Showing 20 of 20825 articles • Page 886 of 1042
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಸೇವೆ ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದೆ.
ಅವಳಿ ಒಲಿಂಪಿಕ್ಸ್ ಪದಕ ವಿಜೇತೆ, ಸ್ಟಾರ್ ಶಟ್ಲರ್, ಪಿ.ವಿ.ಸಿಂಧು ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಮತ್ತೆ ಬಿರುಸು ಪಡೆದಿದ್ದು ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 197 ಡೆಂಗ್ಯೂ ಕೇಸ್ಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ.
ಭಾರೀ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಬಿರುಸಿನಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಿಳಿ ಚೀಟಿ ವ್ಯವಹಾರ ಆಳವಾಗಿ ಬೇರೂರಿದ್ದು ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ರೈತ ಮುಖಂಡರು ವರ್ತಕರ ವ್ಯವಹಾರಿಕ ನೀತಿಗೆ ಕಡಿವಾಣ ಹಾಕುವಂತೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ದೂರಿದರು.
ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ದಾನಿಗಳಾದ ಪ್ರೆಸಿಲ್ಲ ಕುಮಾರಿ ಅವರಿಂದ ವಿತರಿಸಲಾಯಿತು.
ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಇಂದು ಸೋಮವಾರ (ಜುಲೈ 8) ಸಂಜೆ ರಷ್ಯಾ ರಾಜಧಾನಿ ಮಾಸ್ಕೋ ವನ್ನು ಪ್ರಧಾನಿ ನರೇಂದ್ರ ಮೋದಿ ತಲುಪಿದ್ದಾರೆ. ನರೇಂದ್ರ ಮೋದಿ ಅವರು ರಷ್ಯಾ ತಲುಪುತ್ತಲೇ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ.
ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಕೇಸ್ ಸುಪ್ರೀಂ ಕೋರ್ಟ್ನಲ್ಲಿದೆ.
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹ ಬಂದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಂಬಾನಿ ಮನೆ ಮಗನ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ಕಂಗೊಳಿಸಿದ್ದಾರೆ. ಗರ್ಭಿಣಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿಯ ಮದುವೆ ಕಾರ್ಯಕ್ರಮದಲ್ಲಿ ಪರ್ಪಲ್ ಕಲರ್ ಸೀರೆ ಧರಿಸಿ ಮಿಂಚಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಟ್ ಎಂಡಿಎಸ್ -2024 ರಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಉತ್ತರಾಖಂಡದ ಒಂಬತ್ತು ಜಿಲ್ಲೆಗಳಲ್ಲಿ ಜುಲೈ 7 ಮತ್ತು 8 ರಂದು ಭಾರಿ ಮಳೆಯಾಗುವ ಮುನ್ಸೂಚನೆಯು ಕಳೆದ ಶನಿವಾರ ಚಾರ್ ಧಾಮ್ ಯಾತ್ರೆಯನ್ನು ಕೆಲವು ದಿನಗಳವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಇಲ್ಲಿನ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ಮಾರ್ಟಮ್ ಮನೆಯ ಹೊರಗೆ ಇಟ್ಟಿದ್ದ ಮೃತದೇಹವನ್ನು ಬೀದಿ ನಾಯಿಗಳು ಕಚ್ಚಿ ತಿಂದಿವೆ.
ಲಾಂಗ್ ಜಂಪ್ ಪಟು ಜೆಸ್ವಿನ್ ಆಲ್ಡ್ರಿನ್ ಹಾಗೂ 5000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ವಿಶ್ವ ರ್ಯಾಂಕಿಂಗ್ ಆಧಾರದ ಮೇಲೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಮಾಲೀಕ ಮಹೇಶ್ ಪಾಲನ್ (35) ಅವರು ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.