ಬಳ್ಳಾರಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.
ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಲಾಗಿದೆ ಎಂದು ಗಾದಿಲಿಂಗಪ್ಪ ಎನ್ನುವವರು ದೂರು ನೀಡಿದ್ದಾರೆ.

