Showing 20 of 20778 articles • Page 742 of 1039
ಹಲವೆಡೆ ಅತಿಯಾದ ಮಳೆಯಿಂದಾಗಿ ಬೆಳ್ಳುಳ್ಳಿ, ಈರುಳ್ಳಿ ಬೆಲೆ ಗಗನಕ್ಕೇರಿದೆ. ಧಾರಾಕಾರ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದ್ದರಿಂದ ಬೆಳ್ಳುಳ್ಳಿಯ ಬೆಲೆ ಪ್ರತಿ ಕೆ.ಜಿಗೆ 400 ರೂಪಾಯಿ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅತ್ತ ಬಳ್ಳಾರಿ ಜೈಲಿಗೆ ಶಿಫ್ಟ್ ಆದರೆ ಇತ್ತ ನಟ ಚಿಕ್ಕಣ್ಣ ವಿಚಾರಣೆ ಹಾಜರಾಗಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ನಟ ಚಿಕ್ಕಣ್ಣ ವಿಚಾರಣೆ ನಡೆಯುತ್ತಿದೆ.
ಪಾಸ್ಪೋರ್ಟ್ ಸೇವೆಯಲ್ಲಿ ವ್ಯತ್ಯಯ ಎದುರಾಗಿದ್ದು, ಹಲವರು ಸಮಸ್ಯೆಗೆ ಸಿಲುಕಿದ್ದಾರೆ. ಆನ್ಲೈನ್ ಪಾಸ್ಪೋರ್ಟ್ ಸೇವಾ ಪೋರ್ಟಲ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಓಡಿ ಹೋಗಿದ್ದ ಅವಾಮಿ ಲೀಗ್ನ ನಾಯಕ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮೇಘಾಲಯದ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅವಾಮಿ ಲೀಗ್ ನಾಯಕನ ಕೊಳೆತ ಶವ ಪತ್ತೆಯಾಗಿದೆ.
ಕರ್ನಾಟಕ 53 ಸೇರಿದಂತೆ ದೇಶಾದ್ಯಂತ 234 ನಗರಗಳಲ್ಲಿ 730 ಹೊಸ ಎಫ್ಎಂ ಚಾನೆಲ್ ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪಿತ್ತೋರ್ಗಢ ಜಿಲ್ಲೆಯಲ್ಲಿರುವ ಓಂ ಪರ್ವತ ಪ್ರವಾಸಿಗರ ನೆಚ್ಚಿನ ತಾಣ. ಪ್ರತಿಕಾಲದಲ್ಲಿಯೂ ತನ್ನ ನೆತ್ತಿಯ ಮೇಲೆ ಹಿಮ ಹೊದ್ದುಕೊಂಡೇ ಇರುತ್ತೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಖವಾಸ್ ತೆಹ್ಸಿಲ್ನ ಲಾಠಿ-ದರ್ದಿಯಾ ಪ್ರದೇಶದಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ
ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಲುಕ್ಯ ಸರ್ಕಲ್ನಲ್ಲಿ ನಡೆದಿದೆ. ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ.
ಬಂಧನಕ್ಕೊಳಗಾಗಿದ್ದ ಟೆಲಿಗ್ರಾಮ್ನ ಸ್ಥಾಪಕ ಹಾಗೂ ಸಿಇಒ ಪಾವೆಲ್ ಡುರೊವ್ ಅವರನ್ನು ಫ್ರಾನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬುಧವಾರ ಬಿಡುಗಡೆ ಮಾಡಿದೆ.
ಪತಿ ತನ್ನ ಪತ್ನಿಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ಆಕೆಯನ್ನು ಕೊಲೆ ಮಾಡಿದ್ದನು ಬಳಿಕ ಯಾರೋ ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪದಡಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಗುಜರಾತ್ನ ಕೆಲವೆಡೆ ಸತತ ನಾಲ್ಕನೇ ದಿನ ಬುಧವಾರವೂ ಧಾರಾಕಾರ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮೂರು ದಿನದಲ್ಲಿ 26ಕ್ಕೆ ಏರಿದೆ.
ಬಂಗಾರದ ಬೆಲೆ ಗಮನಿಸಿದರೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೆಳ್ಳಿ ಕೂಡ ಏರಿಕೆ ಕಾಣುತ್ತಿದೆ. ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಎದ್ದು ಕಾಣುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದ್ದ ವಿಚಾರ ಬಯಲಾದ ಬೆನ್ನಲ್ಲೇ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಅನುಮತಿ ನೀಡಿತ್ತು.
ಉತ್ತರ ಪ್ರದೇಶದ ಡಿಜಿಟಲ್ ಮಿಡಿಯಾ ಪಾಲಿಸಿ ಅನ್ವಯ ದೇಶ ವಿರೋಧಿ ವಿಡಿಯೋ ಹೇಳಿಕೆ ಹಾಗೂ ಪೋಸ್ಟ್ಗಳನ್ನು ಮಾಡಿದವರಿಗೆ ಕಠಿಣ ಅಂದ್ರೆ ಜೀವಾವಧಿ ಶಿಕ್ಷೆ ಹಾಗೂ ರಾಷ್ಟ್ರೀಯತೆಯನ್ನು ಉತ್ತೇಜಿಸುವವರಿಗೆ ದೊಡ್ಡ ಆಫರ್.
ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಅಡುಗೆ ಮನೆಯಲ್ಲಿರುವ ಮಸಾಲೆಗಳು ಕೇವಲ ರುಚಿಗೆ ಮಾತ್ರ ಅಲ್ಲ, ಇದರಿಂದ ಆರೋಗ್ಯಕ್ಕೆ ಅನೇಕ ಅದ್ಭುತ ಪ್ರಯೋಜನಗಳಿವೆ. ಅದಕ್ಕಾಗಿಯೇ ಆಯುರ್ವೇದದಲ್ಲಿ ವರ್ಷಗಳಿಂದ ಅಡುಗೆಮನೆಯಲ್ಲಿ ಲಭ್ಯವಿರುವ ಹಲವಾರು ಮಸಾಲೆಗಳನ್ನು ಬಳಸಲಾಗುತ್ತದೆ.