Showing 20 of 20687 articles • Page 830 of 1035
ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.
ಆ್ಯಪಲ್ ತನ್ನ ಎಲ್ಲ ಮಾದರಿಗಳ ಐಫೋನ್ಗಳ ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ ಉಳಿಕೆ ಮಾಡಬಹುದಾಗಿದೆ.
ಭಾರೀ ಮಳೆಯಿಂದ ಕರ್ನಾಟಕದಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ನದಿಯಲ್ಲಿ ಜೀವಂತ ಹಸುವೊಂದು ಸಿಕ್ಕಿಹಾಕಿಕೊಂಡಿದ್ದು, ಹೋಂ ಗಾರ್ಡ್ಸ್ ಹಸುವನ್ನು ಕಾಪಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ.
ಕನ್ನಡದ ನಟಿ ಅಮಲಾ ಪೌಲ್ ಇತ್ತೀಚೆಗೆ ಕೊಚ್ಚಿಯ ಕಾಲೇಜುವೊಂದಕ್ಕೆ ಸಿನಿಮಾ ಪ್ರಚಾರಕ್ಕಾಗಿ ಭಾಗಿಯಾಗಿದ್ದರು. ಈ ವೇಳೆ, ಅವರು ಧರಿಸಿದ ಬಟ್ಟೆ ಬಗ್ಗೆ ಭಾರೀ ಟ್ರೋಲ್ ಆಗಿದ್ದರು.
ಮರದ ಕೊಂಬೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಜಿಲ್ಲೆಯ ಕಪ್ಪಸೋಗೆಯಲ್ಲಿ ನಡೆದಿದೆ.
ಬಾಲಿವುಡ್ ಖ್ಯಾತ ನಿರ್ದೇಶಕಿ ಫರಾ ಖಾನ್ ಮತ್ತು ನಿರ್ದೇಶಕ ಸಾಜಿದ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. 79 ವಯಸ್ಸಿನ ಮೇನಕಾ ಇರಾನಿ ಅವರು ಮುಂಬೈನಲ್ಲಿ ಮೃತಪಟ್ಟಿದ್ದಾರೆ.
ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಎನ್.ಸಿ.ಸಿ. ಭೂದಳ ಮತ್ತು ಮತ್ತು ನೌಕಾ ದಳ ಘಟಕದ ವತಿಯಿಂದ ಇಂದು (ಜು.26) 25ನೇ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.
ಮುಟ್ಟಾಗುವಿಕೆ ಎಂಬುವುದು ಒಂದು ಸಹಜ ಪ್ರಕ್ರಿಯೆ. ಅದರಲ್ಲಿ ನಾಚಿಕೆ ಪಡುವಂತಹದ್ದು, ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕಾ ಜಯದೇವ್ ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುತ್ತದೆ.
ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು, ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಪಠಾಣ್ಕೋಟ್ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆದರು.
ಕೋಣನಕುಂಟೆ ಪೊಲೀಸರು ಸೆಂಚುರಿ ಕಳ್ಳನನ್ನು ಬಂಧಿಸಿರುವ ಘಟನೆ ನಡೆದಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ.
ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಇಂದು ಪ್ರತಿಭಟನೆ ನಡೆಸಿದರು.
ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ.
ಕಾರ್ಗಿಲ್ ಸಮರ ವಿಜಯದ ರಜತ ಸಂಭ್ರಮವನ್ನು ಪ್ರತಿಷ್ಠಾನದ ವತಿಯಿಂದ ಉಳ್ಳಾಲ ವೀರರಾಣಿ ಅಬ್ಬಕ್ಕಳ ವ್ರತ್ತದ ಬಳಿ ಪ್ರತಿಮೆಗೆ ಹಾರ ಹಾಕಿ ಪುಷ್ಪಾರ್ಚನೆಗೈದು ನಡೆಸಲಾಯಿತು.
ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಾಲಾ ಬಸ್ ಚಾಲಕನೊಬ್ಬ ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.