Showing 20 of 20778 articles • Page 757 of 1039
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ಜಿಲ್ಲಾ ರೈಲ್ವೆ ಪ್ರಯಾಣಿಕರ ಒತ್ತಾಸೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಪ್ರತಿಷ್ಠಿತ ವಂದೇ ಭಾರತ್ ರೈಲು ಇಂದಿನಿಂದ ತುಮಕೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨೦೨೩-೨೦೨೪ ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಆಗಸ್ಟ್ ೨೪ ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಒಲಿಂಪಿಕ್ ಕ್ರೀಡಾಪಟು ಎಂ.ಆರ್. ಪೂವಮ್ಮ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ತ್ರಿಪುರಾದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕನಿಷ್ಠ 22 ಜನರು ಸಾವಿಗೀಡಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಜಿಲ್ಲಾಮಟ್ಟದ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪ್ರಶಸ್ತಿ ಬಾಚಿಕೊಂಡಿದ್ದಾರೆ.
ತಿರುಪತಿಯ ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ಶ್ರೀಮಂತ ದೇವರೆಂದೆ ಖ್ಯಾತಿ ಪಡೆದಿದ್ದಾನೆ. ಈ ಶ್ರೀಮಂತ ದೇವರಿಗೆ ಭಕ್ತರು ಬರೋಬ್ಬರಿ 25 ಕೆ.ಜಿಯ ಚಿನ್ನದ ಒಡೆವೆಗಳನ್ನ ಧರಿಸಿಕೊಂಡು ಬಂದಿದ್ದಾರೆ.
ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ 6, 7, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ STEM ಟ್ಯಾಲೆಂಟ್ ಸ್ಪರ್ಧೆಯನ್ನು ಭಾನುವಾರ, ಸೆಪ್ಟೆಂಬರ್ 1 ರಂದು ಆಯೋಜಿಸುತ್ತಿದೆ.
ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರ್ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಸಾಗರದ ಆನಂದಪುರ ಬಳಿ ನಡೆದಿದೆ.
ಆ. 20ರ ಮಂಗಳವಾರ ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನ ಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ.
40 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದಿರುವ ಭೀಕರ ಘಟನೆ ನೇಪಾಳದಲ್ಲಿ ನಡೆದಿದೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು, ಹಲವು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ.
ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ವಿದೇಶ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು (ಆಗಸ್ಟ್ 23) ಯುದ್ಧಪೀಡಿತ ಉಕ್ರೇನ್ಗೆ ಭೇಟಿ ನೀಡಿದರು. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಮೋದಿ ಉಕ್ರೇನ್ಗೆ ತೆರಳಿದರು.
ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದಿದ್ದಾರೆ. ನಿನ್ನೆ ಸ್ವಿಜ್ಜರ್ಲ್ಯಾಂಡ್ನ ಲೌಸನ್ನೆ ಡೈಮಂಡ್ ಲೀಗ್ 2024 ರಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ 89.49ಮೀ. ಎಸೆದಿದ್ದಾರೆ.
ಅಪ್ರಾಪ್ತೆಯನ್ನು ಪ್ರೀತಿ ಮಾಡು ಅಂತಾ ಬಲವಂತ ಮಾಡಿದ್ದಲ್ಲದೇ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅವರ ಪೋಷಕರ ಮುಂದೆಯೇ ನಿನ್ನ ಮಗಳನ್ನು ಮದುವೆ ಮಾಡಿ ಕೊಡದೇ ಹೋದ್ರೆ ಅವಳನ್ನು ಕೂಡಾ ನೇಹಾ ಹಿರೇಮಠ ರೀತಿಯಲ್ಲಿಯೇ ಕೊಲೆ ಮಾಡುತ್ತೇನೆ.
ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದ್ದಾರೆ.
ಇಂದು ಮಂಗಳೂರು ಬಿಜೆಪಿ ಕಚೇರಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗಿದ್ದು, ಐವಾನ್ ಡಿ ಸೋಜ ಮನೆ ಮೇಲೆ ಕಲ್ಲೆಸೆತ ಹಿನ್ನಲೆ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ.
ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.