Showing 20 of 20368 articles • Page 81 of 1019
ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಕೊಲೆಗೈದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ವಿಫ್ಟ್ ಡಿಸೈರ್ ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಲಕಾಡು ಮುಖ್ಯರಸ್ತೆಯ ಚೌಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸುತ್ತೇವೆ.
ಆನ್ಲೈನ್ ನಲ್ಲಿ ಔಷಧಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಔಷಧಾಲಯ ವರ್ತಕರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಬಡವರ ಪರ ಕಾಳಜಿ ವಹಿಸಿ ಪಶು ಇಲಾಖೆಯಿಂದ ಬರುವ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸಿ ಅವರನ್ನು ಬಡತನದ ರೇಖೆಯಿಂದ ಮೇಲೆತ್ತಬೇಕು ಎಂದು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ನಾಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ.
ದೇಶದ ಹಾಸ್ಪಾಟ್ ಪ್ರಗತಿಪರ ರಾಜ್ಯವಾಗಿದ್ದ ಕರ್ನಾಟಕವನ್ನು ಅಸಾಧಾರಣ ಪ್ರಯತ್ನದಿಂದ ಋಣಭಾರವಾಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಮೂರು ವರ್ಷಗಳ ಸಾಧನೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಸಹಿತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯದ ತುರ್ತು ಪ್ರತಿಕ್ರಿಯೆ ನಿಯಂತ್ರಣ ಕೊಠಡಿ (ಐಸಿಆರ್-ಇಆರ್) ಎಚ್ಚರಿಕೆ ನೀಡಿದೆ.
ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ.
ಇಟಲಿ ಪ್ರಧಾನಿ ಮೆಲೋನಿಗೆ, ಪ್ರಧಾನಿ ಮೋದಿ ನೀಡಿದ ಉಡುಗೊರೆ, ತ್ವರಿತ ವಾಣಿಜ್ಯ ಬೇಡಿಕೆಗೆ ನಾಂದಿ ಹಾಡಿದೆ.
ಐಪಿಎಲ್ ಟೂರ್ನಿಯ 19 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ.
ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.
ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಚಟ್ಟೋಗ್ರಾಮ್ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದ ಘಟನೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಉದ್ಯೋಗಿಗಳಿಗೆ WFH ಗೆ ಮಾಹಿತಿ ನೀಡಿದ ಮೆಟಾ, ನಂತರ ಸಾವಿರಾರು ಜನರನ್ನು ಕೆಲಸದಿಂದ ತೆಗೆದುಹಾಕಿದೆ.
ಬ್ಯಾಡ್ಮಿಂಟನ್ ಇಡೀ ದೇಹಕ್ಕೆ ಉತ್ತಮ ವ್ಯಾಯಾಮ ನೀಡುವ ಸಕ್ರಿಯ ಕ್ರೀಡೆ. ಈ ಆಟ ಸ್ನಾಯುಗಳನ್ನು ಬಲಪಡಿಸುವುದಲ್ಲದೆ, ರಕ್ತ ಪರಿಚಲನೆಯನ್ನು ಸುಧಾರಿಸಿ ಲವಲವಿಕೆಯಿಂದ ಇರಿಸುತ್ತದೆ.
ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ನದಿಯ ಒಡಲನ್ನು ಕೊರೆದು ಮರಳು ಲೂಟಿ ಮಾಡುತ್ತಿದ್ದ ಅಡ್ಡೆಗಳ ಮೇಲೆ ಇಂದು ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ವಾಹನ ಹಾಗೂ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.