Showing 20 of 20802 articles • Page 894 of 1041
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಸರ್ಕಾರ ಮುಂದಾಗಿದೆ.
ಉಡುಪಿಯ ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿ ಶೌಚಾಲಯ ಸ್ವಚ್ಛ ಮಾಡುವ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ.
24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ.
ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್ನಲ್ಲಿ ಹುಳ ಪತ್ತೆಯಾಗಿದೆ.
ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ಪೂರ್ವಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಮಳೆಗಾಲ ಆರಂಭವಾಯಿತೆಂದರೆ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್ಗುನ್ಯಾದಂತಹ ರೋಗ ಹರಡುವಿಕೆಯು ಆರಂಭವಾಗುತ್ತದೆ. ಸೊಳ್ಳೆಗಳ ಸಂತಾನೋತ್ಪತ್ತಿಯ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆರೋಗ್ಯದ ಮೇಲೆ ಭಾರಿ ಪರಿಣಾಮ ಉಂಟಾಗುತ್ತದೆ.
ಅಯೋಧ್ಯೆ ರಾಮ ಮಂದಿರದ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ನ ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಘಟನೆ ದಾವಣಗೆರೆಯಲ್ಲಿರುವ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ (ಜುಲೈ 5) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿ ಮಾಡಿದೆ
ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, ನೈರ್ಮಲ್ಯ ಕಾಪಾಡದಿರುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತಿದೆ.
ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.
ಈ ಮಳೆಗೂ ಪ್ರೇಮಿಗಳಿಗೂ ಅವಿನಾಭಾವ ಸಂಬಂಧ ಎಂಬಂತೆ ಜೋಡಿ ಹಕ್ಕಿಯೊಂದು ಮೈಮರೆತು ಮಳೆಯಲ್ಲಿ ನೆನೆಯುತ್ತಾ ರೊಮ್ಯಾನ್ಸ್ ಮಾಡಿದ್ದು, ಈ ದೃಶ್ಯವನ್ನು ಯಾರೋ ಕದ್ದು ಮುಚ್ಚಿ ರೆಕಾರ್ಡ್ ಮಾಡಿದ್ದಾರೆ
ಬ್ರಿಟನ್ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ. ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕೇಂದ್ರ ಶಿಕ್ಷಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್ಎಫ್ಐ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.