Showing 20 of 20755 articles • Page 720 of 1038
ಮಹಿಳೆಯರ, ಹೆಣ್ಣು ಮಕ್ಕಳ ಮೇಲಾಗುತ್ತಿರುವ ಕಿರುಕುಳ, ಲೈಂಗಿಕ ದೌರ್ಜನ್ಯಗಳ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇವೆ. ಇದೀಗ ಅಂತಹದ್ದೇ ನಾಚಿಕೆಗೇಡಿನ ಕೃತ್ಯವೊಂದು ಬೆಳಕಿಗೆ ಬಂದಿದೆ.
ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಮಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ನನ್ನ ಮಗಳು ಟೆನಿಸ್ ಪ್ಲೇಯರ್ ಆಗಬೇಕೆಂಬುದು ಅವಳ ತಂದೆಯ ಆಸೆ ಎಂದಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ನನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ನಿನ್ನೆ ಬಳ್ಳಾರಿಗೆ ಬಂದಿದ್ದರು. ಇದಕ್ಕೂ ಮುನ್ನ ನಟ ದರ್ಶನ್ಗಾಗಿ ಪತ್ನಿ ವಿಜಯಲಕ್ಷ್ಮಿ, ದೇವರ ಮೊರೆ ಹೋಗಿದ್ದಾರೆ.
ಬಂಟ್ಸ್ ಫ್ಯಾಮಿಲಿ ಯು.ಎ.ಇ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಇದೇ ಅಕ್ಟೋಬರ್ 06 ರಂದು ಆದಿತ್ಯವಾರದಂದು ನಡೆಯಲಿದೆ.
ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕಳುಹಿಸಲು ವಾರ್ತಾ ಇಲಾಖೆ ಬ್ರೇಕ್ ಫೇಲ್ ಆಗಿರುವ ವಾಹನ ಬಳಕೆ ಮಾಡಿದೆ.
ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ (ಸೆ.07) ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ ನಿಷೇಧಿಸಿದೆ.
ರಸ್ತೆಬದಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಆರೋಪಿ ಮೊದಲು ಮಹಿಳೆಗೆ ಮದ್ಯ ಕುಡಿಸಿ ನಂತರ ಆಕೆಯ ಮೇಲೆ ರಸ್ತೆಯಲ್ಲೇ ಅತ್ಯಾಚಾರವೆಸಗಿ ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ.
ಬೆಂಗಳೂರು ನಗರವಾಸಿಗಳು ಗೌರಿ ಗಣೇಶ ಹಬ್ಬ ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾದ್ರಪದ ಶುಕ್ಲ ಚೌತಿಯಂದು ಬರುವ ಗೌರಿ-ಗಣೇಶನನ್ನ ಸ್ವಾಗತಿಸಲು ಸಿಟಿ ಮಂದಿ ಸಜ್ಜಾಗಿದ್ದಾರೆ.
ಕನ್ನಡ ರಂಗಭೂಮಿ, ಚಲನಚಿತ್ರ ರಂಗದ ಹಿರಿಯ ಕಲಾವಿದೆ ಹಾಗು ಮಾಜಿ ಸಚಿವೆ ಉಮಾಶ್ರೀ ಅವರು ಈಗ ಡಾಕ್ಟರ್ ಆಗುತ್ತಿದ್ದಾರೆ. ಉಮಾಶ್ರೀ ಅವರಿಗೆ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ ಒಂದು ಇಂದು ಉದ್ಘಾಟನೆಯಾಗಲಿದೆ. ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ
ಎಲ್ಲಾ ಭಾಷೆಗಳಲ್ಲಿ ಬಿಗ್ ಬಾಸ್ ಆರಂಭಕ್ಕೆ ಕ್ಷಣಗಣೆ ಆರಂಭ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ಅವರೇ ನಿರೂಪಣೆ ಮಾಡುತ್ತಿದ್ದಾರೆ.
ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ನ್ನು ಹೊತ್ತೊಯ್ದಿದ್ದ ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟೇರ್ಲೈನರ್ ಇಂದು ಖಾಲಿ, ಖಾಲಿಯಾಗಿ ಭೂಮಿಗೆ ಬಂದು ಇಳಿಯಲಿದೆ.
2024 ಸೆಪ್ಟೆಂಬರ್ 6ರ ಶುಕ್ರವಾರವಾದ ಇಂದು, ಕನ್ಯಾರಾಶಿಯ ನಂತರ ಚಂದ್ರನು ತುಲಾ ರಾಶಿಗೆ ಚಲಿಸಲಿದ್ದಾನೆ. ಅಲ್ಲದೆ, ನಾಳೆ ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿ ಮತ್ತು ಈ ದಿನದಂದು ಶುಕ್ಲ ಯೋಗವಿದೆ
‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರದಂದು ಅಧಿಕೃತ ಚಾಲನೆ ನೀಡಲಿದ್ದಾರೆ.
ಪ್ಯಾರಾಲಿಂಪಿಕ್ಸ್ನಲ್ಲಿ ಜೂಡೋದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಇತಿಹಾಸ ನಿರ್ಮಿಸಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳೆ ಉತ್ತರ ಭಾರತದ ರಾಜ್ಯಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ಅಗ್ನಿಪಥ್ ಯೋಜನೆಯಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾರವರು ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಬರೆದಿದ್ದಾರೆ. ಇದೀಗ ಪತಿ ಬಿಜೆಪಿಗೆ ಸೇರ್ಪಡೆಗೊಂಡ ಫೋಟೋವನ್ನು ಪತ್ನಿ, ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.