Showing 20 of 20869 articles • Page 933 of 1044
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಶನಿವಾರ ಆರಂಭಗೊಂಡಿದ್ದು, ಭಾನುವಾರವೂ ಮೇಳ ಮುಂದುವರಿಯಲಿದೆ.
ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ವೇನಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 40 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.
ನೀವು ಹೆಚ್ಚು ಅಂದ್ರೆ 100, 200, 300 ರೂಪಾಯಿಗಳ ಬಿಸ್ಕೇಟ್ ತಿಂದಿರ್ತಿವೆ. ಇನ್ನೂ ಕೆಲವರು ಅದಕ್ಕಿಂತ ಹೆಚ್ಚಿನ ಬೆಲೆಯ ಬಿಸ್ಕತ್ತುಗಳನ್ನು ತಿಂದಿರ್ತಾರೆ. ಆದ್ರೆ ಈ ಬಿಸ್ಕತ್ತಿನ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ.
ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.
ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಅರ್ಜಿಯಲ್ಲಿನ ಯಾವುದೇ ಮಾಹಿತಿ ತಿದ್ದುಪಡಿಗೆ ಜೂನ್ 24ರ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ನಗರದ ತಾಯಿ ಮಕ್ಕಳ ಆಸ್ಪತ್ರೆಯ ಬಳಿ ಪೊಲೀಸ್ ಅಧಿಕಾರಿಗಳಂತೆ ನಟಿಸಿ ವಂಚಕರು ಮಹಿಳೆಯೊಬ್ಬರ 1.50 ಲಕ್ಷ ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ.
ಟಿ20 ವಿಶ್ವಕಪ್ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ.
ನೀಟ್ ಅಕ್ರಮಗಳ ಸಮಗ್ರ ತನಿಖೆಗಾಗಿ ‘ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಯಿತು’ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಗೋವಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 1 ರೂಪಾಯಿ ಹೆಚ್ಚಿಸಿದ ಸರ್ಕಾರ, ಡೀಸೆಲ್ ಬೆಲೆಯನ್ನು 36 ಪೈಸೆ ಹೆಚ್ಚಿಸಿದೆ.
ವಿರಾಟ್ ಕೊಹ್ಲಿ ಅವರು ಗಲ್ಲಿ ಕ್ರಿಕೆಟ್ನಲ್ಲಿ ಚೆಂಡನ್ನು ಹುಡುಕಿದಂತೆ ಸ್ಟೇಡಿಯಂನ ಸ್ಟ್ಯಾಂಡ್ವೊಂದರ ಒಳಗಡೆ ನುಗ್ಗಿ ಚೆಂಡು ಹುಡುಕುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.
ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇದೀಗ ಭಾರತದ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ಒಲಿಂಪಿಕ್ಸ್ನ ಪುರುಷರ ಸಿಂಗಲ್ಸ್ ಸ್ಪರ್ಧೆಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದ್ದಾರೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.
ನಟ ದರ್ಶನ್ ಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜುಲೈ 4ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ 2024ರ ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಭಾರತ 196 ರನ್ ಗಳಿಸುವ ಮೂಲಕ ಭರ್ಜರಿ ಜಯ ಗಳಿಸಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ನಿಮ್ಮ ನಿಶ್ಚಿತಾರ್ಥ, ಅಥವಾ ವಿವಾಹ ವಿಷಯ ಚರ್ಚೆಗಳು ಮುನ್ನೆಲೆಗೆ ಬರಬಹುದು. ಜೀವನವು ತುಂಬಾ ನೈಸರ್ಗಿಕ ಮತ್ತು ಸುಲಭ ಎಂದು ತೋರುತ್ತದೆ. ಮಕ್ಕಳ ಕೆಟ್ಟ ನಡವಳಿಕೆಯಿಂದಾಗಿ, ಮನಸ್ಸು ಖಿನ್ನತೆಗೆ ಒಳಗಾಗಬಹುದು.