Showing 20 of 20802 articles • Page 797 of 1041
ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಡೆ ನೀಡಿದೆ.
ರಾಜ್ಯಸಭೆಯಲ್ಲಿ ‘ಜಯಾ ಅಮಿತಾಭ್ ಬಚ್ಚನ್’ ವಿವಾದ ಮತ್ತೆ ಮಾರ್ದನಿಸಿದ್ದರಿಂದ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ವಿಪಕ್ಷಗಳು ಸಭಾತ್ಯಾಗ ನಡೆಸಿದವು.
ಕೆಲಸಕೊಡಿಸುವ ನೆಪದಲ್ಲಿ ಮಾತನಾಡಲು ಹೋದ ನನ್ನ ಮೇಲೆ ಕೋರ್ಟ್ ಆವರಣದಲ್ಲೇ ವಕೀಲರೊಬ್ಬರು ಅತ್ಯಾಚಾರ ಎಸಗಿರುವುದಾಗಿ ಯುವತಿಯೊಬ್ಬಳು ನೀಡಿದ ದೂರಿನ ಮೇಲೆ ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿದ್ದ ಕಾರಣ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು.
ಇಲ್ಲೊಬ್ಬ ಶಿಕ್ಷಕ ತಾನು ಎಲ್ಲಿದ್ದೇನೆ, ತನ್ನ ಕತ್ಯವ್ಯವೇನು, ತನ್ನ ವಯಸ್ಸೇನು ಎಂಬುವುದನ್ನೇ ಮರೆತು ಲೇಡಿ ಟೀಚರ್ ಒಬ್ಬರ ಜೊತೆ ಫ್ಲರ್ಟ್ ಮಾಡಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಕೊನೆಯ ಚಿನ್ನದ ಪದಕದ ಭರವಸೆಯಾಗಿದ್ದ ನೀರಜ್ ಚೋಪ್ರಾ ಕೂಡ ಚಿನ್ನದ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದರು.
ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಎಲ್ಲಿಂದ ಬರುತ್ತೆ ಅನ್ನೋದರ ಬಗ್ಗೆ ತನಿಖೆಯಾಗುತ್ತಿದೆ ಎಂದು ಹೇಳಿದರು.
ಮಧ್ಯಾಹ್ನ ಊಟದ ವೇಳೆ ಬಟ್ಟಲಲ್ಲಿ ಸತ್ತ ಹಲ್ಲಿಯೊಂದು ಸಿಕ್ಕ ಘಟನೆ ಒಡಿಶಾದ ಬಾಲಸೋರ್ನ ಸಿರಾಪುರ ಗ್ರಾಮದ ಉದಯನಾರಾಯಣ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾ| ತರಲಘಟ್ಟದಲ್ಲಿ ದುರ್ಘಟನೆ ಸಂಭವಿಸಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು : ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ
ಇರಾಕ್ನಲ್ಲಿ ಹೊಸ ಕಾನೂನನ್ನು ಪರಿಚಯಿಸಲು ನಿರ್ಧರಿಸಲಾಗಿದೆ, ಇದು ಹೆಣ್ಣುಮಕ್ಕಳ ಮದುವೆಯ ಕನಿಷ್ಠ ವಯಸ್ಸನ್ನು 9 ವರ್ಷಕ್ಕೆ ನಿಗದಿಪಡಿಸುತ್ತದೆ. ಮಸೂದೆಯನ್ನು ಇರಾಕಿ ಸಂಸತ್ತಿನಲ್ಲಿ ಮಂಡಿಸಲಾಗಿದೆ.
ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ.
ಭಾರತ ಮೂಲದ NASA ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿ ಸಿಲುಕಿ ಎರಡು ತಿಂಗಳಿಗಿಂತ ಹೆಚ್ಚು ಸಮಯ ಕಳೆದಿದೆ.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಚಿತ್ರದ ಮೊದಲ ಹಾಡುಇದೇ ಆಗಸ್ಟ್ 10ರಂದು ಬಿಡುಗಡೆಯಾಗಲಿದೆ. ‘ಮಫ್ತಿ’ ಸಿನಿಮಾದ ಸೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ.
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.9ರಂದು ನಾಗರ ಪಂಚಮಿ ವಿಶೇಷ ಕಾರ್ಯಕ್ರಮ ಬೆಳಿಗ್ಗೆ ಗಂಟೆ 5.30ಕ್ಕೆ ಆರಂಭಗೊಂಡಿದೆ.
ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024ರ ರಾಜ್ಯ ಮಟ್ಟದ “ಹಸಿರು ನೈರ್ಮಲ್ಯ ಅಭ್ಯುದಯʼʼ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ.
ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಆಗಸ್ಟ್ 15 ರ ಬೆಳಗ್ಗೆ 11.30ಕ್ಕೆ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಇಲ್ಲಿನ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ತನ್ನ 6ನೇ ವರ್ಷ , ಕರ್ನಾಟಕಕ್ಕೆ 50 ಸಂಭ್ರಮ ನಿಮಿತ್ತವಾಗಿ ರಾಜ್ಯ ಮಟ್ಟದ ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು.