Showing 20 of 113 posts • Page 1 of 6
ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಶಾಸಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಸ್ನ್ಯಾಕ್ಸ್ ಪ್ಯಾಕೆಟ್ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಟೋಲ್ ಸಮೀಪ ಸಂಭವಿಸಿದೆ.
ಬೆಳಗಾವಿಯ ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್ ನಡೆದಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಶಾಸಕರಿಂದ ಪಕ್ಷಕ್ಕೆ ದ್ರೋಹ ಮತ್ತು ವಂಚನೆಯಾಗಿರುವದು ನಿಜ. ಯಾರು ಮಾಡಿದ್ದಾರೆ ಎಂಬುದು ಇದುವರೆಗೆ ಗೊತ್ತಾಗಿಲ್ಲ. ಅದರ ಶೋಧನೆಯಲ್ಲಿದ್ದೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದರು.
ರಾಜ್ಯದಲ್ಲಿ ಹಿಂದೂಗಳನ್ನು ದುರ್ಬಲಗೊಳಿಸಲು ಹಾಗೂ ಹಿಂದೂ ಧರ್ಮ ವಿಭಜಿಸಲು ಸಚಿವ ಪ್ರಿಯಾಂಕಾ ಖರ್ಗೆ ಕುತಂತ್ರ ನಡೆಸಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.
ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ.
ವಿಧವೆ ಮೇಲಿನ ಮೋಹಕ್ಕೆ ಪಾಪಿ ಪತಿಯೊಬ್ಬ ದೇವಿ ಪ್ರಸಾದವೆಂದು ಹೇಳಿ ಪತ್ನಿಗೆ ಇಲಿ ಪಾಷಾಣ ಕುಡಿಸಿ ಕೊಲೆಗೈದಿರುವ ಘಟನೆ ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮದಲ್ಲಿ ನಡೆದಿದೆ.
ಮದುವೆಯಾದ ಒಂದು ತಿಂಗಳಲ್ಲೇ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಹಾದ್ವಾರ ರಸ್ತೆಯ ಲಕ್ಷ್ಮೀ ಗಲ್ಲಿಯಲ್ಲಿ ಜೂ. 9ರ ಮಂಗಳವಾರ ನಡೆದಿದೆ.
ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ ನಡೆದಿದೆ.
ಏಳು ವರ್ಷದ ಬಾಲಕನೊಬ್ಬ ಕೃಷ್ಣಾ ನದಿ ದಡದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಯಬಾಗ ತಾಲ್ಲೂಕಿನ ಶಿರಗೂರ ಗ್ರಾಮದ ಸಮೀಪ ನಡೆದಿದೆ.
ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಫೇಸ್ಬುಕ್ ಮೂಲಕ ಪರಿಚಯವಾಗಿ ಪ್ರೀತಿ ನಾಟಕವಾಡಿ, ವಿದೇಶದಿಂದ ಕೋಟಿ ಮೌಲ್ಯದ ಉಡುಗೊರೆ ಕಳುಹಿಸಿರುವುದಾಗಿ ನಂಬಿಸಿ ವ್ಯಕ್ತಿಯಿಂದ 7.05 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ರಿಕ್ಷಾ, ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ಲಾರಿ, ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಹುಕ್ಕೇರಿ ತಾಲೂಕಿನ ಸಂಕೇಶ್ವರ-ಗೋಟುರ ರಸ್ತೆಯಲ್ಲಿ ನಡೆದಿದೆ.
ಚಿಕ್ಕೋಡಿಯಲ್ಲಿ ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.
ಮೂವರು ಯುವಕರ ಮೇಲೆ ತಂಡವೊಂದು ತಲವಾರು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಗರದ ಕಪಿಲೇಶ್ವರ ದೇವಸ್ಥಾನದ ಹಿಂಭಾಗದ ಹೊಂಡದ ಬಳಿಯ ಗೋಡೆ ಕುಸಿದು ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.