Showing 20 of 20776 articles • Page 739 of 1039
ನಿರ್ಮಾಪಕ, ನಿರ್ದೇಶಕ ರಂಜಿತ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಯುವ ನಟರೊಬ್ಬರು ಡಿಜಿಪಿಗೆ ದೂರು ನೀಡಿದ್ದಾರೆ.
ಹಾಲಿನ ವ್ಯಾಪಾರಿ ಇದ್ದ ಬೈಕ್ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ. ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಂಠ ಪೂರ್ತಿ ಕುಡಿದು ತೇಲಾಡುತ್ತಿದ್ದ ಯುವಕರನ್ನು ಬಸ್ ಗೆ ಹತ್ತಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಮೇಲೆ ಕಲ್ಲು ತೂರಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಇಳಿಕೆ ಆಗಿದೆ. ಅಪರಂಜಿ ಚಿನ್ನ ಮತ್ತು ಆಭರಣ ಚಿನ್ನಗಳೆರಡರ ಬೆಲೆಯೂ ಸಮವಾಗಿ ಇಳಿದಿವೆ.
ಮಲೆನಾಡಿನ ಕೊಡಗಿನಲ್ಲಿ ಆನೆ- ಮಾನವ ಸಂಘರ್ಷ ಮುಂದುವರಿದಿದೆ. ಬೆಳ್ಳಂಬೆಳ್ಳಗೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ.
ಕಾಡು ಪ್ರಾಣಿಗಳ ಕಳ್ಳ ಬೇಟೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ವಿವಿಧ ಭಾಗಗಳಿಂದ ಸೇನಾ ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ಟೋಬರ್ 15-16ರಂದು ಪಾಕಿಸ್ತಾನದಲ್ಲಿ ಶಾಂಘೈ ಕೋಆಪರೇಷನ್ ಆರ್ಗನೈಸೇಷನ್ನ ಸಭೆ ನಡೆಯಲಿದೆ. ಈಗಾಗಲೇ ಇದಕ್ಕೆ ಮುಹೂರ್ತವೂ ನಿಗದಿಯಾಗಿದೆ.
UNESCO ವಿಶ್ವ ಪರಂಪರೆಯ ತಾಣವಾಗಿರುವ ಕಾಂಬೋಡಿಯಾದ ಪುರಾತನ ಅಂಕೋರ್ ವಾಟ್ ದೇವಾಲಯದಲ್ಲಿ ಪ್ರವಾಸಿಗರು ಟೆಂಪಲ್ ರನ್ ಆಟವನ್ನು ಆಡುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸರ್ ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ ಎಂದು ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ. ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿಮಾ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ.
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಪ್ರಕಟಿಸಿದ್ದಂತೆ ಅಸ್ಸಾಂನ ಬಿಜೆಪಿ ಸರ್ಕಾರ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ,
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಮೆರೆದ ಕಾರಣ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಿನ್ನೆ ಸ್ಥಳಾಂತರಿಸಲಾಗಿದೆ.
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ಕಡ್ಡಾಯ ರಜೆ ಘೋಷಿಸಿದೆ.
ನಕಲಿ ಎಂಟ್ರಿ ಪಾಸ್ ಬಳಸಿ ಸಂಸತ್ಗೆ ಪ್ರವೇಶಿಸಲು ಯತ್ನಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಗುರುವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ದುರೊವ್ಗೆ ಫ್ರೆಂಚ್ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಸುಪ್ರೀಂ ಕೋರ್ಟ್ನ ಮಾಜಿ ವಕೀಲ, ವಿದ್ವಾಂಸ ಮತ್ತು ರಾಜಕೀಯ ವಿಮರ್ಶಕ ಅಬ್ದುಲ್ ಗಫೂರ್ ನೂರಾನಿ ಮುಂಬೈನಲ್ಲಿ ನಿಧನರಾಗಿದ್ದಾರೆ.
ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹಾಲು ಉತ್ತಮ ಗುಣಮಟ್ಟದ ಪ್ರೊಟೀನ್ ಅನ್ನು ಹೊಂದಿದೆ. ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಇದರ ಸೇವನೆ ಅವಶ್ಯಕವಾಗಿದೆ.