Showing 20 of 21612 articles • Page 69 of 1081
ರಾಹುಲ್ ಗಾಂಧಿ ವಂಶ ಧ್ವಂಸ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಶಾಸಕ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದ ಯುವ ಜನತೆಯಲ್ಲಿ HIV ಸೋಂಕು ಏರಿಕೆ ಆತಂಕ ಸೃಷ್ಟಿಯಾಗಿದ್ದು, 7000ಕ್ಕೂ ಅಧಿಕ ಯುವ ಜನಾಂಗದಲ್ಲಿ HIV ಪತ್ತೆ ಎಂದು ವರದಿ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಬಳಸಿರುವ ಭಾಷೆ ಹಾಗೂ ಮಾಡಿರುವ ವೈಯಕ್ತಿಕ ಆರೋಪಗಳು ಅತ್ಯಂತ ಖಂಡನೀಯ, ಬೇಜವಾಬ್ದಾರಿಯುತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಆರೋಪಿಸಿದರು.
ವಿಶ್ವ ವಿದ್ಯಾನಿಲಯವು 2026 ರ ಜೂನ್- ಜುಲೈ ತಿಂಗಳಲ್ಲಿ ನಡೆಸಿದ ಎಲ್ಲಾ ಪದವಿ ಕೋರ್ಸುಗಳ 6 ನೇ ಸೆಮಿಸ್ಟರ್ನ ಮತ್ತು ಬಿ.ಎಚ್.ಎಂ. ಕೋರ್ಸಿನ 8 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ 17,347 ವಿದ್ಯಾರ್ಥಿಗಳ ಪೈಕಿ 17,076 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಚಾರವಾಗಿ ಮಾಜಿ ಸಚಿವ ರಮಾನಾಥ್ ರೈ ಮಾತನಾಡಿ ಕಾಂಗ್ರೆಸ್ನ ನೈಜ,ಕ್ರಿಯಾಶೀಲ, ಸಕ್ರಿಯ ಒಬ್ಬ ಸಾಮಾನ್ಯ ಕಾರ್ಯಕರ್ತ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗಬೇಕು.
ಯಶ್ಪಾಲ್ ಸುವರ್ಣ ತಲೆಯಲ್ಲಿ ಡ್ರಗ್ ಗಿಂತ ದೊಡ್ಡ ಅಮಲು ಹರಡಿದೆ.
ತಾಲೂಕಿನ ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ (SIT) ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ವ್ಯಕ್ತಿಗಳ ಗುರುತನ್ನು ಎಫ್ಎಸ್ಎಲ್ (FSL) ಪ್ರಯೋಗಾಲಯವು ಡಿಎನ್ಎ ಪರೀಕ್ಷೆಯ ಮೂಲಕ ಅಧಿಕೃತವಾಗಿ ದೃಢಪಡಿಸಿದೆ.
ಸಿನಿಮಾವನ್ನೇ ಮೀರಿಸಿದ ಇಲಿಯ ಕಳ್ಳತನದ ಕಹಾನಿ ತುಮಕೂರಿನಲ್ಲಿ ವೈರಲ್ ಆಗಿದೆ.
ನಗರ ಪೊಲೀಸ್ ವ್ಯಾಪ್ತಿಯಲ್ಲಿ ವಿವಿಧ ದಾಳಿಗಳ ವೇಳೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿಯೊಂದಿಗೆ ಜುಲೈ 29ರಂದು ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಯಿತು.
ಬೆಳ್ತಂಗಡಿ: ದುಬೈ ಉದ್ಯೋಗಕ್ಕಾಗಿ ತೆರಳಲು ಸಿದ್ಧತೆ ನಡೆಸಿದ್ದ ಯುವಕನೊಬ್ಬ ಗಾಂಜಾ ಹಾಗೂ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಯತ್ನದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಸಿಕ್ಕಿ ಬಿದ್ದು ನ್ಯಾಯಾಂಗ ಬಂಧನಕ್ಕೊಳಗಾದ ಘಟನೆ ನಡೆದಿದೆ. ಜು. 29ರಂದು ರಾತ್ರಿ ಸುಮಾರು 8 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ನೇತೃತ್ವದ ತಂಡ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದ ಖಾಸಗಿ ಕಟ್ಟಡದ ಮುಂಭಾಗದಲ್ಲಿ ಆಟೋ ರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬ ಪೊಲೀಸ್ […]
ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರೊಂದು ಢಿಕ್ಕಿಯಾಗಿ 4 ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜು.28ರಂದು ನಡೆದಿದೆ.
ತಿರುವಣ್ಣಾಮಲೈನ ಅರುಣಾಚಲ ಗಿರಿಯ ದಕ್ಷಿಣ ಮಾರ್ಗದಲ್ಲಿರುವ ‘ಮೋಕ್ಷ ಮಾರ್ಗಂ’ ಎಂಬ ಕಿರಿದಾದ ಬಂಡೆಯ ದಾರಿಯಲ್ಲಿ ಸಿಲುಕಿ ಆಂಧ್ರಪ್ರದೇಶದ ರಾಜಮಹೇಂದ್ರವರಂನ 36 ವರ್ಷದ ವ್ಯಕ್ತಿಯೊಬ್ಬರು ಮೃ*ಪಟ್ಟ ಕೆಲವೇ ದಿನಗಳ ನಂತರ, ಅದೇ ಸ್ಥಳದಲ್ಲಿ ಮತ್ತೊಬ್ಬ ಭಕ್ತರು ಇದೇ ರೀತಿಯ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮೋದಿಯವರು ಆಗಸ್ಟ್ 1ರಂದು ವಿವೇಕಾನಂದ ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ.
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಆಗಸ್ಟ್ 1 ರಂದು ಮೈಸೂರಿಗೆ ಮೋದಿ ಆಗಮನ ಹಿನ್ನಲೆ ರಾಮಕೃಷ್ಣ ಆಶ್ರಮದ ಶಾಲೆಯಲ್ಲಿ ಸಿದ್ಧತೆ ಬರದಿಂದ ಸಾಗುತ್ತಿದೆ. ವಿವೇಕ ಸ್ಮಾರಕ ಉದ್ಘಾಟನೆಗೆ ನರೇಂದ್ರ ಮೋದಿ ಬರುತ್ತಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಎಫ್-57 ಶಾಟ್ಪುಟ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಂಚುಗಾರಕೊಪ್ಪಲು ಗ್ರಾಮದ ಪ್ಯಾರಾ ಅಥ್ಲೀಟ್ ಶಿಲ್ಪಾ ಕೆ. ಶೈಲಾ ಅವರ ಸಾಧನೆಗೆ ಪ್ರಶಂಸೆಯ ಮಾಹಾಪೂರ ಹರಿದು ಬರುತ್ತಿದೆ. ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಶಿಲ್ಪಾ ಅವರ ನಿವಾಸದಲ್ಲಿ ಕುಟುಂಬ ಹಾಗೂ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಪಡಿತರ ವಿತರಣೆಯಲ್ಲಿ ವ್ಯತ್ಯಾಸವಾಗಿ ಮಾಸಾಂತ್ಯ ಕಳೆದರು ಗ್ರಾಮದಲ್ಲಿ ಪಡಿತರ ವಿತರಣೆ ಮಾಡದಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.
ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಹಲವು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಅಮೆರಿಕ ಸೇನೆಯ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿದ್ದ ಹೇಳಿಕೆಗಳು ಈಗ ರಾಜಕೀಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿವೆ.
ಚಿನ್ನವನ್ನು ದೋಚುವ ಹುನ್ನಾರದಲ್ಲಿ 2021 ಜನವರಿ 25ರಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿಯ ಹಿರಿಯ ಮಹಿಳೆ ಬೆನಡಿಕ್ಟ್ ಕಾರ್ಲೋ ಎಂಬವರಿಗೆ ವಿಷವುಣಿಸಿ, ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.