Showing 20 of 20802 articles • Page 809 of 1041
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ದಂತಕಥೆ ಗ್ರಹಾಂ ಥಾರ್ಪೆ ತಮ್ಮ 55 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗ್ರಹಾಂ ಥೋರ್ಪ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಿಮಾಚಲ ಪ್ರದೇಶದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ.
ಅನಧಿಕೃತವಾಗಿ ಹಾಡು ಬಳಸಿದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ ಇದೀಗ ಇಳಯರಾಜಗೆ 60 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇಳಯರಾಜ ಸಂಗೀತ ಸಂಯೋಜನೆಯ ‘ಕಣ್ಮಣಿ’ ಹಾಡನ್ನು ಬಳಸಿದಕ್ಕೆ ಇದೀಗ ದುಬಾರಿ ಹಣವನ್ನು ದಂಡ ತೆತ್ತಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಎಸ್ಐಟಿ ತಂಡದಿಂದ ಕೋರ್ಟ್ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.
ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ.
6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಹಿಳೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.
ಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಲಾಗುವುದು ಎಂದಿರುವ ಸಿಎಂ ಹಿಮಂತ ಬಿಸ್ವ ಶರ್ಮ, ಈ ಸಂಬಂಧ ಸರ್ಕಾರ ಶೀಘ್ರ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮೋಕಳಿ ಬಳಿ ನಡೆದಿದೆ. ಪಾತಕಿಗಳು ವ್ಯಕ್ತಿಯನ್ನು ಕೊಲೆಗೈದು ಕೈ-ಕಾಲು ಕಟ್ಟಿ ಮೃತದೇಹವನ್ನು ಕೆರೆಗೆ ಎಸೆದಿದ್ದಾರೆ.
ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.
ದೆಹಲಿಯ ರೋಹಿಣಿ ಜಿಲ್ಲೆಯ ಆವಂತಿಕಾ ಸಿ-ಬ್ಲಾಕ್ ಪ್ರದೇಶದ ಫ್ಲಾಟ್ನಲ್ಲಿ ಪಾಕಿಸ್ತಾನದ ಪರ ಘೋಷಣೆಗಳು ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಎಆರ್ ರೆಹಮಾನ್ ಎವರ್ಗ್ರೀನ್ ಹಾಡುಗಳಲ್ಲಿ ತಾಲ್ ಸೆ ತಾಲ್ ಮಿಲಾ ಸೇರಿದೆ. ʼತಾಲ್ʼ ಚಿತ್ರದ ಈ ಹಾಡು, ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಪ್ರಸಿದ್ಧಿ ಪಡೆದಿದೆ. ಈಗ ಮತ್ತೆ ಈ ಹಾಡು ಸದ್ದು ಮಾಡುತ್ತಿದೆ.
ಕೆಎಸ್ಆರ್ಟಿಸಿ ಬಸ್ಗೆ ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.
ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಉಗ್ರನನ್ನು ಕರೆತಂದು ಎನ್ ಐ ಎ ಅಧಿಕಾರಿಗಳು ದೃಶ್ಯ ಮರುಸೃಷ್ಟಿ ಮಾಡಿದ್ದಾರೆ.
ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕಾರ್ಕಳ ಪರುಶುರಾಮ ಥೀಂ ಪಾರ್ಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬೆಂಗಳೂರಿನ ಗೋಡೌನ್ ಒಂದರಲ್ಲಿ ಇದ್ದ ಪರುಶುರಾಮ ಮೂರ್ತಿ ಭಾಗಗಳನ್ನು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಬಾರಿಗೆ ವಾಯು, ರಸ್ತೆ, ರೈಲ್ವೆ ಹಾಗೂ ಜಲ ಮಾರ್ಗಗಳ ಮೂಲಕ ಮಾನವ ಅಂಗಾಂಗ ಸಾಗಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಇಂಡಿಯನ್ 2 ಜುಲೈ 12 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಕಮಲ್ ಹಾಸನ್, ಸಿದ್ಧಾರ್ಥ್, ಎಸ್.ಜೆ. ಸೂರ್ಯ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿರುವ ಈ ಚಿತ್ರವು ವಿಮರ್ಶಕರು, ಅಭಿಮಾನಿಗಳಿಂದ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು.