Showing 20 of 20755 articles • Page 692 of 1038
ಒಬ್ಬರ ಪ್ರಾಣ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಆರೋಪದಡಿ ಪೊಲೀಸರ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಮಲಾಪುರಂ ಪಟ್ಟಣದ ರವುಲಚೆರುವು ಎಂಬಲ್ಲಿ ನಡೆದಿದೆ.
ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೈತನೊಬ್ಬ ಮಗನ ತುಲಾಭಾರಕ್ಕೆ ಕಂತೆ ಕಂತೆ ಹಣ ಸುರಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಚತುರ್ಭುಜ ಜಾಟ್ ಎಂಬ ರೈತ, ತಮ್ಮ ಪುತ್ರನ ಒಳಿತಿಗಾಗಿ ಶ್ರೀ ಸತ್ಯವಾದಿ ವೀರ ತೇಜಾಜಿ ಮಹಾರಾಜ್ ಬಳಿ ತಮ್ಮ ಕೋರಿಕೆಯನ್ನ ಕೇಳಿಕೊಂಡಿದ್ದರು.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಕಲ್ಪಿಸುವಂತಹ ಯೋಜನೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರ ಉಳಿಯುತ್ತಿದ್ದಾರೆ.
ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಅಭಿಯಾನವನ್ನು ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ.
ಜಾನಿ ಮಾಸ್ಟರ್ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಆರೋಪದಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಜಾನಿ ಮಾಸ್ಟರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಆಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಮಧ್ಯಪ್ರದೇಶದ ಟಿಕಮ್ಗಢ್ ಜಿಲ್ಲೆಯಲ್ಲಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೇಜಾರು ಜಾಮೀಯ ಮಸೀದಿ ವತಿಯಿಂದ ನಡೆದ ಈದ್ ಮಿಲಾದ್ ಪ್ರಯುಕ್ತ ಹಿಂದೂ ಭಾಂಧವರು ಸಿಹಿತಿಂಡಿ ಹಾಗೂ ತಂಪು ಪಾನೀಯಗಳನ್ನು ವಿತರಿಸುವ ಮೂಲಕ ಕೋಮುಸೌಹಾರ್ದತೆಯನ್ನು ಮೆರೆದರು.
ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ,
ಪ್ರವಾದಿ ಮುಹಮ್ಮದ್ ಪೈಗಂಬರ್ರವರ ಜನ್ಮ ದಿನಾಚರಣೆ ಮಿಲಾದುನ್ನಬಿಯನ್ನು ಸೋಮವಾರ ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಮುಂಬೈ ಮೂಲದ ಕಾದಂಬರಿ ಜೆತ್ವಾನಿ ಅವರು ಆಂಧ್ರ ಪ್ರದೇಶದ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಈ ಸಂಬಂಧ ಆ ಮೂವರನ್ನು ಅಮಾನತು ಮಾಡಲಾಗಿದೆ.
ಕುಂದಾಪುರದ ಕೋಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಆತನನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಜಿಗ ಸಿನಿಮಾದಲ್ಲಿ ಬರುವ ಕೊರಗಜ್ಜ ದೈವದ ದರ್ಶನದ ದೃಶ್ಯಕ್ಕೆ ನಮ್ಮ ವಿರೋಧವೇ ವಿನಾಃ ಕಲ್ಜಿಗ ಸಿನಿಮಾಕ್ಕೆ ನಮ್ಮ ವಿರೋಧವಿಲ್ಲ ಎಂದು ಮಂಗಳೂರು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆಯ ಸಹನಾ ಕುಂದರ್ ಹೇಳಿದರು.
ವಿಡಿಯೋ ಕಾಲ್ ಮಾಡಿ ಬೇರೆ ರಾಜ್ಯದ ಪೊಲೀಸರು ಎಂದು ಬೆದರಿಕೆ ಹಾಕಿ ಓಟಿಪಿ ನಂಬರ್ ಪಡೆದು ಮೋಸ ಮಾಡುವ ಜಾಲ ಹುಟ್ಟಿಕೊಂಡಿದ್ದು, ಇಂತಹದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಂಡತಿ ಕಪ್ಪಾಗಿದ್ದಾಳೆಂದು ಮದುವೆಯಾದಾಗಿನಿಂದಲೂ ಗಂಡ ಅವಮಾನ ಮಾಡುತ್ತಿದ್ದ ಕಾರಣದಿಂದ ಚಿಕ್ಕಬಳ್ಳಾಪುರದ ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ನಲ್ಲಿರುವ ‘ಮಜ್ಜಿದುಲ್ಲಾ ಹುದಾಜುಮ್ಮಾ ಮಸೀದಿ’ಗೆ ಭಾನುವಾರ ರಾತ್ರಿ ಕಲ್ಲೆಸೆದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.