Showing 20 of 20661 articles • Page 930 of 1034
ಜಿಲ್ಲೆಯ ಎಲ್ಲ ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ
ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ 50ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ಇಂದು ತಳ್ಳಿ ಹಾಕಿದೆ.
ಉಡುಪಿ ತಾಲೂಕು ವ್ಯಾಪ್ತಿಯಲ್ಲಿ 45 ಡೆಂಗಿ ಪ್ರಕರಣ ವರದಿಯಾಗಿದ್ದು, ರೋಗಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊಳ್ಳೆ ಉತ್ಪತ್ತಿಯಾಗುವ ತಾಣಗಳಿಗೆ ಔಷಧಿ ಸಿಂಪಡಿಸಲಾಗಿದೆ.
ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.
ಮುಸ್ಲಿಂರ ಪವಿತ್ರ ಸ್ಥಖವಾದ ಮೆಕ್ಕಾದಲ್ಲಿನ ಹಜ್ ಯಾತ್ರೆ ಸಮಯದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿಗೆ ದಾಖಲಾದ ಪರಿಣಾಮ ಸುಮಾರು 600ಕ್ಕೂ ಯಾತ್ರಿಗಳ ಪೈಕಿ 68 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ
ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಋಷಿಕೇಶ್ನಲ್ಲಿ ನಡೆದಿದೆ. ಮೃತರನ್ನು ಸಿದ್ದಯ್ಯ ಹಿರೇಮಠ (32) ಎಂದು ಗುರುತಿಸಲಾಗಿದೆ
ತಂದೆ ತಾಯಿ ಮಕ್ಕಳ ಜೀವಂತ ದೇವರು ಎನ್ನಲಾಗುತ್ತದೆ. ಮಗಳ ರಕ್ಷಣೆ ತಂದೆಯ ಮುಖ್ಯ ಗುರಿಯಾಗಿರುತ್ತದೆ. ಕೆಟ್ಟ ಜನರಿಂದ ಮಗಳ ರಕ್ಷಣೆ ಮಾಡಬೇಕಾದದ್ದು ತಂದೆಯ ಕರ್ತವ್ಯ.
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ.
ಇಂಧನ ಬೆಲೆಗಳಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಬಜಾಜ್ ಸಿಎನ್ಜಿ ಬೈಕ್ಗಳ ಆವಿಷ್ಕಾರಕ್ಕೆ ಮುಂದಾಗಿದ್ದು, ಜುಲೈ 5ರಂದು ಬಜಾಜ್ ತನ್ನ ಸಿಎನ್ಜಿ ಬೈಕ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ.
ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಈ ಬಾರಿ ಮೊದಲ ಪಂದ್ಯ ಇಂದು ನಡೆಯಲಿದ್ದು ಗುಂಪು ಹಂತದಲ್ಲಿ ಬಲಿಷ್ಠ ತಂಡಗಳಿಗೆ ಟಕ್ಕರ್ ಕೊಟ್ಟ ಅಫ್ಘಾನಿಸ್ತಾನ ಇಂದು ಭಾರತದ ಎದುರಾಳಿಯಾಗಲಿದೆ.
ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಹೊಯ್ಸಳ ನಗರದ ಬಡಾವಣೆಯಲ್ಲಿ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಭಾರತ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದ ಕನ್ನಡಿಗನ ಸಾವು ಕ್ರಿಕೆಟ್ ಪ್ರಿಯರಿಗೆ ನೋವು ನೀಡಿದೆ.
ನೀಟ್ ಪರೀಕ್ಷೆ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನೀಟ್-ಯುಜಿ, 2024ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಹೈಕೋರ್ಟ್ನಿಂದ ಸುಪ್ರೀಂ ಕೋರ್ಟ್ಗೆ ವರ್ಗಾಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಅವಹೇಳನ ಮಾಡುವ ರೀತಿಯಲ್ಲಿ ಸ್ಕಿಟ್ ಮಾಡಿದ್ದ ವಿದ್ಯಾರ್ಥಿಗಳಿಗೆ ಐಐಟಿ ಬಾಂಬೇ 1.2ಲಕ್ಷ ರೂ ದಂಡ ಹೇರಿದೆ.
ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನ ಪಿವಿಎಸ್ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ
ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಸೈಕಲ್ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ.
ಮದ್ಯ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್ಗಳ ಮದ್ಯದ ದರ ಕಡಿಮೆಯಾಗಲಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಮುಸುಕುಧಾರಿಗಳು ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಯತ್ನಿಸಿದ ಪ್ರಕರಣ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಪ್ರತಿಭಟನೆ ನಡೆಸಲಾಯಿತು.