Showing 20 of 21612 articles • Page 75 of 1081
ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೈಸೂರಿನ ಉನ್ನತ ಪೊಲೀಸ್ ಅಧಿಕಾರಿಗಳು ಇಂದು ಬೆಳಿಗ್ಗೆ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಸದಾಗಿ ನಿರ್ಮಿಸಲಾದ ವಿವೇಕ ಸ್ಮಾರಕ – ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ) ವನ್ನು ಪರಿಶೀಲಿಸಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ ‘ಬೆಂಗಳೂರಿನಾಚೆಗೆ’ ಎಂಬ ಶೀರ್ಷಿಕೆಯ ಮೈಸೂರು ಬಿಗ್ ಟೆಕ್ ಶೋ-2026 ಅನ್ನು ಇಂದು ಬೆಳಿಗ್ಗೆ ಹೂಟಗಳ್ಳಿಯಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಉದ್ಘಾಟಿಸಲಾಯಿತು.
ಬಂಟ್ವಾಳ ತಾಲೂಕಿನ ಕಲ್ಲೆಟ್ಟಿಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ದುರ್ಮರಣವನ್ನಪ್ಪಿದ ಕಂದಮ್ಮ ಚಿರನ್ವಿಯ ಮನೆಗೆ ಭೇಟಿ ನೀಡಿ ಪದ್ಮರಾಜ್ ಆರ್. ಪೂಜಾರಿ ಸಾಂತ್ವನ ಹೇಳಿದರು.
ಅಮ್ರೋಹಾದ ಮೂವರು ಸಹೋದರಿಯರು, ಛಾಯಾಗ್ರಾಹಕ ಮತ್ತು ಕ್ಯಾಮೆರಾಮನ್ ವಿಕಾಸ್ ಅಲಿಯಾಸ್ ವಿಕ್ಕು ಎಂಬ ಒಂದೇ ವ್ಯಕ್ತಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾಗಿರುವುದು ದೇಶಾದ್ಯಂತ ಗಮನ ಸೆಳೆದಿದ್ದಾರೆ.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಅಸ್ಸಾಂನಲ್ಲಿ ನೆರೆ ಹಾವಳಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ವೇಳೆ ಹಿಂಸಾಚಾರ, ಗಲಭೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿರುವ ವ್ಯಕ್ತಿಗಳ ಪಾಸ್ಪೋರ್ಟ್ಗಳನ್ನು ರದ್ದುಗೊಳಿಸಲು ದೆಹಲಿ ಪೊಲೀಸರು ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
026 ರ ನೀಟ್ -ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಸಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ ಈ ಬಾರಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.
ಅಂಗವೈಕಲ್ಯವನ್ನು ಮೆಟ್ಟಿನಿಂತು ಸತತ ಪರಿಶ್ರಮದಿಂದ ಮುನ್ನಡೆದಿರುವ ಮೈಸೂರು ಜಿಲ್ಲೆಯ ಕೆ.ಎಸ್. ಶಿಲ್ಪಾ, ಸ್ಕಾಟ್ಲೆಂಡ್ನ ಗ್ಲಾಸ್ಗೊನಲ್ಲಿ ಆರಂಭವಾಗಲಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ನೀಟ್ ಯುಜಿ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ಜುಲೈ 24ರಂದು ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಇದೀಗ ಕರೆ ನೀಡಿದೆ.
ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬಹಿರಂಗ ಬೆಂಬಲ ಸೂಚಿಸಿದ್ದಾರೆ.
ಧಾನಿ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.
ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದು, 11 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನೀಟ್ ಅಕ್ರಮ ಪ್ರಶ್ನಿಸಿ ಧ್ವನಿಯೆತ್ತಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದೆದುರು ಪ್ರತಿಭಟನೆ ನಡೆಯಿತು.
ಬ್ಯಾಂಗಲ್ ಸ್ಟೋರ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಂಜನಗೂಡಿನ ಆರ್. ಪಿ ರೋಡ್ ನಲ್ಲಿ ನಡೆದಿದೆ.
ಕಾಲುವೆಯಲ್ಲಿ ನವಜಾತ ಶಿಶು ಮೃತದೇಹ ತೇಲಿಬಂದಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.