Showing 20 of 24 posts • Page 1 of 2
ಬಾಗಲಕೋಟೆ: ಜನರ ಭಾವನೆಗಳ ವಿರುದ್ಧ ನಡೆದುಕೊಳ್ಳುತ್ತಿರುವ ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಆತಂಕ ಕಾಡುತ್ತಿದೆ. ಬಿಜೆಪಿ ಎದುರಿಸಲು ಎಲ್ಲ ಪಕ್ಷಗಳು ಒಂದಾಗಬೇಕಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಸ್ಥಗಿತಗೊಳಿಸಲಾಗಿದೆ. ಬಿಜೆಪಿಗಿಂತ ದೊಡ್ಡದಾಗಿ ಬೆಳೆದರೆ ಬಿಜೆಪಿಯವರು ಸಹಿಸಲ್ಲ. ಬಿಜೆಪಿಯು ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರ ಗಳಿಸಿರಬಹುದು. ಆದರೆ, ಅದು ಶಾಶ್ವತವಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. ‘ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನರ್ರಚನೆ ವಿಷಯಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷದಲ್ಲಿನ ಗೊಂದಲ […]
ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ನದಿಯ ಒಡಲನ್ನು ಕೊರೆದು ಮರಳು ಲೂಟಿ ಮಾಡುತ್ತಿದ್ದ ಅಡ್ಡೆಗಳ ಮೇಲೆ ಇಂದು ಏಕಕಾಲದಲ್ಲಿ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ವಾಹನ ಹಾಗೂ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಜಮಖಂಡಿಯ ಶಾಂತಿನಗರದ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಕಾಡ್ಗಿಚ್ಚು ವ್ಯಾಪಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಎಕರೆಗಿಂತಲೂ ಹೆಚ್ಚಿನ ಭೂಭಾಗ ಸುಟ್ಟು ಭಸ್ಮವಾಗಿದೆ. ಇನ್ನು ಗಾಳಿ ಹೆಚ್ಚಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ ಕಾರಣ ಅರಣ್ಯಕ್ಕೆ ವೇಗವಾಗಿ ಹಬ್ಬಿದ್ದು, ಬಹುಪಾಲು ಪ್ರದೇಶ ಸಂಪೂರ್ಣಬೆಂಕಿಗೆ ಆಹುತಿಯಾಗಿದೆ. ಈ ಪ್ರಕೃತಿಯ ವಿಕೋಪದಿಂದಾಗಿ ಇಲ್ಲಿನ ಅಮೂಲ್ಯವಾದ ಗಿಡಮೂಲಿಕೆಗಳು ಹಾಗೂ ವೈವಿಧ್ಯಮಯ ಸಸ್ಯರಾಶಿ ಅಗ್ನಿಪಾಲಾಗಿದ್ದು, ಸ್ಥಳೀಯ ವನ್ಯಜೀವಿಗಳಿಗೂ ಸಾಕಷ್ಟು ಹಾನಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ […]
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಸೈದಾಪೂರದ ಸಮೀರವಾಡಿ ಸಕ್ಕರೆ ಕಾರ್ಖಾನೆಯಲ್ಲಿ ನ.13ರಂದು ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೇಲರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 17 ಜನ ರೈತರ ಮುಖಂಡರು ಸೇರಿದಂತೆ 700 ರೈತರ ಮೇಲೆ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕ್ರೂಜರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕ್ರೂಜರ್ ನಲ್ಲಿದ್ದ 15 ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಜನ ಗಾಯಗೊಂಡು, ಏಳು ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ
ಸಹಪಾಠಿಗಳು ರ್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಆರು ವಿಷಯಗಳಲ್ಲಿ ಆರೂ ಫೇಲ್ ಆದ ಮಗನಿಗೆ ಕೇಟ್ ಕಟ್ ಮಾಡಿ ತಿನ್ನಿಸಿ ಸಂಭ್ರಮಿಸಿ ಮಗನಿಗೆ ಧೈರ್ಯ ತುಂಬಿದ ಪೋಷಕರು ಹಲವರಿಗೆ ಮಾದರಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಮುಡಾ ಆರೋಪದಿಂದ ಮುಕ್ತರಾಗಲಿ ಎಂದು ಅಭಿಮಾನಿ ದೇವರಿಗೆ ಹರಕೆ ಹೊತ್ತಿದ್ದಾರೆ. ಅವರಿಗೆ ಬಂದ ಎಲ್ಲ ಕಂಟಕ ದೂರ ಆಗಲಿ ಎಂದು ಸಿದ್ದರಾಮಯ್ಯ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.
ನನ್ನ ರಾಜಕೀಯ ಕ್ಷೇತ್ರವನ್ನು ಪ್ರಾರಂಭದಲ್ಲಿ ಸಹಕಾರಿ ಕ್ಷೇತ್ರದಿಂದ ಆರಂಭಿಸಿದ್ದೆ.ಅದಕ್ಕಾಗಿ ಅಂತಹ ಸಹಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ.
ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಲಾಗುತ್ತಿದ್ದು, ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಪಿಎಸ್ಐ ಅನಿಲ್ ಕುಂಬಾರ್ ಹೆಸರಿನಲ್ಲಿ ಐದು ನಕಲಿ ಫೇಸ್ಬುಕ್ ಖಾತೆಗಳು ಮತ್ತು ಒಂದು ಇನ್ಸ್ಟಾಗ್ರಾಮ್ ಖಾತೆಯನ್ನು ರಚಿಸಿದ್ದ ವ್ಯಕ್ತಿಯನ್ನು ಜಮಖಂಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಗಣೇಶ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಗೂ ಪ್ಯಾಲಿಸ್ತೇನ್ ಧ್ವಜ ಹಾರಿಸಲಾಗಿರುವ ಘಟನೆಗೆ ಸಂಬಂಧಪಟ್ಟಂತೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದಾರೆ.
ಶ್ರಾವಣದಲ್ಲಿ ರಥೋತ್ಸವ ಮುಗಿದು ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುತ್ತಿದ್ದ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ
ಕಲಾದಗಿ ಗ್ರಾಮದ ಯುವಕ ತೌಶೀಪ್ ಮೆಹ್ತರ್ ಎಂಬಾತ ಪಾಕಿಸ್ತಾನ ಪರ ವಾಟ್ಸಾಪ್ ಸ್ಟೇಟಸ್ ಹಾಕಿ ಪುಂಡತನ ಮೆರೆದ ಘಟನೆ ನಡೆದಿದೆ.
ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬಾಗಲಕೋಟೆಯ ಬನಹಟ್ಟಿ ಹೊರ ವಲಯದ ಹೊಸೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಅವಘಡ ಸಂಭವಿಸಿ ಲೈನ್ ಮ್ಯಾನ್ ಕಂಬದಲ್ಲಿಯೇ ನೇತಾಡಿದ ಭಯಾನಕ ಘಟನೆ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಲಮಟ್ಟಿ ಗ್ರಾಮದಲ್ಲಿ ನಡೆದಿದೆ.
ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.