Showing 20 of 20778 articles • Page 815 of 1039
ಸಪ್ತಪದಿ ತುಳಿದು ಬಳಿಕ ಸಂಸಾರದಲ್ಲಿ ಒಂದಾಗಿ ಬದುಕು ಕಟ್ಟಿಕೊಂಡ ದಂಪತಿಗಳು ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ.
ಟೀಮ್ ಇಂಡಿಯಾ ಹಾಗೂ ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ನಲ್ಲಿ ಯಾವೊಬ್ಬ ನಾಯಕ ಮಾಡದ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ.
ಆರ್. ಪ್ರೇಮದಾಸ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮೊದಲ ಏಕದಿನ ಪಂದ್ಯದಲ್ಲಿ ಫಸ್ಟ್ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ನಿಗದಿತ 50 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಕಲೆ ಹಾಕಿದೆ.
ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿ 4 ದಿನಗಳು ಕಳೆದಿದೆ. ಈ 4 ದಿನದಲ್ಲಿ ಹುಡುಕಿದಷ್ಟು ಹೆಣದ ರಾಶಿ, ರಾಶಿ ಸಿಕ್ಕಿವೆ. ಕೊಚ್ಚಿಕೊಂಡು ಹೋದ ಗುಡ್ಡದ ಪ್ರವಾಹ ನೂರಾರು ಮಂದಿ ಮಣ್ಣಿನಡಿ ಸಿಲುಕುವಂತೆ ಮಾಡಿದೆ.
ನೆಲಮಂಗಲದ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನ್ನಿಧಿ(24) ಮೃತ ವ್ಯಕ್ತಿ. ಹೋಟೆಲ್ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿರುವ ಸರ್ಕಾರಿ ಬಾಲಕಿಯರ ಹಾಸ್ಟೆಲ್ನ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.
ವಯನಾಡಿನ ಚೂರಲ್ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಪಾರಾದವರು ಈಗ ಸಂತ್ರಸ್ತರ ಶಿಬಿರದಲ್ಲಿದ್ದಾರೆ. ತಮ್ಮ ಒಡಹುಟ್ಟಿದವರು, ಕುಟುಂಬದ ಸದಸ್ಯರನ್ನು ಕಳೆದುಕೊಂಡು ಇವರು ಕಣ್ಣೀರು ಹಾಕುತ್ತಿದ್ದಾರೆ.
ಕಟ್ಟಾ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಒಲಿಂಪಿಕ್ಸ್ ಹಾಕಿಯಲ್ಲಿ ಭಾರತ ತಂಡ ಮಹಾ ಗೆಲುವು ದಾಖಲಿಸಿದೆ. ಇಂದು ನಡೆದ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಹಾಕಿ ತಂಡ 3-2 ಗೋಲುಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟರ್ ಮನು ಭಾಕರ್, ಭಾರತಕ್ಕೆ ಮೂರನೇ ವೈಯಕ್ತಿಕ ಪದಕ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ.
ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಬ್ಬಿಣದ ಗೇಟ್ ಮೈ ಮೇಲೆ ಬಿದ್ದು ಮೂರೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಬೆಂಗಳೂರಿನ ಜಿ.ಟಿ. ವರ್ಲ್ಡ್ ಮಾಲ್ಗೆ ಪಂಚೆ ಧರಿಸಿ ಬಂದ ರೈತನಿಗೆ ಪ್ರವೇಶ ನಿರಾಕರಣೆ ಮಾಡಿದ ಬೆನ್ನಲ್ಲಿಯೇ ಎಲ್ಲ ಶಾಪಿಂಗ್ ಮಾಲ್ಗಳಿಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟಣೆ ಮಾಡಿ ಆದೇಶ ಹೊರಡಿಸಿದೆ.
ಬಾಸ್ ಹಾಗೂ ಉದ್ಯೋಗಿ ನಡುವಿನ ರಜೆ ವಿಚಾರದ ಮೆಸೇಜ್ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಮಹಿಳಾ ಉದ್ಯೋಗಿ ಅರ್ಧ ದಿನ ರಜೆಗಾಗಿ ಬಾಸ್ಗೆ ಮೆಸೇಜ್ ಮಾಡಿದ್ದಾರೆ.
ದುಷ್ಕರ್ಮಿಗಳು ಯುವಕನೊಬ್ಬನನ್ನು ಜೀವಂತ ಸಮಾಧಿ ಮಾಡಿದ್ದು, ಆ ಸ್ಥಳಕ್ಕೆ ಬಂದ ಬೀದಿ ನಾಯಿಗಳು ಯುವಕನ ಪ್ರಾಣ ರಕ್ಷಣೆಗೆ ಪರೋಕ್ಷವಾಗಿ ಸಹಾಯ ಮಾಡಿದೆ.
ಪುತ್ತೂರಿನಲ್ಲಿ ಭಾರೀ ಪ್ರಮಾಣದ ಭೂಕುಸಿತದ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಭಾರೀ ಆತಂಕಕ್ಕೆ ಕಾರಣವಾಗಿದೆ. ಪುತ್ತೂರು ತಾ| ಬೇರಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು. ಇಡೀ ಗುಡ್ಡವೇ ರಸ್ತೆಗೆ ಕುಸಿದ ಹಿನ್ನಲೆಯಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಇದರಿಂದ ಬೈಂದೂರು ತಾಲೂಕಿನ ನಾವುಂದ ಕುದ್ರುವಿನಲ್ಲಿ ಸತತ ಮೂರನೇ ಬಾರಿಗೆ ನೆರೆಹಾವಳಿ ಉಂಟಾಗಿದೆ.
ನಗರದ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಹಭಾಗಿತ್ವದಲ್ಲಿ ಆ.4 ರಂದು ಆಟಿದ ಗೇನ ಕಾರ್ಯಕ್ರಮ ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.
ವಯನಾಡ್ ಭೂಕುಸಿತದ ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ಅಧ್ಯಯನ ವರದಿಗಳನ್ನು ಸರ್ಕಾರದ ಅನುಮತಿ ಇಲ್ಲದೇ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಕೇರಳ ಸರ್ಕಾರ ವಿಜ್ಞಾನಿಗಳಿಗೆ ನಿರ್ಬಂಧ ಹೇರಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ನಿಮಗೆ ಸಂಬಂಧ ಪಟ್ಟವರ ಕುರಿತು ಎಲ್ಲ ಆಸೆ ಬಿಟ್ಟು ಬಿಡಿ ಎಂದು ಸಂತ್ರಸ್ಥರಿಗೆ ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ನೆರೆ ಬಂದು ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಅದ್ಯಪಾಡಿಯ ಮೋಗೆರ್ ಕುದ್ರು ಮಳೆಗಾಲ ಬಂದಾಗ ಸಂಪೂರ್ಣ ಮುಳುಗಡೆಯಾಗುತ್ತದೆ.