Showing 20 of 20387 articles • Page 85 of 1020
ಇಡಾಹೊದ ಮೌಂಟೇನ್ ಹೋಮ್ ಏರ್ ಫೋರ್ಸ್ ಬೇಸ್ನಲ್ಲಿ ಭಾನುವಾರ ನಡೆದ ಗನ್ಫೈಟರ್ ಸ್ಕೈಸ್ ಏರ್ ಶೋನ ಎರಡನೇ ದಿನದಲ್ಲಿ ಎರಡು ಯುಎಸ್ ನೇವಿ ಇಎ-18ಜಿ ಗ್ರೋಲರ್ ಜೆಟ್ಗಳು ಆಕಾಶದಲ್ಲಿ ಡಿಕ್ಕಿ ಹೊಡೆದಿದೆ.
ಸಾರ್ವಜನಿಕ ಅಹವಾಲು ಸಂದರ್ಭದಲ್ಲಿ ಉಡುಪಿಯ ಜನತೆ ಹಾಗೂ ಬಿಜೆಪಿಗೆ ಸೌಹಾರ್ದತೆಯ ಪಾಠ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪೇಚಿಗೆ ಸಿಲುಕಿದ್ದಾರೆ. ವೃದ್ಧ ಹಿಂದೂ ಮಹಿಳೆಯೊಬ್ಬರ ಜಾಗದ ಸಮಸ್ಯೆಗೆ ಮುಸ್ಲಿಂ ಮಹಿಳೆಯರು ಕಣ್ಣೀರು ಹಾಕಿ ಬೇಡಿಕೊಂಡ ಪ್ರಕರಣ, ಬೇರೆಯದೇ ಆಯಾಮ ಪಡೆದಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಕಾಂಗ್ರೆಸ್ನ ವಿ.ಡಿ.ಸತೀಶನ್ ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.
ನಿನ್ನೆ ನಡೆದ ಐಪಿಎಲ್ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ವಿರುದ್ಧ 5 ವಿಕೆಟ್ಗಳ ಜಯ ಗಳಿಸಿದೆ.
ಸಿಡಿಲಿಗೆ ಮಹಿಳೆ ಬಲಿ, ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಸ್ವಚ್ಛತಾ ಆಂದೋಲನಕ್ಕೆ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು.
ಇಲ್ಲಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಕಿಡ್ ಆಗಿ ಬಸ್ ನ ಅಡಿಗೆ ಸ್ಕೂಟರ್ ಬಿದ್ದ ಘಟನೆ ಮಂಗಳೂರು ಕೊಣಾಜೆ ಪೊಲೀಸ್ ಠಾಣೆ ನಾಟೆಕಲ್ ಬಳಿ ಆದಿತ್ಯವಾರ ಸಂಜೆ ಘಟನೆ ನಡೆದಿದೆ.
ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ ಎಲ್ಲ ಕಷ್ಟಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.
ಕಾಪುವಿನ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದೈವಾರ್ಷಿಕವಾಗಿ ನಡೆಯುವ ಐತಿಹಾಸಿಕ ಪಿಲಿಕೋಲ ಶನಿವಾರ ಸಂಜೆ ಸಂಪನ್ನಗೊಂಡಿತು.
ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ಬೀಚ್ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು.
ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಆಯೋಜಿಸಿರುವ ಮಹಾರುದ್ರಯಾಗದ ಅಂಗವಾಗಿ ಕೊಡವೂರಿನ ಪ್ರಮುಖ ಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.
ಮಲ್ಪೆ ಬೀಚ್ನಲ್ಲಿ ಮಂಗ್ಲಿಯ ಗಾನವೈಭವ ನಡೆಯಿತು. ಕೊಡವೂರು ಮಹಾರುದ್ರಯಾಗದ ಮೆರುಗನ್ನು ಮಂಗ್ಲಿಯ ಸಂಗೀತ ರಸಮಂಜರಿ ಹೆಚ್ಚಿಸಿತು.
ಮಲ್ಪೆಯ ಕರ್ಕೇರ ಗೆಸ್ಟ್ ಹೌಸಿನಲ್ಲಿದ್ದ ವೈವಿಧ್ಯಮಯ ಮೀನುಗಳನ್ನು ಕಂಡು ಖ್ಯಾತ ಹಾಡುಗಾರ್ತಿ ಮಂಗ್ಲಿ ಖುಷಿ ಪಟ್ಟರು.
ತಾಲೂಕಿನ ಕುರಿಯಾಳ ಎಂಬಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರನ್ನು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬರಿಮಾರು ನಿವಾಸಿಗಳಾದ ಪದ್ಮನಾಭ(38) ಮತ್ತು ರಾಮಣ್ಣ(48) ಗಾಯಗೊಂಡವರು. ಭಾನುವಾರ ಸಂಜೆ ಈ ಘಟನೆ ನಡೆದಿದೆ.