Showing 20 of 21612 articles • Page 70 of 1081
ಯೂಟ್ಯೂಬ್ನಲ್ಲಿ ಕಳ್ಳತನದ ವಿಡಿಯೋಗಳನ್ನು ನೋಡಿ ಮೊಬೈಲ್ ಶಾಪ್ಗಳಿಗೆ ಕನ್ನ ಹಾಕುತ್ತಿದ್ದ ಬಿಸಿಎ ಪದವೀಧರನನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ 31ರವರೆಗೆ ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಜಗದೀಶ್ ಅಫ್ಲೆ ಅವರನ್ನು ನೇಮಕ ಮಾಡಿದೆ.
ಭಾರತದಲ್ಲಿ ದಮನಕಾರಿ ಪ್ರವೃತ್ತಿ ಮತ್ತು ಸಿದ್ಧಾಂತವನ್ನು ಜನರ ಮೇಲೆ ಹೇರುವ ಮೂಲಕ ಸಮ್ಮತಿಗೆ ಒಳಪಡಿಸುವ ತಂತ್ರವನ್ನು ಹಾಗೂ ಕಠೋರವಾದ ನಿಯಮಗಳನ್ನು ಗುಪ್ತವಾಗಿ ಜನರ ಮೇಲೆ ಹೇರಲಾಗುತ್ತಿದೆ ಎಂದು ರಂಗ ನಿರ್ದೇಶಕ ಸುರೇಶ್ ಆನಗಳ್ಳಿ ಅಭಿಪ್ರಾಯಪಟ್ಟರು.
ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ್ದ 7.1 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 13 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 180 ತಾಲ್ಲೂಕುಗಳಲ್ಲಿ ಬರದ ಛಾಯೆ ಆವರಿಸಿರುವಾಗಲೇ ಕಾವೇರಿ ನೀರಾವರಿ ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಕರ್ನಾಟಕದ ರೈತರ ಹೊಟ್ಟೆ ಮೇಲೆ ಹೊಡೆದಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 60ಕ್ಕೂ ಹೆಚ್ಚು ಜಾನುವಾರುಗಳನ್ನು ಕವಲಂದೆ ಪೊಲೀಸರು ರಕ್ಷಿಸಿದ್ದಾರೆ, ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ – CWRC ತಮಿಳುನಾಡಿಗೆ 15 ದಿನಗಳ ಕಾಲ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.
ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ರಾಹುಲ್ ಗಾಂಧಿ ವಂಶವನ್ನು ದ್ವಂಸ ಮಾಡುತ್ತೇವೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ಪ್ರಕಾಶ್ ರಾಜ್ ಕರಾವಳಿ ಭಾಗದಲ್ಲಿ ನಾಟಕ ಕಾರ್ಯಕ್ರಮಗಳ ಮೂಲಕ ಕಲಾವಿದರನ್ನು ಒಗ್ಗೂಡಿಸಿ ಅವರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು.
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ಇಂದು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.
ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಚೇತನ್ರನ್ನು 11 ದಿನಗಳ ಆಸ್ಪತ್ರೆ ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರ್ ಗ್ರಾಮದ ಮೂಲದ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ಅವರು ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿದ್ದಾರೆ.
ಮತದಾನ ಕೇವಲ 18 ವರ್ಷ ತುಂಬಿದ ಮೇಲೆ ಅಲ್ಲ, ಶಾಲೆಯಿಂದಲೇ ಶುರು ಮಾಡಬೇಕು ಎಂಬ ಸಂದೇಶವನ್ನು ತಿ.ನರಸೀಪುರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೀಡಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಾಯೋಗಿಕವಾಗಿ ಕಲಿಸಲು ‘ಶಾಲಾ ಸಂಸತ್ತು’ ಎಂಬ ವಿನೂತನ ಕಾರ್ಯಕ್ರಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು.
ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.
ಯುವಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಫೇಸ್ಬುಕ್ ಪೋಸ್ಟ್ ಅನ್ನು ಮೆಟಾ (Meta) ಸಂಸ್ಥೆಯು ತೆಗೆದುಹಾಕಿದ ನಂತರ, ಆ ಕಂಪನಿಯ ಸಾರ್ವಜನಿಕ ನೀತಿ ವಿಭಾಗದ ಜಾಗತಿಕ ಮುಖ್ಯಸ್ಥರಿಗೆ ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ರಸ್ತೆ ಬದಿ ನಿಂತಿದ್ದ ಯುವತಿಗೆ ರೇಟ್ ಕೇಳಿದ್ದ ಕಾಮುಕ ಅರೆಸ್ಟ್!
ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.