ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ರಾಜ್ಯ ಸರಕಾರದ ವಿರುದ್ಧ ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿಯವರು ಏನು ಮಾಡಿದ್ದಾರೆ ಎಂಬ ಒಂದು ಪಟ್ಟಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

