Showing 20 of 20792 articles • Page 920 of 1040
ದೇಶದಲ್ಲಿನ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಯುವತಿಯೊಬ್ಬಳು ತನ್ನ ಕುಟುಂಬದಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದ್ದಾಳೆ.
ಅತ್ಯಂತ ಕಿರಿಯ ಸಂಸದೆ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ನ್ಯಾಯಾಲಯವು ಸಿಬಿಐಗೆ ಒಪ್ಪಿಸಿದೆ. ಕೇಜ್ರಿವಾಲ್ ಅವರನ್ನು ಇಂದು (ಜೂನ್ 26) ಸಿಬಿಐ ಬಂಧಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ಹೊಸೂರು ಗ್ರಾಮದಲ್ಲಿ ಕ್ವಾರಿಗಳಲ್ಲಿ ಚಿರತೆಗಳ ಓಡಾಟದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಿರತೆಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ತೀವ್ರ ನಿಗಾ ಇರಿಸಿದೆ.
18ನೇ ಲೋಕಸಭೆಯ ಸ್ಪೀಕರ್ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಪುರಾಣ ಪ್ರಸಿದ್ಧ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೇವಾಲಯದ 35 ಹುಂಡಿಗಳನ್ನು ಎಣಿಕೆ ಮಾಡಲಾಯಿತು. ಸುಮಾರು 1.69 ಕೋಟಿ ರೂ ಹಾಗೂ ಚಿನ್ನಾಭರಣ ಸಂಗ್ರಹವಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ವಿವಾದ ದೊಡ್ಡದಾಗುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ವಿಶ್ವ ಹಿಂದೂ ಪರಿಷದ್ ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ.
ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇವರು ಪ್ರತಿಷ್ಠಿತ ‘ಆರ್ಯಭಟ ಇಂಟರ್ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿ ಪ್ರಶಸ್ತಿ ಸ್ವೀಕರಿಸಿದರು.
ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳು ಸಿನಿಮಾ ಕ್ಷೇತ್ರದಲ್ಲೂ ಈಗ ಡಿವೋರ್ಸ್ ಸದ್ದು ಮಾಡುತ್ತಿದ್ದು ಸ್ಟಾರ್ ನಟ ಜಯಂ ರವಿ ತನ್ನ ಹೆಂಡತಿ ಆರತಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗ ಪೊಲೀಸ್ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ.
ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ರಕ್ಷಣೆ ಮಾಡಿದ್ದಾರೆ.
ಭಾರಿ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಹೊಸ ದರ ಅನ್ವಯವಾಗುತ್ತಿದೆ. ಹಳೆಯ ದರದ ಪ್ಯಾಕೆಟ್ಗಳನ್ನು ಹೊಸ ದರದಲ್ಲಿ ಮಾರಾಟ ಮಾಡುತ್ತಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೊಳಿಯಾರ್ ಘಟನೆ ಬಳಿಕ ಪೊಲೀಸರು ಅಮಾಯಕ ಮುಸ್ಲಿಂರನ್ನು ಅರೆಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಸ್ ಡಿಪಿಐ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.
ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಯುಜಿಸಿಇಟಿ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಲಾಗಿದೆ. 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಜೂನ್ 25ರಿಂದ ಜೂನ್ 29ರವರೆಗೆ ದಾಖಲೆಗಳ ಆಫ್ ಲೈನ್ ಪರಿಶೀಲನೆ ನಡೆಯಲಿದೆ.
ಸರ್ಕಾರದ ಮಾನ್ಯತೆಯಿಲ್ಲದೆ ನಡೆಯುತ್ತಿರುವ ಇಲ್ಲಿಯ 8 ತರಬೇತಿ ಕೇಂದ್ರ(ಕೋಚಿಂಗ್ ಸೆಂಟರ್)ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ನೋಟಿಸ್ ಜಾರಿಗೊಳಿಸಿದ್ದಾರೆ.
ಲಾಸ್ ವೇಗಾಸ್ನಲ್ಲಿರುವ ಅಪಾರ್ಟ್ ಮೆಂಟ್ಗಳ ಮೇಲೆ ನಡೆದ ಗುಂಡಿನ ದಾಳಿಯಿಂದಾಗಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.