ಬಾಗಲಕೋಟೆ : ಜಿಲ್ಲೆಯ ಮುಧೋಳ‌ ತಾಲೂಕಿನ ಬೆಳಗಲಿ ಗ್ರಾಮದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಪೆಟ್ರೋಲ್ ಸುರಿದು ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ . ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ತೋಟದಲ್ಲಿದ್ದ ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ ಜೈಬಾನ್​(55), ಶಬಾನ್​(25) ಎಂಬ ತಾಯಿ-ಮಗಳು ಬೆಂಕಿಯಲ್ಲಿ ಸುಟ್ಟು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ದಸ್ತಗಿರಿಸಾಬ್, ಸುಬಾನ್​​ಗೆ ಸುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿದ್ದಿಕ್ಕಿ ಎಂಬ ಯುವಕ ಪೆಟ್ರೋಲ್ ವಾಸನೆ ಬರುತ್ತಿದೆ ಎಂದು ಹೊರ ಬಂದು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು, ಬಾಗಲಕೋಟೆ ಎಸ್​​ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ