Showing 20 of 20802 articles • Page 893 of 1041
2024 ಜುಲೈ 7 ದಿನ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ,
ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.
ದುಷ್ಕರ್ಮಿಗಳ ಗ್ಯಾಂಗ್ವೊಂದು ತಮಿಳುನಾಡಿನ ಬಿಎಸ್ಪಿ ಅಧ್ಯಕ್ಷ ಆರ್ಮ್ಸ್ಸ್ಟ್ರಾಂಗ್ ಅವರನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್ಸ್ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದೆ.
ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು.
ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ನಲ್ಲಿ ರೋಗಿಯನ್ನು ನೋಡಲು ಬಂದ ಎಂಟು ಜನರ ಮಧ್ಯೆ ಜಗಳ ನಡೆದಿದ್ದು, ಪರಸ್ಪರ ಕುರ್ಚಿಯಿಂದ ಹೊಡೆದಾಡಿಕೊಂಡಿದ್ದಾರೆ.
ಶಿವಸೇನಾ ಮುಖಂಡರೊಬ್ಬರ ಮೇಲೆ ನಾಲ್ವರು ಕತ್ತಿಗಳಿಂದ ಹಲ್ಲೆ ನಡೆಸಿ, ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.
ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್ಜಿ ಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಅರಣ್ಯಾಧಿಕಾರಿ ವಾರಿಜಾಕ್ಷಿ ಚಾಲನೆ ನೀಡಿದರು.
ನಟ ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಗರದ ಕುಖ್ಯಾತ ರೌಡಿಶೀಟರ್ ಗಳ ಫ್ಯಾನ್ ಫಾಲೋಯಿಂಗ್ ಗ್ರೂಪ್ಗಳ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ.
ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ ವಿಶ್ವದ ಮೊದಲ ಸಿಎನ್ಜಿ ಬೈಕ್ ‘ಬಜಾಜ್ ಫ್ರೀಡಂ 125’ ಅನ್ನು ಬಿಡುಗಡೆಗೊಳಿಸಿದೆ.
ಕೆಲಸದ ಒತ್ತಡ ತಾಳಲಾರದೆ ರೋಬೋಟ್ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಒತ್ತಡದಿಂದ ಬೇಸತ್ತು ರೋಬೋಟ್ ಮೆಟ್ಟಿಲುಗಳಿಂದ ಬಿದ್ದು ಸೂಸೈಡ್ ಮಾಡಿಕೊಂಡಿದೆ ಎಂದು ವರದಿಯಾಗಿದೆ.
ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ.
ಲಿಂಗಸುಗೂರು ಪಟ್ಟಣದ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗಳನ್ನು ಹೆದರಿಸಿ, ದರೋಡೆ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಡಕಾಯಿತಿರ ಗ್ಯಾಂಗ್ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ.
ಬಿಹಾರದಲ್ಲಿ ಕಳೆದ 15 ದಿನದಲ್ಲಿ 10 ಸೇತುವೆಗಳು ಕುಸಿದು ಬಿದ್ದಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 11 ಎಂಜಿನಿಯರ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹೇಳಿಕೆ ನೀಡಿದ್ದಾರೆ.
ಇಂಗ್ಲೆಂಡ್ ಮುಂದಿನ ಪ್ರಧಾನಮಂತ್ರಿಯಾಗಿ ಲೇಬರ್ ಪಾರ್ಟಿಯ 61 ವರ್ಷ ವಯಸ್ಸಿನ ಕೀರ್ ಸ್ಟಾರ್ಮರ್ ಆಯ್ಕೆಯಾಗಿದ್ದಾರೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಕರ್ನರ್ವೇಟೀವ್ ಪಕ್ಷವನ್ನು ಬಗ್ಗು ಬಡಿದಿರುವ ಲೇಬರ್ ಪಾರ್ಟಿ ಅಧಿಕಾರದ ಗದ್ದುಗೆ ಹಿಡಿದಿದೆ.
ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ.
ಕೇರಳದ ತ್ರಿಶೂರ್ನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್ನ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ತ್ರಿಶೂರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.