Showing 20 of 21612 articles • Page 86 of 1081
ಭಾರತದ ಚಿಲ್ಲರೆ ಹಣದುಬ್ಬರವು 17 ತಿಂಗಳಲ್ಲಿ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ. 4 ರಷ್ಟು ಗುರಿಗಿಂತ ಹೆಚ್ಚಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತಕ್ಷಣಕ್ಕೆ ಕಡಿಮೆಯಾಗುವ ಸಾಧ್ಯತೆ ಕಡಿಮೆ ಎಂದು ಬ್ಯಾಂಕ್ ಆಫ್ ಅಮೇರಿಕಾ ತಿಳಿಸಿದೆ.
ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯಂದು ನಡೆದ ಕಾರ್ಯಕ್ರಮವೊಂದರಲ್ಲಿ ಜಗದ್ಗುರು ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ರಾಮಮಂದಿರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಹಗರಣಗಳ ಆರೋಪಗಳ ಬಗ್ಗೆ ಪೇಜಾವರ ಶ್ರೀಗಳು ಮೌನ ವಹಿಸಿರುವುದು ಏಕೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದರು.
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿ ಎರಡು ಕಡೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕಾಂಚನಾ ಟೆಕ್ಸ್ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ನ್ಯಾಯಾಲಯದಿಂದ 14 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ಬಂಧನಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಪರಂಗೀಪೇಟೆಯ ಮೆನೆಜಸ್ ಪ್ಲಾಜಾ ಕಾಂಪ್ಲೆಕ್ಸ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು.
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನಂದಿ ಕನ್ವೆನ್ಷನ್ ಹಾಲ್ನಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಎನ್ ಎಸ್ ಯುಐ ನಂಜನಗೂಡು ಘಟಕದ ವತಿಯಿಂದ “ವಿದ್ಯಾರ್ಥಿ ಧ್ವನಿ” ಎಂಬ ಶೀರ್ಷಿಕೆಯಲ್ಲಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಜುಲೈ 17 ರಂದು ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ದಸರಾದಲ್ಲಿ ಕಂಬಳ ಆಯೋಜನೆ ಬೇಡ. ದಸರಾದಲ್ಲಿ ಕಂಬಳ ವಿರೋಧಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟಿಸಿದರು.
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ ಮುಂದುವರೆದಿದ್ದು, ಸಾತಗಳ್ಳಿ ಸಮೀಪ ಕಂಬಳಕ್ಕಾಗಿ ಜಾಗ ಗುರುತು ಮಾಡಲಾಗಿದೆ.
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿರುವ ಪಬ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ.
ಅಮೆರಿಕ ಮತ್ತು ಇರಾನ್ ಪರಸ್ಪರ ಕ್ಷಿಪಣಿ ಹಾಗೂ ವಾಯುದಾಳಿಗಳನ್ನು ತೀವ್ರಗೊಳಿಸಿರುವ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚಾಗಿದೆ.
ಹೈದರಾಬಾದ್ನಲ್ಲಿ ತನ್ನ ಅಪ್ರಾಪ್ತ ಮೊಮ್ಮಗಳೊಂದಿಗೆ ವಾಹನ ಚಲಾಯಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಮತ್ತು ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ತಮ್ಮ 17 ವರ್ಷಗಳ ಐತಿಹಾಸಿಕ ಒಡನಾಟಕ್ಕೆ ಪರಸ್ಪರ ಒಪ್ಪಿಗೆಯಿಂದ ವಿದಾಯ ಹೇಳಿದ್ದಾರೆ.
ನಗರದ ಬಂಗ್ರಕೂಳೂರು, ತ್ರಿಶಾ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸಮೀಪದ ಮಲಾಡಿ ಎಸ್ಟೇಟ್ ರಸ್ತೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿಸರಣ್ ಅಕ್ವಾಟಿಕ್ ಸೆಂಟರ್ ಆರಂಭಗೊಂಡಿದೆ.