Showing 20 of 21612 articles • Page 71 of 1081
ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು.
ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದೆ, ಇದು ನಿಮ್ಮನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ.
ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ.
‘ಗೋಲ್ಡನ್ ಮೂವೀಸ್’ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರುವ, ಸಂದೀಪ್ ಬೆದ್ರ ನಿರ್ದೇಶನದ ‘ಪಿಚ್ಚರ್’ ಸಿನಿಮಾವು ಆಗಸ್ಟ್ 7ರಂದು ತೆರೆಕಾಣಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ಖಾತೆಯಿಂದ ವಿಡಿಯೊವೊಂದವನ್ನು ತೆಗೆದುಹಾಕಿದ್ದಕ್ಕೆ ಮೆಟಾ ಸಂಸ್ಥೆಯು, ಕೇಂದ್ರ ಸರ್ಕಾರದ ಕ್ಷಮೆಯಾಚಿಸಿದೆ. ಇದು ತಾಂತ್ರಿಕ ದೋಷದಿಂದ ನಡೆದ ಪ್ರಮಾದ ಎಂದೂ ಕಂಪನಿ ಸ್ಪಷ್ಟಪಡಿಸಿದೆ.
ಅಮರನಾಥ ಯಾತ್ರಿಕರಿದ್ದ ಬಸ್ವೊಂದು ತಿರುವಿನಲ್ಲಿ ಅಪಘಾತಕ್ಕೀಡಾಗಿ 39 ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಕಂಗನ್ ಪ್ರದೇಶದಲ್ಲಿ ನಡೆದಿದೆ.
ಹೊಸ ವಾಹನಗಳ ಬೆಲೆಯನ್ನು ಆಗಸ್ಟ್ 1ರಿಂದ ಹೆಚ್ಚಿಸಲು ವಾಹನ ತಯಾರಕ ಸಂಸ್ಥೆಗಳು ತೀರ್ಮಾನಿಸಿವೆ.
ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತ
ಹಸುವಿನ ಎರಡೂ ಕಿವಿ ಕತ್ತರಿಸಿ ತಿಂದ ನಿಗೂಢ ಪ್ರಾಣಿ? ರೈತರಲ್ಲಿ ಆತಂಕ ಸೃಷ್ಟಿಯಾಗಿರುವ ಘಟನೆ ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿ ನಡೆದಿದೆ.
ನಗರದ ಹಂಪನಕಟ್ಟೆಯಲ್ಲಿ ಶೂ ಶಾಪ್ ವೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಬೆಳ್ಳಗೆ ನಡೆದಿದೆ.
ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಜುಲೈ 29ರಂದು ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ ತಿಳಿಸಿದರು.
“ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ–ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಸ್ವದೇಶಿ ಖಾದ್ಯ ಮೇಳ ನಡೆಯಲಿದೆ ಎಂದು ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು.
12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೀನಕಳಿಯ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿ ಸಾರ್ವಜನಿಕ ಡಾಂಬಾರು ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬವರನ್ನು ಪೂರ್ವ ದ್ವೇಷದಿಂದ ಕೊಲೆಗೈದ ಮೂವರು ಸೋದರರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿಕಸಿತ ಭಾರತ ಗ್ಯಾರೆಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗಾವಕಾಶ ಕಲ್ಪಿಸಿದ್ದು, ಗ್ರಾಮೀಣ ಭಾಗದ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಇದರ ಸೌಲಭ್ಯ ಪಡೆದುಕೊಳ್ಳುವಂತೆ ನಂಜನಗೂಡು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಕಾರೊಂದು ಫುಟ್ಪಾತ್ಗೆ ಡಿಕ್ಕಿ ಹೊಡೆದ ಘಟನೆ ನಗರದ ಜಿಲ್ಲಾ ನ್ಯಾಯಾಲಯದ (ಕೋರ್ಟ್) ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ.
ದಕ್ಷಿಣ ಕನ್ನಡದಲ್ಲಿ ನಡೆದ ಈಶ ಗ್ರಾಮೋತ್ಸವ 2026ರ ಕ್ಲಸ್ಟರ್ ಪಂದ್ಯಾವಳಿಯಲ್ಲಿ ಗ್ರಾಮೀಣ ಕರ್ನಾಟಕದ ಉತ್ಸಾಹಭರಿತ ಕ್ರೀಡಾ ಉತ್ಸವವು ದೀಪಿಕಾ ಹೈಸ್ಕೂಲ್ ಮೈದಾನ, ಬಂಟ್ವಾಳದಲ್ಲಿ ಅನಾವರಣಗೊಂಡಿತು.
ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳ ದರವೂ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ.
ಮಾಂಸ ವ್ಯಾಪಾರಿಗಳು ಹೊಸದಾಗಿ ಪರಿಚಯಿಸಲಾದ ಮಾಂಸ ತ್ಯಾಜ್ಯ ಸಂಗ್ರಹ ಶುಲ್ಕವನ್ನು ವಿರೋಧಿಸುತ್ತಿದ್ದಾರೆ.