ಬೆಳಗಾವಿ: 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ‌ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ ಎಲ್ ಕೆಜಿಯಿಂದ 8ನೇ ತರಗತಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.
ಇನ್ನು ಸ್ಥಲಕ್ಕೆ ಪೊಲೀಸ್‌ ಸಿಬ್ಬಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.