Showing 20 of 21612 articles • Page 74 of 1081
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರಕಾರದ ವೈಫಲ್ಯದಿಂದಾಗಿ ಇಂದು ದೇಶದೆಲ್ಲೆಡೆ ವಿದ್ಯಾರ್ಥಿಗಳು ರಸ್ತೆಗಿಳಿಯುವ ಪರಿಸ್ಥಿತಿ ಬಂದಿದೆ.
ನೀಟ್ ಪರೀಕ್ಷೆ ಅಕ್ರಮ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಧಾರಣೆ ಆಗ್ರಹಿಸಿ ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ನಕಲಿ “ಡಿಜಿಟಲ್ ಬಂಧನ” ಬೆದರಿಕೆ ಹಾಕಿದ ಸೈಬರ್ ವಂಚಕರು 64 ವರ್ಷದ ವೃದ್ಧರೊಬ್ಬರಿಂದ 31 ಲಕ್ಷ ರೂ. ವಂಚಿಸಿದ್ದಾರೆ ಎಂದು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, NTA & NEET ರದ್ದುಗೊಳಿಸಲು ಹಾಗೂ ವಿದ್ಯಾರ್ಥಿ – ಯುವಜನರ ಮೇಲಿನ ಲಾಠಿ ಚಾರ್ಜ್ ನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟೆ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಹೊಸಪೇಟೆಯಲ್ಲಿ SFI – DYFI ವಿಜಯನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಧರಣಿ ಮಾಡಲಾಯಿತು.
ದುರ್ಬಲ ಮಳೆಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಯಾವುದೇ ಭಾಗವು ಕುಡಿಯುವ ನೀರಿನ ಸಮಸ್ಯೆ ಎದುರಿಸದಂತೆ ಎಲ್ಲಾ ಸಂಭಾವ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೃಷ್ಣ ರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಮುಂಗಾರು ನೀರಿನ ಒಳಹರಿವು ಸಾಮಾನ್ಯಕ್ಕಿಂತ ತೀರಾ ಕಡಿಮೆ ಇರುವುದರಿಂದ, ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಗಳಿಗಾಗಿ ಮಾತ್ರ ಕಾಯ್ದಿರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ಈ ಋತುವಿನಲ್ಲಿ ಜಲಾಶಯ ನೀರಾವರಿಯನ್ನು ಅವಲಂಬಿಸಿ ಬೆಳೆಗಳನ್ನು ಬೆಳೆಯದಂತೆ ಕೆಆರ್ಎಸ್ ಅಣೆಕಟ್ಟು ಪ್ರದೇಶದ ರೈತರನ್ನು ಒತ್ತಾಯಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಈ ಹೋರಾಟವು 56 ಇಂಚಿನ ಪ್ರಧಾನಿಯ ಎದೆಯಲ್ಲೂ ನಡುಕ ಹುಟ್ಟಿಸಿದೆ ಎಂದು DYFI ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಆರ್ವಿಆರ್ ಹೆಲ್ತ್ ಕೇರ್ ಭಾರತದಾದ್ಯಂತ ಸುಲಭವಾಗಿ ಸಿಗುವ, ಅತ್ಯುನ್ನತ ದರ್ಜೆಯ ವೈದ್ಯಕೀಯ ಸೇವೆಯನ್ನು ಒದಗಿಸುವ ತನ್ನ ಧ್ಯೇಯೋದ್ದೇಶದಲ್ಲಿ ಪ್ರಮುಖ ಮೈಲಿಗಲ್ಲನ್ನು ಘೋಷಿಸಲು ಹೆಮ್ಮೆಪಡುತ್ತದೆ. ಸಂಸ್ಥೆಯು ತನ್ನ ಆಯಕಟ್ಟಿನ ಬೆಳವಣಿಗೆಯ ಯೋಜನೆಗಳನ್ನು ಅನಾವರಣಗೊಳಿಸಲು ಮತ್ತು ಕೇರಳದ ಕಾಸರಗೋಡಿನಲ್ಲಿ ‘ಆರ್ವಿಆರ್ ನ್ಯೂರೋ-ಅಂಕಾಲಜಿ ಸೆಂಟರ್ನ ಅಧಿಕೃತ ಉದ್ಘಾಟನೆಯನ್ನು ಘೋಷಿಸಲು 24 ಜುಲೈ 2026 ರಂದು ಬೆಳಿಗ್ಗೆ 11:30 ಕ್ಕೆ ಮಂಗಳೂರಿನ ದಿ ಓಷನ್ ಪರ್ಲ್ನಲ್ಲಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತು.
: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿ ಬಳಿ ನಡೆದಿದೆ.
ಬೈಕ್ ಒಂದಕ್ಕೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು -ಹುಲ್ಲಹಳ್ಳಿ ರಸ್ತೆಯ ಕೊಂಗಳ್ಳಿ ಗೇಟ್ ಬಳಿ ನಡೆದಿದೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸಾಧನೆಯಲ್ಲಿ ದಾನಿಗಳ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಅಮೆರಿಕ ಮತ್ತು ಇರಾನ್ ನಡುವೆ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಮೆರಿಕ ಸಂಯುಕ್ತ ಸಂಸ್ಥಾನ (USA) ಅಧ್ಯಕ್ಷರಾಗಿ ಖ್ಯಾತ ತಂತ್ರಜ್ಞ, ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಶ್ರೀ ಭಾಸ್ಕರ್ ಶೆರಿಗಾರ್ ಅವರನ್ನು ನೇಮಕ ಮಾಡಲಾಗಿದೆ.
ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸಿ, ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ದಿಢೀರ್ ಮುಂದೂಡಲ್ಪಟ್ಟಿದೆ.
ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಆತಂಕಕ್ಕೆ ಕಾರಣವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಉಡುಪಿ ಸಮೀಪದ ಹಿರಿಯಡ್ಕದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು.
ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತವಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.