೋಟಾರ್ಸ್ ಕಂಪನಿಯು ಹೊಸದಾಗಿ ರಿವೋಲ್ಟ್ ಆರ್ವಿ1 ಇವಿ ಬೈಕ್ ಬಿಡುಗಡೆ ಮಾಡಿದೆ.
ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಕೀನ್ಯಾದ ಮಸಾಯಿ ಮಾರಾದಲ್ಲಿರುವ ರೆಸಾರ್ಟ್ನಲ್ಲಿ ಒಂದು ರಾತ್ರಿ ತಂಗಲು 5.5ಲಕ್ಷ ರೂ.ಯಂತೆ. ಈ ಕುರಿತು ಭಾರತೀಯ ಮೂಲದ ದಂಪತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ನಾಳೆಯಿಂದ ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶದ ನಡುವಿನ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಬರೋಬ್ಬರಿ 37 ವಾರಗಳ ನಂತರ ವಿರಾಟ್ ಕೊಹ್ಲಿ ಟೆಸ್ಟ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸೆ.21 ರಂದು ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಸಿಂಗ್ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಅತಿಶಿ ಮರ್ಲೆನಾ ಸಿಂಗ್ ಭಾರತೀಯ ರಾಜಕಾರಣಿ , ರಾಜಕೀಯ ಕಾರ್ಯಕರ್ತೆ ಮತ್ತು ದೆಹಲಿಯ ಕಲ್ಕಾಜಿಯಿಂದ ಶಾಸಕರಾಗಿದ್ದಾರೆ .
ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನ ಬಂಧಿಸಲಾಗಿದೆ.
ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ಆರಂಭಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯಕ್ಕೆ ಸಪ್ತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.
ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದ ಅಪರೂಪದ ಪ್ರಕರಣ ಮಂಗಳೂರು ಹೊರಲವಲಯದ ಕಿನ್ನಿಗೋಳಿ ಬಳಿ ನಡೆದಿದೆ. ವಿಶೇಷವೆಂದರೆ ಕರುವಿನ ದೇಹ ಒಂದೇ ಆಗಿದ್ದು ತಲೆ ಎರಡು ಇದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಅವಧಿ ಪೂರ್ಣ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ದಿನಾಚರಣೆಯ ಸಂದರ್ಭದಲ್ಲಿ, ನೀವು ಕೇವಲ ರೂ. ನೀವು ’99 ನೊಂದಿಗೆ ನಿಮ್ಮ ನೆಚ್ಚಿನ ಚಲನಚಿತ್ರವನ್ನು ವೀಕ್ಷಿಸಬಹುದು.
ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.
ಆನ್ಲೈನ್ ಮಾರಾಟ ಮಳಿಗೆಯಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಡೆಸಲು ಮುಂದಾಗಿದೆ. ಸೆಪ್ಟೆಂಬರ್ 27 ರಂದು ಈ ಸೇಲ್ ಪ್ರಾರಂಭವಾಗಲಿದೆ.
ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಮೀನು ಬಿದ್ದಿದೆ. ಮೀನುಗಳಲ್ಲಿಯೇ ಅತಿ ಅಪಾಯಕಾರಿಯೆಂದು ಗುರುತಿಸಲ್ಪಟ್ಟಿರುವ ಮೀನು, ಮೀನುಗಾರರಿಗೆ ಕಂಟಕವಾಗಿದೆ.