Showing 20 of 20674 articles • Page 915 of 1034
ಸರ್ಕಾರದ ಮಾನ್ಯತೆಯಿಲ್ಲದೆ ನಡೆಯುತ್ತಿರುವ ಇಲ್ಲಿಯ 8 ತರಬೇತಿ ಕೇಂದ್ರ(ಕೋಚಿಂಗ್ ಸೆಂಟರ್)ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ನೋಟಿಸ್ ಜಾರಿಗೊಳಿಸಿದ್ದಾರೆ.
ಲಾಸ್ ವೇಗಾಸ್ನಲ್ಲಿರುವ ಅಪಾರ್ಟ್ ಮೆಂಟ್ಗಳ ಮೇಲೆ ನಡೆದ ಗುಂಡಿನ ದಾಳಿಯಿಂದಾಗಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಕಾಲಿಡಲಿದೆ.
ಬೆಂಗಳೂರು ಆಟೋ ಮೀಟರ್ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ.
ದೇಶದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯವಾಗಿ ಕಚ್ಚಾ ತೈಲ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.
ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದೆ.
ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಸಿಬಿಐನಿಂದ ಈಗ ಬಂಧನಕ್ಕೆ ಒಳಗಾಗಿದ್ದಾರೆ.
ವಾತಾವರಣದಲ್ಲಿ ತೇವಾಂಶ ಹೆಚ್ಚಾದಂತೆ ಬೆವರುವುದು ಹೆಚ್ಚು. ಇದರಿಂದಾಗಿ ತಲೆಯ ಚರ್ಮಕ್ಕೆ ಉಸಿರಾಡಲಾಗದಂತೆ ಕಟ್ಟಿಕೊಳ್ಳುತ್ತದೆ. ಒಮ್ಮೆ ಈ ಸೂಕ್ಷ್ಮ ಗ್ರಂಥಿಗಳು ಕಟ್ಟಿಕೊಂಡರೆ, ಕೂದಲಿನ ಬುಡವೆಲ್ಲ ಸಡಿಲವಾಗಿ ಉದುರುವುದಕ್ಕೆ ಪ್ರಾರಂಭವಾಗುತ್ತದೆ.
ಇಂದು ಬೆಳ್ಳಿ ಬೆಲೆ ಗ್ರಾಮ್ಗೆ 70 ಪೈಸೆಯಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಂದು ವ್ಯತ್ಯಯವಾಗಿಲ್ಲ. ಕೆಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರೂಪಾಯಿ ಇದೆ.
‘ಸೋಮವಾರ ‘ವಕ್ಫ್ ಅದಾಲತ್’ನಲ್ಲಿ ಒಟ್ಟು 197 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.
ಹುಬ್ಬಳ್ಳಿಯ ಜನತಾ ಬಜಾರದಲ್ಲಿ ದಾಖಲೆ ಇಲ್ಲದ 7 ಮೊಬೈಲ್ 6.56 ಗ್ರಾಂ ತೂಕದ ಬಂಗಾರದ ಆಭರಣ ಇಟ್ಟುಕೊಂಡು ಅನುಮಾನಸ್ಪದವಾಗಿ, ತಿರುಗುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹನ್ನೆರಡು ಜ್ಯೋತಿರ್ಲಿಂಗಗಳ ಯಾತ್ರೆ ಕೈಗೊಂಡಿರುವ ತುಮಕೂರಿನ ಶಿವಾನಂದ ಅವರು ಮಂಗಳವಾರ ನಗರ ತಲುಪಿದರು. ತುಮಕೂರು ಜಿಲ್ಲೆಯ ಬೆಳ್ಳಾವಿ ಗ್ರಾಮದ ಶ್ವೇತ ಕಮಠಾಪುರಿಯಿಂದ ಆರಂಭಗೊಂಡ ಬೈಸಿಕಲ್ ಯಾತ್ರೆ ಜೂನ್ 2ರಿಂದ ಆರಂಭಿಸಿದ್ದಾರೆ.
ಜು.13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಔರಾದ್ ತಾಲೂಕಿನ ಹೊಳಸಮುದ್ರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 50 ಮಾವಿನ ಸಸಿಗಳನ್ನು ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ನೆಡಲಿದ್ದಾರೆ.
ಟ್ರೆಡ್ಮಿಲ್ನಿಂದ ಜಾರಿ 22 ವರ್ಷದ ಯುವತಿ ಜಿಮ್ನ ಕಿಟಕಿಯಿಂದ ಹೊರ ಬಿದ್ದು ಸಾವನ್ನಪ್ಪಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಮತ್ತು RO-ARO ಪರೀಕ್ಷೆಯಲ್ಲಿ ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಪರೀಕ್ಷೆಗಳ ಸುಗ್ರೀವಾಜ್ಞೆ 2024 ಅನ್ನು ಪರಿಚಯಿಸಲು ಸಿದ್ಧವಾಗಿದೆ.
ಓಟ್ಸ್ ಎಂಬುದು ಅತ್ಯಂತ ಹಳೆಯ ದವಸ ಧಾನ್ಯಗಳ ಪೈಕಿ ಒಂದು. ಇದರಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಸಾಕಷ್ಟು ಮೈಕ್ರೋ ಹಾಗೂ ಮ್ಯಾಕ್ರೋ ಪೋಷಕಾಂಶಗಳಿವೆ.
ವಿನಯ್ ಗೌಡಗೆ ಸಿನಿಮಾಗೆ ಬಂಪರ್ ಅವಕಾಶಗಳು ಅರಸಿ ಬರುತ್ತಿದ್ದು, ಅದರಲ್ಲಿ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕೂಡ ಒಂದು. ಇದರ ನಡುವೆ ಡೆವಿಲ್ ಸಿನಿಮಾ ಬಗ್ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಬ್ಲೂ-ಚಿಪ್ ಬ್ಯಾಂಕ್ ಷೇರುಗಳು ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಿಗೆ ಮಂಗಳವಾರ ಬೇಡಿಕೆ ಹೆಚ್ಚಾದ ಹಿನ್ನೆಲೆ ಬೆಂಚ್ ಮಾರ್ಕ್ ಸೆನ್ಸೆಕ್ಸ್ 78,000 ಮಟ್ಟವನ್ನು ದಾಟಿದರೆ, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.
ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.