Showing 20 of 20342 articles • Page 999 of 1018
ವಿಷ ಸೇವಿಸಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಭಾಗ್ಯಶ್ರೀ (38) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯ ಬೆರ್ಲಾ ಡೆವಲಪ್ಮೆಂಟ್ ಬ್ಲಾಕ್ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ನಡೆದಿದೆ.
ಚನ್ನಗಿರಿ ಲಾಕಪ್ ಡೆತ್ ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ.
ಹಾರುತ್ತಿದ್ದ ಇಂಡಿಗೋ ವಿಮಾನದ ಬಾಗಿಲು ತೆರೆಯಲು ಪ್ರಯಾಣಿಕನೊಬ್ಬ ಯತ್ನಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿದೆ.
ಗೇಮಿಂಗ್ ಜೋನ್ ಒಂದರಲ್ಲಿ ಇಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿದ ಘಟನೆ ಗುಜರಾತ್ನ ರಾಜ್ಕೋಟ್ ನಗರದಲ್ಲಿ ನಡೆದಿದೆ. ಮಹಿಳೆಯರು, ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಬಿಜೆಪಿ ಮುಖಂಡ ಸೂರ್ಯಕಾಂತ್ ಮಠಪತಿ ಹೇಳಿದರು.
ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ.
ಹಚ್ಚ ಹಸಿರಿನ ನಿಸರ್ಗದ ಮಡಿಲಲ್ಲಿರುವ ನಗರದ ಪಾಪನಾಶದ ಬಸವಗಿರಿಯ ಪುರುಷ ಕಟ್ಟೆ ಸಮೀಪದ ಸಮಾಧಿಯಲ್ಲಿ ‘ಅಕ್ಕ’ ಅನ್ನಪೂರ್ಣ ತಾಯಿ (61) ಅಂತ್ಯಕ್ರಿಯೆ.
ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಮುಳ್ಳೇರಿಯ ಸಮೀಪದ ನೆಟ್ಟಣಿಗೆಯಲ್ಲಿ ವೃದ್ಧ ರೋರ್ವರು ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ.
ಮೊದಲ ಐದು ಹಂತಗಳ ಮತದಾನ ನಂತರ ಸಂಪೂರ್ಣ ಮತದಾರರ ಸಂಖ್ಯೆಯನ್ನು ಭಾರತ ಚುನಾವಣಾ ಆಯೋಗ ಶನಿವಾರ ಬಿಡುಗಡೆ ಮಾಡಿದೆ. ಮತದಾನದ ಡೇಟಾವನ್ನು ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ಪಡೆಯಬಹುದು ಎಂದು ಹೇಳಿದೆ.
ಹುಬ್ಬಳ್ಳಿಯ ವಿರಾಪೂರ್ ಬಡಾವಣೆಯ ನಿವಾಸಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದವನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಬೀದರ್ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಇಂದು ನಡೆದ ಆರನೇ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳದ ಜಾರ್ಗ್ರಾಮ್ನ ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು ಅವರ ಮೇಲೆ ಪಶ್ಚಿಮ ಮಿಡ್ನಾಪುರದ ಮಂಗಲಪೋಟಾದಲ್ಲಿ ಜನ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇಗುಲ ಅಂತಾ ಕಟ್ಟಿಕೊಳ್ಳುತ್ತಾರೆ. ಯಾಕೆ ಅಂದರೆ ಮೋದಿ ಸ್ಟೇಟ್ಮೆಂಟ್ಗಳು ಹಾಗೆ ಇವೆ ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ ಮಾಡಿದ್ದಾರೆ.
ಸ್ಮಾರ್ಟ್ಫೋನ್ ತಯಾರಕ ಮೊಟೊರೊಲಾ Moto G04S ಹೆಸರಿನಲ್ಲಿ ಹೊಸ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲಿದೆ. ಈ ಫೋನ್ ಇದೇ ತಿಂಗಳ 30 ರಂದು ಬಿಡುಗಡೆಯಾಗಲಿದೆ.
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ ಸಿಂಧು ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ.
ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ.
ಅರ್ಧಂಬರ್ಧ ಬೇಯಿಸಿ ಕರಡಿ ಮಾಂಸ ತಿಂದ 12 ವರ್ಷದ ಬಾಲಕಿ ಸೇರಿ 5 ಕುಟುಂಬ ಸದಸ್ಯರಿಗೆ ಮೆದುಳಿನಲ್ಲಿ ಹುಳುಗಳು ಪತ್ತೆಯಾಗಿರುವುದು ಭಾರೀ ಆಘಾತ ಉಂಟುಮಾಡಿದ ಘಟನೆ ಅಮೆರಿಕದ ದಕ್ಷಿಣ ಡಕೋಟಾದಲ್ಲಿ ನಡೆದಿದೆ.
ಹುಚ್ಚು ನಾಯಿ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಕಚ್ಚಿ ಗಾಯಗೊಳಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆಯ ವೇಳೆಗೆ ಭಾರತಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಿದೆ.
ಸುಸಂಸ್ಕೃತ, ಬುದ್ಧಿವಂತರ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಉಡುಪಿಯ ಮುಖ್ಯರಸ್ತೆಯಲ್ಲಿ ರೌಡಿಗಳು ಮಾರಕಾಸ್ತ್ರ ಬಳಸಿ ಅಟ್ಟಹಾಸ ಮೆರೆದಿರುವ ಗ್ಯಾಂಗ್ ವಾರ್ ಘಟನೆ ರಾಜ್ಯದಲ್ಲಿ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.