Showing 20 of 20778 articles • Page 750 of 1039
ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿದೆ.
ಆಮಿ ಜಾಕ್ಸನ್ ತಮ್ಮ ಎರಡನೇ ಮದುವೆ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ತನ್ನ ಗೆಳೆಯ ಎಡ್ ವೆಸ್ಟ್ವಿಕ್ನನ್ನು ಆಕೆ ಮದುವೆ ಆಗಿದ್ದಾರೆ. ಇವರಿಬ್ಬರ ವಿವಾಹ ಸಮಾರಂಭ ಇಟಲಿಯ ಅಮಾಲ್ಫಿ ತೀರದಲ್ಲಿ ನಡೆದಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟಿಆರ್ಎಐ) ಮತ್ತು ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ಸೈಬರ್ ವಂಚಕರು ಹಿರಿಯ ವೈದ್ಯರೊಬ್ಬರಿಗೆ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ರಷ್ಯಾದ ಸರಟೋವ್ನಲ್ಲಿರುವ 38 ಅಂತಸ್ತಿನ ವೋಲ್ಗಾ ಸ್ಕೈ ವಸತಿ ಸಂಕೀರ್ಣಕ್ಕೆ ಉಕ್ರೇನಿಯನ್ ಡ್ರೋನ್ ಅಪ್ಪಳಿಸಿತು, ಇದು ನಗರದ ಅತ್ಯಂತ ಎತ್ತರದ ಕಟ್ಟಡವಾಗಿದೆ.
ನಾಡಿನೆಲ್ಲೆಡೆ ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲೂ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ.
ಪಾಕಿಸ್ತಾನದಲ್ಲಿ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಬಸ್, ವಾಹನಗಳಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಬಲೂಚಿಸ್ತಾನ ಪ್ರಾಂತ್ಯದ ಕುಸಖೈಲ್ ಜಿಲ್ಲೆಯಲ್ಲಿ ರಾತ್ರಿ ವೇಳೆ ಈ ದಾಳಿ ನಡೆದಿದೆ
ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಶಾಸಕರ ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಟ ದರ್ಶನ್ ಅವರು ಸಿಗರೇಟ್ ಸೇದುತ್ತ ಕುಳಿತಿದ್ದ ಫೋಟೋ ಹಾಗೂ ವಿಡಿಯೋ ಕಾಲ್ ಸಂಬಂಧಿಸಿದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ
ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗುತ್ತಿದೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.
ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ ಇರುವ ಕಾರಣ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡಬೇಕೆಂದು ಒಲಿಂಪಿಕ್ ಕ್ರೀಡಾಪಟು, ಅರ್ಜುನ ಪ್ರಶಸ್ತಿ ಪುರಸ್ಕೃತೆ ಕ್ರೀಡಾಪಟು ಎಂ.ಆರ್.ಪೂವಮ್ಮ ಹೇಳಿದರು.
ಬಾಲಕನೊಬ್ಬ ಮೊಬೈಲ್ ನೋಡುತ್ತ ಕೀ, ಚಾಕು ಸೇರಿದಂತೆ ಇತರೆ ಕಬ್ಬಿಣದ ವಸ್ತುಗಳನ್ನು ನುಂಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ನಗರದ ಚಂಡಿಮರಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಆ.25ರಂದು ಊಟಿಯಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ರವರು ಬಹುಮತದಿಂದ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದೆ.
ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ವಿದ್ಯಾರ್ಥಿಯೊಬ್ಬ ತನ್ನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಮೂಲದ ವೈದ್ಯರನ್ನು ಅಲಬಾಮಾದ ಟಸ್ಕಲೂಸಾ ನಗರದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಡಾ ರಮೇಶ್ ಬಾಬು ಪೆರಮಶೆಟ್ಟಿ ಎಂದು ಗುರುತಿಸಲಾಗಿದೆ.
ಕಾಂಗ್ರೆಸ್ನ ಹಿರಿಯ ಸಂಸದ ವಸಂತ್ರಾವ್ ಚವಾಣ್ ನಿಧನರಾಗಿದ್ದಾರೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ನ್ಫೋಸಿಸ್ ನಲ್ಲಿ ಸಿಬ್ಬಂದಿ ಕಡಿತ ಇಲ್ಲವೆಂದು ಸಿಇಒ ಸ್ಪಷ್ಟಪಡಿಸಿದ್ದಾರೆ. ಇನ್ಫೋಸಿಸ್ ತನ್ನ ಗ್ರಾಹಕರಿಗೆ ನೀಡುತ್ತಿರುವ ಜನರೇಟಿವ್ ಎಐ ಸೇವೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯರ್ಥವಾಗುತ್ತಿ ಎಂದು ಹೇಳಿದ್ದಾರೆ.